ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ವಕೀಲರ ಸಂಘದ ಪದಗ್ರಹಣ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
ಕಾರ್ಯಕ್ರಮವನ್ನು ಮಾನ್ಯ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಿರಣ್ ಗಂಗಣ್ಣನವರ್ ಅವರು ಹಾಗೂ ಮಾನ್ಯ ಸಿವಿಲ್ ನ್ಯಾಯಾಧೀಶರಾದ ಕೆ. ಯು. ವಿದ್ಯಾ ಎ. ಎಸ್. ಅವರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭಾಶಯ ಕೋರಿದರು.

ಮಾನ್ಯ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರು ‘ವಕಾಲತ್ತಿನ ಪ್ರಮುಖ ಕೌಶಲ್ಯಗಳು’ಕುರಿತು ಉಪನ್ಯಾಸ ನೀಡಿ, ಎಲ್ಲಾ ವಕೀಲರಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಕಾರ್ಯಕ್ರಮದ ಆರಂಭದಲ್ಲಿ ಉಪಾಧ್ಯಕ್ಷರು ಸ್ವಾಗತ ಕೋರಿದರು. ಗಣೇಶ್ ಮೆಸ್ತ ಅವರು ಪ್ರಸ್ತಾವಿಕ ನುಡಿ ಮಂಡಿಸಿದರು.
ಈ ಸಂದರ್ಭದಲ್ಲಿ ಮಾನ್ಯ ನ್ಯಾಯಮೂರ್ತಿ ಇ. ಎಸ್. ಇಂದಿರೇಶ್ ಅವರನ್ನು ಬಾರ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಲಾಯಿತು. ಅವರ ಅಮೂಲ್ಯ ಮಾರ್ಗದರ್ಶನ ಮತ್ತು ಗೌರವಾನ್ವಿತ ಹಾಜರಾತಿಗೆ ಕೃತಜ್ಞತೆ ಸೂಚಿಸಲಾಯಿತು.
ಕಾರ್ಯದರ್ಶಿ ಲಿಂಗಪ್ಪ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.