Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಕಲಚೇತನರಿಗೆ ಯುಡಿಐಡಿ ಕಾರ್ಡ್ ಮೌಲ್ಯಮಾಪನ ಶಿಬಿರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಕುಂದಾಪುರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಕಲಚೇತನರಿಗೆ ಯುಡಿಐಡಿ ಕಾರ್ಡ್ ಪಡೆಯಲು ಮೌಲ್ಯಮಾಪನ ಶಿಬಿರ ಸೋಮವಾರ ನಡೆಯಿತು.

ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಶಿಬಿರ ಉದ್ಘಾಟಿಸಿ ಮಾತನಾಡಿ, ದೇಶಾದ್ಯಂತ ವಿಕಲಚೇತನರಿಗೆ ಯುಡಿಐಡಿ ಏಕೈಕ ಮತ್ತು ಸಾರ್ವತ್ರಿಕ ಗುರುತು ಪತ್ರವಾಗಿ ಕಾರ್ಯನಿರ್ವಹಿಸುತ್ತದೆ. ಇದರಿಂದ ಸರಕಾರಿ ಸೌಲಭ್ಯ ಮತ್ತು ರಿಯಾಯಿತಿ ಸುಲಭವಾಗಿ ಇದು ಪಡೆಯಲು ಸಹಕಾರಿಯಾಗಿದೆ ಎಂದರು.

ಶಾಸಕ ಕಿರಣ್ ಕುಮಾರ ಕೊಡ್ಗಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುಡಿಐಡಿ ಕಾರ್ಡ್ ವಿಕಲಚೇತನರ ಸಬಲೀಕರಣಕ್ಕೆ ಅವರಿಗೆ ಸಮಾಜದಲ್ಲಿ ಸಮಾನ ಅವಕಾಶಗಳನ್ನು ಒದಗಿಸಲು ಮತ್ತು ಅವರ ಜೀವನವನ್ನು ಸುಲಭಗೊಳಿಸಲು ಪ್ರಮುಖ ಹೆಜ್ಜೆ ಆಗಿದೆ ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ, ಆಡಳಿತ ವೈದ್ಯಾಧಿ ಕಾರಿ ಡಾ. ಚಂದ್ರ ಮರಕಲ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಘಟಕ ಸಭಾಪತಿ ಎಸ್. ಜಯಕರ ಶೆಟ್ಟಿ, ನಿರ್ದೇಶಕ ಶಿವರಾಮ ಶೆಟ್ಟಿ, ಫಿಸಿಷಿಯನ್‌ ಡಾ. ನಾಗೇಶ್‌, ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಅಧಿಕಾರಿ ರತ್ನ ಸುವರ್ಣ, ರೆಡ್ಕ್ರಾಸ್‌ ಸೊಸೈಟಿ ಉಡುಪಿ ಕಾರ್ಯದರ್ಶಿ ಡಾ. ಗಣನಾಥ ಭಟ್‌ ಎಕ್ಕಾರು ಮತ್ತಿತರರು ಉಪಸ್ಥಿತರಿದ್ದರು.

Exit mobile version