Site icon Kundapra.com ಕುಂದಾಪ್ರ ಡಾಟ್ ಕಾಂ

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗಗಳ ಪಿ.ಯು.ಸಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd  ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Exit mobile version