ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಕಲ್ಯಾಣಪುರದಲ್ಲಿ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯಾಚರಿಸುತ್ತಿರುವ ತ್ರಿಶಾ ಪ.ಪೂ ಕಾಲೇಜು ಮೂರನೇ ವರ್ಷದಲ್ಲೂ ಶೇ.100 ಫಲಿತಾಂಶ ದಾಖಲಿಸಿದೆ.
ವಿಜ್ಞಾನ ವಿಭಾಗದ ವೀಕ್ಷಿತ್ ಎಸ್. ಶೆಟ್ಟಿ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ಸ್ಥಾನ, ನವನೀತ್ ಪೈ 590 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ಸ್ಥಾನ ಪಡೆದು ಸಂಸ್ಥೆಗೆ ಮತ್ತು ಹೆತ್ತವರಿಗೆ ಕೀರ್ತಿ ತಂದಿದ್ದಾರೆ ಹಾಗೂ ನಿನಾದ್. ಆರ್. ನಾಯ್ಕ್ 588, ಪೂಜಿತ ಶೆಣೈ 587, ಪಾವನಿ 580, ಮೇಘನಾ ಎಸ್. ಕೆ. 578 ಅಂಕಗಳನ್ನು ಗಳಿಸಿರುತ್ತಾರೆ. 24 ವಿದ್ಯಾರ್ಥಿಗಳು 95% ಕ್ಕಿಂತ ಅಧಿಕ, 77 ವಿದ್ಯಾರ್ಥಿಗಳು 90 ಶೇಕಡಾ ಕ್ಕಿಂತ ಅಧಿಕ, 108 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಗಳಿಸಿದ್ದಾರೆ. 45 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಭೌತಶಾಸ್ತ್ರದಲ್ಲಿ 2 ವಿದ್ಯಾರ್ಥಿಗಳು, ಗಣಿತಶಾಸ್ತ್ರದಲ್ಲಿ9, ಗಣಕ ವಿಜ್ಞಾನದಲ್ಲಿ15, ಕನ್ನಡದಲ್ಲಿ 01, ಹಿಂದಿಯಲ್ಲಿ 01, ಸಂಸ್ಕೃತದಲ್ಲಿ 19 ವಿದ್ಯಾರ್ಥಿಗಳು ವಿಷಯವಾರು ನೂರಕ್ಕೆ ನೂರು ಅಂಕಗಳಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಮತ್ತು ತ್ರಿಶಾ ಫೌಂಡೇಶನ್ ನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಉಪನ್ಯಾಸಕೇತರ ವರ್ಗದವರು ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

