Site icon Kundapra.com ಕುಂದಾಪ್ರ ಡಾಟ್ ಕಾಂ

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇವರ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಖಾಸಗಿ ಕೃಷಿ ಕಾಲೇಜುಗಳ ಸಂಯೋಜನೆಗಾಗಿ ಆಸಕ್ತಿ ಹೊಂದಿರುವ ಹಾಗೂ ರಾಜ್ಯದ ಸೊಸೈಟಿ ನೊಂದಣಿ ಕಾಯ್ದೆಯಡಿಯಲ್ಲಿ ನೋಂದಾಯಿಸಲಾದ ಮಂಡಳಿಗಳು, ಸೊಸೈಟಿಗಳು ಹಾಗೂ ಟ್ರಸ್ಟ್ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಸಂಸ್ಥೆಗಳು ಬಿ.ಎಸ್ಸಿ ಕೃಷಿ, ಬಿ.ಟೆಕ್ ಕೃಷಿ ಇಂಜಿನಿಯರಿಂಗ್, ಬಿ.ಟೆಕ್ ಕೃಷಿ ಬಯೋಟೆಕ್ನಾಲಜಿ, ಬಿ.ಟೆಕ್ ಫುಡ್ ಟೆಕ್ನಾಲಜಿ, ಬಿ.ಎಸ್ಸಿ ಅರಣ್ಯ, ಬಿ.ಎಸ್ಸಿ ಕಮ್ಯೂನಿಟಿ ವಿಜ್ಞಾನ, ಬಿ.ಎಸ್ಸಿ ಫುಡ್ ನ್ಯೂಟ್ರೀಶನ್ ಮತ್ತು ಡಯಟ್ರಿಕ್ಸ್, ಬಿ.ಎಸ್ಸಿ ತೋಟಗಾರಿಕೆ ಮತ್ತು ಬಿ.ಎಸ್ಸಿ ರೇಷ್ಮೆ ಕೃಷಿ ಪದವಿ ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದಾಗಿದೆ.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಫಿಲಿಯೇಶನ್‌ಗಾಗಿ ಕನಿಷ್ಠ ಮಾನದಂಡಗಳನ್ನು www.uahs.edu.in  ಜಾಲತಾಣದಲ್ಲಿ ಪ್ರಕಟಿಸಿದ್ದು, ಅಧಿಸೂಚಿಸಿದ ಮಾನದಂಡಗಳಂತೆ ಪ್ರಸಕ್ತ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಾಲೇಜು ಅಫಿಲಿಯೇಶನ್ ಬಯಸುವ ಹಾಗೂ ಕಾನೂನು ಬದ್ಧ ಶೈಕ್ಷಣಿಕ ಸಂಸ್ಥೆಗಳು ಮೇ.6ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version