ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಮುಂತಾದ ವೃತ್ತಿಪರ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಬಹುಮಾನ ಹಣವನ್ನು ಮಂಜೂರು ಮಾಡುವ ಸಲುವಾಗಿ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗೆ ಅರ್ಜಿಯನ್ನು ಹಾಗೂ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ, ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇವರಿಗೆ ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

