Site icon Kundapra.com ಕುಂದಾಪ್ರ ಡಾಟ್ ಕಾಂ

ಸ್ಕೂಟಿಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿಯಾಗಿ ಮಹಿಳೆ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಉಡುಪಿ ಕಡೆ ಇಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿಯೊಂದು ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಬೀಜಾಡಿ ಡಿವೈಡರ್ ಬಳಿ ನಡೆದಿದೆ.

ಮೃತರನ್ನು ವಡ್ಡರ್ಸೆ ನೀರುಕೊಡ್ಲು ನಿವಾಸಿ ದಿ. ಮಂಜುನಾಥ್ ಆಚಾರಿ ಅವರ ಪತ್ನಿ ಶಾರದಾ (55) ಎಂದು ಗುರುತಿಸಲಾಗಿದೆ.

ಶಾರದಾ ಅವರು ಮಗನ ಜೊತೆ ಕೋಟೇಶ್ವರ ಅಂಕದಕಟ್ಟೆಯಲ್ಲಿರುವ ತಮ್ಮ ತಂಗಿಯ ಮನೆಗೆ ತೆರಳುತ್ತಿದ್ದರೆಂದು ತಿಳಿದು ಬಂದಿದೆ. ಈ ಅಪಘಾತದ ತೀವ್ರತೆಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿ ಓಡಿಸುತ್ತಿದ್ದ ಮಗ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಕುಂದಾಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version