Site icon Kundapra.com ಕುಂದಾಪ್ರ ಡಾಟ್ ಕಾಂ

ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕುಂದಾಪುರ ತಾಲೂಕಿನ ತೆಕ್ಕಟ್ಟೆ ವಲಯದ ಕುಂಭಾಶಿ ಬಿ. ಕಾರ್ಯಕ್ಷೇತ್ರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರವಾಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾಲಾ ಕಟ್ಟಡ ನಿರ್ಮಾಣ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ ಇತ್ತೀಚಿಗೆ ಜರಗಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂದಾಪುರ ತಾಲೂಕಿನ ಯೋಜನಾಧಿಕಾರಿ ಸುಧೀರ್, ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ಯಾಮಲಾ ಟೀಚರ್ ಅವರಿಗೆ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು.

ಈ ವೇಳೆ ಜನ ಜಾಗೃತಿ ಸದಸ್ಯರಾದ ಸುಧಾಕರ್ ಶೆಟ್ಟಿ ತೆಕ್ಕಟ್ಟೆ ಹಾಗೂ  ತೆಕ್ಕಟ್ಟೆ ವಲಯದ ಮೇಲ್ವಿಚಾರಕರಾದ ಹೇಮಲತಾ ಹಾಗೂ ಊರಿನ ಗಣ್ಯರಾದ ಎಂ ರಾಮ ಕಾಂಚನ್ ಕೊರವಡಿ ಹಾಗೂ ಶಿಕ್ಷಕರಾದ  ಶೋಭಾ, ನೇತ್ರ  ರಕ್ಷ್ಮಿ , ಸುದೀಪ್, ಎಸ್ .ಡಿ. ಎಂ. ಸಿ ಉಪಾಧ್ಯಕ್ಷರಾದ ಸತ್ಯನಾರಾಯಣ, ಎಸ್ ಡಿ ಎಂ ಸಿ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಕುಂಭಾಶಿ ಬಿ. ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸ್ಥಳೀಯ ಒಕ್ಕೂಟದ ಸೇವಾ ಪ್ರತಿನಿಧಿ ಪ್ರೇಮಾ ವಿಜಯ್ ನಿರೂಪಿಸಿ, ಶಾಲಾ ಮುಖ್ಯ ಶಿಕ್ಷಕರಾದ ಶ್ಯಾಮಲಾ ಟೀಚರ್ ಸ್ವಾಗತಿಸಿ, ತೆಕ್ಕಟೆ ಬಿ. ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸಾರಿಕ ಧನ್ಯವಾದ ಗೈದರು.

Exit mobile version