Site icon Kundapra.com ಕುಂದಾಪ್ರ ಡಾಟ್ ಕಾಂ

ಕ್ರಿಕೆಟ್ ಬೆಟ್ಟಿಂಗ್ ಆರೋಪಿ ಭರತ್ ಜಯರಾಮ್ ದಾಸ ಜಿಲ್ಲೆಯಿಂದ ಗಡಿಪಾರು ಆದೇಶ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಮೂಡುಬಿರ್ತಿ ನಿವಾಸಿ ಭರತ್ ಜಯರಾಮ್ ದಾಸ (34) ಗಡಿಪಾರು ಶಿಕ್ಷೆಗೆ ಒಳಗಾದ ವ್ಯಕ್ತಿ. ಈತನ ವಿರುದ್ಧ ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಗಳಲ್ಲಿ ಒಟ್ಟು 3 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳು ದಾಖಲಾಗಿದ್ದವು.

ದಾಖಲಾಗಿರುವ 3 ಪ್ರಕರಣಗಳ ಪೈಕಿ ಈಗಾಗಲೇ ಒಂದು ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆಯಾಗಿದೆ. ಉಳಿದ ಎರಡು ಪ್ರಕರಣಗಳು ಪ್ರಸ್ತುತ ತನಿಖಾ ಹಂತದಲ್ಲಿವೆ.

ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಗುರುವಾರ (ಮೇ.14) ಈ ಗಡಿಪಾರು ಆದೇಶವನ್ನು ಜಾರಿಗೊಳಿಸಿದ್ದಾರೆ. ಅದರಂತೆ ಆರೋಪಿಯನ್ನು ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

Exit mobile version