Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಕ್‌ಗೆ ಮಿನಿ ಬಸ್ ಢಿಕ್ಕಿ: ಸವಾರನಿಗೆ ಗಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಕ್‌ಗೆ ಮಿನಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡಿರುವ ಘಟನೆ ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಖಮಂಟಪದ ರಾ.ಹೆ. 66ರಲ್ಲಿ ಸಂಭವಿಸಿದೆ.

ಕುಂದಾಪುರದಿಂದ ಬೈಂದೂರು ಕಡೆಗೆ ಮಿನಿ ಬಸ್ ಡ್ರೈವರ್ ದಿನೇಶ ಮರಾಠಿ ತನ್ನ ಬಸ್ ಅನ್ನು, ಉಪ್ಪುಂದ ದುರ್ಗಾ ಪರಮೇಶ್ವರಿ ದೇವಸ್ಥಾನದ ಸರ್ವಿಸ್ ರಸ್ತೆಯಿಂದ ರಾ. ಹೆ. 66ರ ರಸ್ತೆಗೆ ಬರಲು ನಿಂತಿದ್ದ ಸ್ಕೂಟರ್ಗೆ ಡಿಕ್ಕಿ ಹೊಡೆಸಿದ ಪರಿಣಾಮ ಸವಾರ ಬಚ್ಚ ಬಿಲ್ಲವ ರಸ್ತೆಗೆ ಬಿದ್ದು ಗಾಯಗೊಂಡಿದ್ದರು. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version