ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ –1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ವರ್ಗದ ಪಿ.ಯು.ಸಿ ಸಮಾನಾಂತರ ಡಿಪ್ಲೋಮಾ, ಐ,.ಟಿ.ಐ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಛೇರಿ ಪ್ರಕಟಣೆ ತಿಳಿಸಿದೆ.

