Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಹ್ಯಾಕಥಾನ್ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ “ಹ್ಯಾಕಥಾನ್” ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಪ್ರಾಯೋಗಿಕ ಕಲಿಕೆಗೆ ನಮ್ಮ ಸಂಸ್ಥೆಯಲ್ಲಿ ಮನ್ನಣೆಯನ್ನು ನೀಡಲಾಗುತ್ತಿದೆ. ಹ್ಯಾಕಥಾನ್ ಪ್ರಾಯೋಗಿಕ ಕಲಿಕೆಗೆ ಆದ್ಯತೆ ನೀಡುವ ಮಹತ್ವದ ಕಾರ್ಯಕ್ರಮ. ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಕೌಶಲ್ಯಗಳನ್ನು ವರ್ಧಿಸಲು ಇಂತಹ ಕಾರ್ಯಕ್ರಮ ಅತ್ಯಂತ ಉಪಯುಕ್ತ ಎಂದರು.

ಹ್ಯಾಕಥಾನ್‌ನಲ್ಲಿ ವಿದ್ಯಾರ್ಥಿಗಳನ್ನು ತಂಡಗಳಾಗಿ ವಿಭಜಿಸಿ, ತಂತ್ರಜ್ಞಾನವನ್ನು ಬಳಸಿಕೊಂಡು ನೈಜ ಜೀವನದ ವಿವಿಧ ತಂತ್ರಜ್ಞಾನ ಸಂಬAಧಿತ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಲು ಅವಕಾಶ ಕಲ್ಪಿಸಲಾಯಿತು. 24 ಗಂಟೆಗಳ ಕಾಲ ನಡೆದ ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ ಹಾಗೂ ತಾಂತ್ರಿಕ ಕೌಶಲ್ಯಗಳನ್ನು ಪ್ರದರ್ಶಿಸಿದರು.

ಬಿಸಿಎ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಅವರು ಹ್ಯಾಕಥಾನ್ ಕಾರ್ಯಕ್ರಮದ ಉದ್ದೇಶಗಳು ಮತ್ತು ಅದರ ಪ್ರಾಮುಖ್ಯತೆ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ವಿಲ್ಮಾ ಶೆರಲ್ ಹಾಗೂ ಶ್ರೀ ಪ್ರಣಮ್ ಆರ್. ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಮನಿಷಾ ಪ್ರಾರ್ಥಿಸಿದರು. ರಶ್ಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ರಕ್ಷಾ ಸ್ವಾಗತಿಸಿ, ವಾಣಿಶ್ರೀ ವಂದಿಸಿದರು.

Exit mobile version