Site icon Kundapra.com ಕುಂದಾಪ್ರ ಡಾಟ್ ಕಾಂ

ಬಳ್ಕೂರು: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬಳ್ಕೂರು ಗ್ರಾಮದಲ್ಲಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಳ್ಕೂರಿನ ನಿವಾಸಿ ರಾಜು (47) ಮೃತರು. ಅವರು ಕಳೆದ ಒಂದೂವರೆ ತಿಂಗಳಿನಿಂದ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಮೇ.13 ರಂದು ಅಸ್ವಸ್ಥತೆಯಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದಿದ್ದರು. ಪತ್ನಿ ಶಕುಂತಲಾ ತಾಯಿ ಮನೆಗೆ ತೆರಳಿದ್ದು, ರಾಜು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version