Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದ ಅರ್ಚಕ ಬಾಬಣ್ಣ ಭಟ್‌ ನಿಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ
: ಪ್ರಸಿದ್ಧ ಅರ್ಚಕ ಮನೆತನದ ಗಂಗೊಳ್ಳಿ ನಿವಾಸಿ ದಿ. ಜಿ. ರಾಮನಾಥ ಭಟ್ ಅವರ ಪುತ್ರ ಬಾಬಣ್ಣ ಭಟ್ (71) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು.

ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಅವರು ಧಾರ್ಮಿಕ ಚಟುವಟಿಕೆಗಳಲ್ಲಿ ಸದಾ ತೊಡಗಿಸಿಕೊಂಡು ಜನಾನುರಾಗಿದ್ದರು.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Exit mobile version