ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಕೋಟ-ಪಡುಕೆರೆ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಗೀತಾನಂದ ಫೌಂಡೇಶನ್ ಮಣೂರು-ಪಡುಕೆರೆ ಇವರ ಸಹಭಾಗಿತ್ವದಲ್ಲಿ ಜೂನ್ 2ರಂದು ಮಂಗಳವಾರ ಬೆಳಿಗ್ಗೆ 9:00 ರಿಂದ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಬಹು ರಾಷ್ಟ್ರೀಯ ಕಂಪನಿಗಳು ಮತ್ತು ಸ್ಥಳೀಯ ಕಂಪನಿಗಳು ಆಗಮಿಸುತ್ತಿದ್ದು, SSLC, PUC, NTC, D.Ed, BPEd, B.Ed, BA, B.com, BSW, MSW, MA, M.com, MSc, MBA, BBA, BCA, BTech, MTech ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಮತ್ತು ಪ್ರಸ್ತುತ ಅಂತಿಮ ಪದವಿಯಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ಇದರ ಪ್ರಯೋಜನವನ್ನು ಪಡೆಯಲು ಇದೊಂದು ಸುವರ್ಣಾವಕಾಶ.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ರೆಸ್ಯುಮ್, ಅಂಕಪಟ್ಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ಗಳ ಮೂಲ ಪ್ರತಿಯೊಂದಿಗೆ ಹಾಜರಾಗುವುದು. ಈ ಉದ್ಯೋಗ ಮೇಳದ ಪ್ರಯೋಜನವನ್ನು ರಾಜ್ಯದ ಎಲ್ಲಾ ಉದ್ಯೋಗಾಕಾಂಕ್ಷಿಗಳು ಪಡೆದುಕೊಳ್ಳುವಂತೆ ಕಾಲೇಜಿನ ಪ್ರಕಟಣೆಯಲ್ಲಿ ಪ್ರಾಂಶುಪಾಲರು ತಿಳಿಸಿರುತ್ತಾರೆ.

