ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೊಲ್ಲೂರು–ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ದಿನಗಳ ಹಿಂದೆ ಸಂಪರ್ಕ ಕಡಿತಗೊಂಡು, ತದನಂತರ ತ್ವರಿತ ಕ್ರಮದಿಂದ ದುರಸ್ತಿಗೊಂಡು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದ್ದ ಸೂಕ್ಷ್ಮ ಪ್ರದೇಶಗಳಿಗೆ ಇಂದು ಸಂಸದ ಬಿ.ವೈ. ರಾಘವೇಂದ್ರ ಅವರು, ಶಾಸಕ ಗುರುರಾಜ ಗಂಟಿಹೊಳೆ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೈಂದೂರಿನಿಂದ ಕೊಲ್ಲೂರುವರೆಗೆ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಸೂಕ್ಷ್ಮ ಜಾಗಗಳನ್ನು ವೀಕ್ಷಿಸಿ, ಮುಂಬರುವ ದಿನಗಳಲ್ಲಿ ವಾಹನ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಶಾಶ್ವತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್‌ಗಳು ಹಾಗೂ ಅಧಿಕಾರಿಗಳಿಗೆ ಸ್ಥಳದಲ್ಲೇ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ವೇಳೆ ಇಲಾಖಾ ಅಧಿಕಾರಿಗಳು, ಸ್ಥಳೀಯ ಮುಖಂಡರು, ಸಾರ್ವಜನಿಕರು ಇದ್ದರು.