Site icon Kundapra.com ಕುಂದಾಪ್ರ ಡಾಟ್ ಕಾಂ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯಕ್ಕೆ ಶೇ.98.64 ಫಲಿತಾಂಶ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ
: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಶೇ.98.64 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ 147 ವಿದ್ಯಾರ್ಥಿಗಳಲ್ಲಿ 145 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 63 ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ, 69 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 12 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಮತ್ತು ಓರ್ವ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ.

ಸಂಸ್ಕೃತ ವಿಷಯದಲ್ಲಿ 16 ವಿದ್ಯಾರ್ಥಿಗಳು 100 ಅಂಕಗಳನ್ನು ಪಡೆದಿದ್ದರೆ, ವ್ಯವಹಾರ ಅಧ್ಯಯನದಲ್ಲಿ 9, ಲೆಕ್ಕಶಾಸ್ತ್ರದಲ್ಲಿ 3, ಗಣಿತ, ಭೌತಶಾಸ್ತ್ರ ಮತ್ತು ಕಂಪ್ಯೂಟರ್ ಸಾಯನ್ಸ್ನಲ್ಲಿ ತಲಾ ಇಬ್ಬರು ವಿದ್ಯಾರ್ಥಿಗಳು, ಸಂಖ್ಯಾಶಾಸ್ತ್ರ, ಅರ್ಥಶಾಸ್ತç ಮತ್ತು ಕನ್ನಡದಲ್ಲಿ ತಲಾ ಒಬ್ಬ ವಿದ್ಯಾರ್ಥಿ 100 ಅಂಕಗಳನ್ನು ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 594 ಅಂಕಗಳನ್ನು ಪಡೆದಿರುವ ಗೌತಮಿ ಜಿ. ನಾಯಕ್ ಕಾಲೇಜಿನ ಅಗ್ರ ಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ವಿಜ್ಞಾನ ವಿಭಾಗದಲ್ಲಿ ಪ್ರತೀಕ್ ಕೊಠಾರಿ 590 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಪ್ರತೀಕ್ ಕೊಠಾರಿ (590), ಆದಿತ್ಯ ಎಸ್. ಪೂಜಾರಿ (589), ನವ್ಯಶ್ರೀ ಕೆ. (586), ಉತ್ತಮ ಸಾಧನೆ ಮಾಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಗೌತಮಿ ಜಿ. ನಾಯಕ್ (594), ಧನ್ಯ ಯು. (593), ಸಿಂಧು (592), ಸಿಂಚನಾ (589), ದಿಯಾ ಜಿ.ಪೈ (586) ಮತ್ತು ಅಮೃತಾ (586) ಉತ್ತಮ ಸಾಧನೆ ಮಾಡಿದ್ದಾರೆ.

Exit mobile version