Site icon Kundapra.com ಕುಂದಾಪ್ರ ಡಾಟ್ ಕಾಂ

ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪಿ.ಯು.ಸಿ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದ್ದು, ಹೊಸ ಅರ್ಜಿಗಳನ್ನು ತಾಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ಮಾಡಲು ಜೂ.17 ಕೊನೆಯ ದಿನ, ಜೂ.19 ರಂದು ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಜೂ. 25 ರ ವರೆಗೆ ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಕೊನೆಯ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ. 

Exit mobile version