Kundapra.com ಕುಂದಾಪ್ರ ಡಾಟ್ ಕಾಂ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 9ನೇ ರ‍್ಯಾಂಕ್‌ ಪಡೆದ ಸಿಂಧು ಖಾರ್ವಿ, ಪ್ರತೀಕ್ ಕೊಠಾರಿ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 9ನೇ ರ‍್ಯಾಂಕ್‌ ಪಡೆದ ಸಿಂಧು ಖಾರ್ವಿ ಮತ್ತು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 9ನೇ ರ‍್ಯಾಂಕ್‌ ಪಡೆದ ಪ್ರತೀಕ್ ಕೊಠಾರಿ ಅವರನ್ನು ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಗಂಗೊಳ್ಳಿ ಮತ್ತು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ವತಿಯಿಂದ ಅವರ ಸ್ವಗೃಹದಲ್ಲಿ ಪ್ರತ್ಯೇಕವಾಗಿ ಶನಿವಾರ ಸನ್ಮಾನಿಸಿ ಗೌರವಿಸಲಾಯಿತು.

ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ, ಕಾರ್ಯದರ್ಶಿ ಎಚ್. ಗಣೇಶ ಕಾಮತ್, ಖಜಾಂಚಿ ಎನ್. ಅಶ್ವಿನ್ ನಾಯಕ್, ಕಾಲೇಜಿನ ಸಂಚಾಲಕ ಎನ್. ಸದಾಶಿವ ನಾಯಕ್ ಮತ್ತು ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅವರು ರ‍್ಯಾಂಕ್‌ ವಿಜೇತ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಿದರು.

Exit mobile version