Site icon Kundapra.com ಕುಂದಾಪ್ರ ಡಾಟ್ ಕಾಂ

ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಇಬ್ಬರೂ 602 ಅಂಕ ಪಡೆದ ವಂಡ್ಸೆಯ ಅವಳಿ ಸಹೋದರಿಯರು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅವಳಿ ಸಹೋದರಿಯರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಮಾನ ಅಂಕ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. 

ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ-ನೆಂಪು ಇಲ್ಲಿನ 10ನೇ ತರಗತಿ ವಿದ್ಯಾರ್ಥಿನಿಯರಾದ ಸಮೀಕ್ಷಾ ಎಸ್. ಪೂಜಾರಿ ಹಾಗೂ ಪ್ರತೀಕ್ಷಾ ಎಸ್. ಪೂಜಾರಿ ಇಬ್ಬರೂ ಕೂಡಾ 602 ಅಂಕ ಪಡೆದಿದ್ದಾರೆ. 

ಸಹೋದರಿಯರು 7ನೇ ತರಗತಿ ತನಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯಲ್ಲಿ ಓದಿದ್ದು, ಬಳಿಕ ಕೆಪಿಎಸ್ ನೆಂಪುವಿನಲ್ಲಿ ಪ್ರೌಢಶಿಕ್ಷಣ ಮುಂದುವರಿಸಿದ್ದರು.

ಅವರು ಬಸ್ರೂರು ಸರಕಾರಿ ಪ್ರೌಢಶಾಲೆಯ ಶಿಕ್ಷಕ, ಇಸಿಓ ಆಗಿ ಕರ್ತವ್ಯ ನಿರ್ವಹಿಸಿದ ಸಂತೋಷ್ ಹಾಗೂ ಪ್ರೇಮಾ ಅವರ ಪುತ್ರಿಯರು.

Exit mobile version