ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ ಇದರ ವತಿಯಿಂದ ದಾನಿಗಳ ನೆರವಿನಿಂದ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್ ಹಾಗೂ ಲೇಖನ ಸಾಮಾಗ್ರಿ ವಿತರಣಾ ಕಾರ್ಯಕ್ರಮ ಮೇಲ್‌ಗಂಗೊಳ್ಳಿಯ ಡಾ. ಅಂಬೇಡ್ಕರ್ ಸಭಾಭವನದಲ್ಲಿ ಭಾನುವಾರ ಜರಗಿತು.
ಕೆನರಾ ಬ್ಯಾಂಕಿನ ನಿವೃತ್ತ ಸಿಬ್ಬಂದಿ ಪ್ರಮೋದ ಗಾಣಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ನೋಟ್ಸ್ ಬುಕ್ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಿ ಶುಭ ಹಾರೈಸಿದರು.
ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಅವರು ಶಿಕ್ಷಣ ಮಾಹಿತಿ ನೀಡಿದರು. ಗಂಗೊಳ್ಳಿ ಜೇಸಿಐ ಕಾರ್ಯದರ್ಶಿ ನಾಗರಾಜ ಖಾರ್ವಿ, ಮಹಮ್ಮದ್ ಹುಸೇನ್, ಸರಸ್ವತಿ, ಜಿ.ಈಶ್ವರ, ಕಲಾಶ್ರೀ ಶಿಕ್ಷಣ ಬಳಗದ ಅಧ್ಯಕ್ಷೆ ಸುಮಿತ್ರಾ ಜಿ., ನವೀನ್ ಜಿ., ವಿಜೇತ ಕೆ., ಸುನೀತಾ, ಹೇಮಾ, ಸುಕನ್ಯಾ, ಮಂಜುನಾಥ ಜಿ., ನವೀನ್ ಜಿ. ಉಪಸ್ಥಿತರಿದ್ದರು. ಸುಮಿತ್ರಾ ಸ್ವಾಗತಿಸಿದರು. ವಿಜೇತ ಕಾರ್ಯಕ್ರಮ ನಿರ್ವಹಿಸಿದರು. ಸರಸ್ವತಿ ವಂದಿಸಿದರು.

