Site icon Kundapra.com ಕುಂದಾಪ್ರ ಡಾಟ್ ಕಾಂ

ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಉಡುಪಿ ನಗರಸಭೆಯ 2025-26ನೇ ಸಾಲಿನ ಎಸ್.ಎಫ್.ಸಿ ಶೇ.5 ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮದಡಿ ಅನುದಾನದ ವ್ಯಕ್ತಿ ಸಂಬಂಧಿತ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ನೀಡುವ ಸಲುವಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗಧಿತ ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಸಲ್ಲಿಸಲು ಮೇ.28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Exit mobile version