ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರಿಗಾಗಿ ಗುರುನಮನ -26 ಎಂಬ ಶಿಕ್ಷಕರ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಆಧುನಿಕ ಶಿಕ್ಷಣ ಪದ್ಧತಿಗೆ ಅನುಗುಣವಾಗಿ ಶಿಕ್ಷಕರ ಕೌಶಲ್ಯ ಅಭಿವೃದ್ಧಿಗೆ ಪೂರಕವಾದ ಈ ಕಾರ್ಯಗಾರವನ್ನು ಸತೀಶ್ ಆರ್ ಬಂಗೇರ ಇಂಗ್ಲೀಷ ಉಪನ್ಯಾಸಕರು ಮೂಡುಬಿದರೆ ಅವರು ಉದ್ಘಾಟಿಸಿ ಮಾತನಾಡಿ, ದೇಶದ ಬೆನ್ನೆಲುಬಾದ ಶಿಕ್ಷಕರು ಇಡೀ ಸಮಾಜದ ಆರೋಗ್ಯಕರ ಬೆಳವಣಿಗೆಗೆ ಶ್ರಮಿಸುವವರು. ಶಿಕ್ಷಕ ವೃತ್ತಿ ಬೇರೆ ಎಲ್ಲಾ ಪ್ರತಿಪರ ಬದುಕನ್ನು ಸೃಷ್ಟಿಸುತ್ತದೆ. ತರಗತಿಯಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಹೆಚ್ಚಬೇಕಾದರೆ ಶಿಕ್ಷಕರ ಕಲಿಕಾ ಸಾಮರ್ಥ್ಯ ಅರ್ಥಪೂರ್ಣವಾಗಿರಬೇಕು. ವರ್ತಮಾನದ ಶಿಕ್ಷಕರ ಸಮಸ್ಯೆಗಳು ಪರಿಹಾರಗೊಂಡಾಗ ಆರೋಗ್ಯಕರ ವಾತಾವರಣ ಸೃಷ್ಟಿಯಾಗಲು ಸಾಧ್ಯ ಎಂದರು.
ಬಾಂಡ್ಯ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಅವರು ಈ ಕಾರ್ಯಗಾರಕ್ಕೆ ಶುಭ ಕೋರಿದರು.
ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಶಿಕ್ಷಕರು ಶಾಶ್ವತ ವಿದ್ಯಾರ್ಥಿಗಳು ಅವರ ಕಲಿಕೆಗೆ ಕೊನೆ ಎಂಬುದಿಲ್ಲ. ಶಿಕ್ಷಕರ ಕಲಿಕಾ ಸಾಮರ್ಥ್ಯ ಮತ್ತು ಕೌಶಲ್ಯಗಳನ್ನು ಹೆಚ್ಚಿಸಲು ಇಂತಹ ಕಾರ್ಯಗಾರಗಳು ಮಹತ್ವದ ಪಾತ್ರ ವಹಿಸುತ್ತದೆ ಎಂದರು.
ಕಾರ್ಯಕ್ರಮವನ್ನು ಸಂಧ್ಯಾ ಅವರು ಪ್ರಾರ್ಥಿಸಿ, ಶಿಕ್ಷಕಿ ಸುಮಲತಾ ಭಂಡಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

