Kundapra.com ಕುಂದಾಪ್ರ ಡಾಟ್ ಕಾಂ

ಶಿಕ್ಷಕ, ಸಾಹಿತಿ ನರೇಂದ್ರ ಕುಮಾರ್ ಕೋಟ ಅವರಿಗೆ ಹುಟ್ಟೂರ ಸಾಹಿತ್ಯ ಸಾಧಕ ಶ್ರೀ ಪುರಸ್ಕಾರ ಪ್ರದಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ರಾಜ್ಯ ಪ್ರಶಸ್ತಿ ಪುರಸ್ಕೃತ ನರೇಂದ್ರ ಕುಮಾರ್ ಕೋಟ ಅವರಿಗೆ ಹುಟ್ಟೂರ ಸಾಹಿತ್ಯ ಸಾಧಕ ಶ್ರೀ ಪುರಸ್ಕಾರ ನೀಡಿ ಗೌರವಿಸಲಾಯಿತು.

ಇತ್ತೀಚಿಗೆ ಕೋಟ ಶಾಲೆಯ ಪೂರ್ವ ಕಟ್ಟದ ಸಭಾಂಗಣದಲ್ಲಿ ಕೋಟದ ಮಿತ್ರ ಮಂಡಳಿ ಆಶ್ರಯದಲ್ಲಿನಡೆದ ಕಾರ್ಯಕ್ರಮದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಾಗಿದೆ.

ಈ ಸಂದರ್ಭದಲ್ಲಿ ರಿಷಿಕಾ ದೇವಾಡಿಗ ಹಾಗೂ ಪ್ರಥ್ವಿ ಪೂಜಾರಿ ಅವರಿಗೆ ಅಣ್ಣಾಜಿ ಬಲ್ಲಾಳ್ ಬಾಲ ಪುರಸ್ಕಾರ ಪ್ರದಾನಿಸಲಾಯಿತು. ಅಂಬಲಪಾಡಿ ಕ್ಷೇತ್ರದ ಧರ್ಮದರ್ಶಿ ಡಾ. ವಿಜಯ ಬಲ್ಲಾಳ್ ಅವರು ಸಮ್ಮಾನ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಗೀತಾನಂದ ಟ್ರಸ್ಟ್ ಪ್ರವರ್ತಕ ಆನಂದ್ ಸಿ. ಕುಂದರ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಾರ್ಕಳ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ನಿವೃತ್ತ ಶಿಕ್ಷಕ ನರಸಿಂಹ ಐತಾಳ, ಕೋಟ ವಿವೇಕ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ವೆಂಕಟೇಶ ಉಡುಪ, ಕಸಾಪ ತಾಲೂಕು ಅಧ್ಯಕ್ಷ ರಾಮಚಂದ್ರ ಐತಾಳ, ನಿವೃತ್ತ ಮುಖ್ಯ ಶಿಕ್ಷಕ ಶ್ರೀಪತಿ ಹೇರ್ಳೆ , ಮಹಾಲಕ್ಷ್ಮೀ ಸೋಮಯಾಜಿ ಉಪಸ್ಥಿತರಿದ್ದರು.

ಹಿರೇ ಮಹಾಲಿಂಗೇಶ್ವರ ದೇಗುಲ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀನಿವಾಸ ಅಡಿಗ ಸ್ವಾಗತಿಸಿದರು. ಸುಮನಾ ಹೇರ್ಳೆ ಕಾರ್ಯಕ್ರಮ ನಿರೂಪಿಸಿ, ನಿವೃತ್ತ ಬ್ಯಾಂಕ್ ಅಧಿಕಾರಿ ಮಂಜುನಾಥ ಉಪಾಧ್ಯ ವಂದಿಸಿದರು.

Exit mobile version