Site icon Kundapra.com ಕುಂದಾಪ್ರ ಡಾಟ್ ಕಾಂ

ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಿಕ್ಷಣದ ಗುಣಮಟ್ಟ, ಶಿಸ್ತಿನ ವಾತಾವರಣ ಹಾಗೂ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಹೆಸರು ವಾಸಿಯಾದ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ತನ್ನ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿ 2025–26ನೇ ಶೈಕ್ಷಣಿಕ ವರ್ಷದಲ್ಲಿ ಐಸಿಎಸ್ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ. 

ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಈ ಶಾಲೆ, 23 ವರ್ಷದಿಂದ ನೂರಕ್ಕೆ ನೂರು ಫಲಿತಾಂಶ ದಾಖಲಿಸಿರುವ ಸಾಧನೆ ಮಾಡಿರುವುದು ಕುಂದಾಪುರ ತಾಲ್ಲೂಕಿನ ಏಕೈಕ ಐಸಿಎಸ್ಇ ಪಠ್ಯಕ್ರಮದ ಶಾಲೆ ಇದಾಗಿದೆ.

ಈ ವಿದ್ಯಾ ಸಂಸ್ಥೆಯಲ್ಲಿ ರಾಜ್ಯ ಮತ್ತು ಹೊರರಾಜ್ಯಗಳ ಸುಮಾರು 1839 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳಲ್ಲಿ 683 ಮಕ್ಕಳಿಗೆ ಸುಸಜ್ಜಿತ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ವಸತಿ, ಪಾಠಶಾಲೆ, ಶೈಕ್ಷಣಿಕ ನೆರವು, ಶಿಸ್ತು – ಎಲ್ಲವನ್ನೂ ಒಟ್ಟಿಗೆ ನೀಡುತ್ತಿರುವ ಈ ಸಂಸ್ಥೆ ಈ ಭಾಗದ ಮಾದರಿ ವಸತಿ ಶಾಲೆಯಾಗಿ ಹೊರಹೊಮ್ಮಿದೆ.

ಈ ವರ್ಷ 270 ವಿದ್ಯಾರ್ಥಿಗಳು ಐಸಿಎಸ್ಇ 10ನೇ ವರ್ಗದ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದು, 180 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 88 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಗ್ರೀಷ್ಮಾ ಬಿ. ಮತ್ತು ಅಹನಿ ಜಿ. 98.೦೦% ಅಂಕದೊಂದಿಗೆ ಪ್ರಥಮ ಸ್ಥಾನ, ಶಮಿತ್ ದೇವಾಡಿಗ, ಪೃಥ್ವಿರಾಜ್  ಶೆಟ್ಟಿ, ಚಿನ್ಮಯ್ ದೀಕ್ಷಿತ್, 97.2೦%  ದ್ವಿತೀಯ ಸ್ಥಾನ ಹಾಗೂ ಅದಿತಿ ಪೂಜಾರಿ, ಆದಿತ್ಯ, ಅನನ್ಯ ಸಿ ಹಿರೇಮಠ, ಅರ್ಪಿತಾ ಮೂಲಿಮನೆ, ಅವನಿ ಎ. ಶೆಟ್ಟಿ  97.00% ಅಂಕದೊಂದಿಗೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ವಿದ್ಯಾರ್ಥಿಗಳ ನಿರಂತರ ಸಾಧನೆ ಶಾಲೆಯ ಮಾದರಿಯ ಶಿಕ್ಷಣ ತಂತ್ರ, ಶಿಸ್ತಿನ ಪರಿಸರ ಹಾಗೂ ಶಿಕ್ಷಕರ ದಿಟ್ಟ ಸಮರ್ಪಣೆಯ ಫಲದಿಂದ ಈ ಸಾಧನೆ ಸಾಧ್ಯವಾಗಿದೆ. ಇಂತಹ ಫಲಿತಾಂಶವು ಮುಂದಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ, ಈ ಸಾಧನೆಯ ಹಿಂದೆ ನಿಂತಿರುವುದು ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ನಿರಂತರ ಸಹಕಾರ ನೀಡಿದ ಪೋಷಕರ ಭರವಸೆಯೇ ಕಾರಣವೆಂದು ಶಾಲೆಯ ಪ್ರಾಂಶುಪಾಲರೂ ಹಾಗೂ ಸಂಸ್ಥೆಯ ಕಾರ್ಯದರ್ಶಿಗಳೂ ಆದ ಶರಣ ಕುಮಾರ ಅವರು ಈ ಗೌರವವನ್ನು ತಂದುಕೊಟ್ಟ ಎಲ್ಲಾ ವಿದ್ಯಾರ್ಥಿಗಳಿಗೆ, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Exit mobile version