ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇತ್ತೀಚಿಗೆ ದಳಿ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯೋರ್ವರ ಮೇಲಿನ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹೇಮಂತ್ ಎಂಬಾತನನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.
ಮೇ.17ರಂದು ನಡೆದ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಮಹಿಳಾ ಯಾತ್ರಾರ್ಥಿಯವರು ಮೃತಪಟ್ಟಿದ್ದರು. ಘಟನಾ ಸ್ಥಳದಲ್ಲಿ ಮೃತಪಟ್ಟ ಮಹಿಳೆಯೋರ್ವರ ಮೈಮೇಲಿನ ಚಿನ್ನಾಭರಣಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿದ ಬಗ್ಗೆ ಕೆಲ ದಿನಗಳ ಬಳಿಕ ಶ್ರೀಕುಮಾರ ಎಂಬುವವರು ದೂರು ನೀಡಿದ್ದರು.
ಅದರಂತೆ ಕಾರ್ಯಪ್ರವೃತ್ತರಾದ ಕೊಲ್ಲೂರು ಪೊಲೀಸ್ ಠಾಣಾ ಉಪನಿರೀಕ್ಷಕರಾದ ವಿನಯ ಎಂ. ಕೊರ್ಲಹಳ್ಳಿ, ನಾಗೇಂದ್ರ ಹೆಚ್‌ಸಿ, ಲಕ್ಷ್ಮಣ ಗಾಣಿಗ ಹೆಚ್‌ಸಿ, ರಾಘವೇಂದ್ರ ಹೆಚ್‌ಸಿ, ನಾಗರಾಜ ಪಿ.ಸಿ ರವರುಗಳು ಸಿಸಿಟಿವಿ, ಘಟನಾ ಸ್ಥಳದಲ್ಲಿ ಸಾರ್ವಜನಿಕರು ತೆಗೆದ ವಿವಿಧ ಫೊಟೋಗಳು ಮತ್ತು ತಾಂತ್ರಿಕ ಸಹಾಯದಿಂದ ಆರೋಪಿ ಕೊಲ್ಲೂರು ಕಲ್ಯಾಣಿಗುಡ್ಡೆಯ ಹೇಮಂತ s/o ನಾರಾಯಣ ಶೆಟ್ಟಿ ಎಂಬಾತನನ್ನು ಪ್ರಕರಣ ದಾಖಲಾದ 24 ಗಂಟೆ ಒಳಗಡೆ ಪತ್ತೆಹಚ್ಚಿ ಬಂಧಿಸಿದ್ದಾರೆ.
ಆರೋಪಿಯು ಕಳವು ಮಾಡಿದ್ಸ 1) 3.910 ಗ್ರಾಂ ತೂಕದ 1 ಉಂಗುರ ಮೌಲ್ಯ ರೂಪಾಯಿ 57,000/-, 2) 3.450 ಗ್ರಾಂ ತೂಕದ 1 ಬಳೆ ಮೌಲ್ಯ ರೂಪಾಯಿ 50,000/- ಸಾವಿರ ಮತ್ತು 3) 7.160 ಗ್ರಾಂ ತೂಕದ 1 ಸರ ಮೌಲ್ಯ ರೂಪಾಯಿ 1,00,000/- ವನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿ ಹೆಮಂತ್‌ಗೆ ನ್ಯಾಯಾಂಗ ಬಂಧನ ವಿಧಿಸಿದೆ.

