ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಸಿದ್ದಾಪುರದ ಮೂಡುಬಗೆ ಬಳಿಯ ಬಾಳ್ಕಟ್ಟು ಸೇತುವೆ ಬಳಿ ಖಾಸಗಿ ಬಸ್ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾರೆ.
ಬಸವ ನಾಯ್ಕ (80) ಮೃತಪಟ್ಟರು.
ಬಸ್ ಸಿದ್ದಾಪುರದಿಂದ ಕುಂದಾಪುರದ ಕಡೆಗೆ ಸಾಗುತ್ತಿತ್ತು. ಬೈಕ್ ಸವಾರ ಅಂಪಾರು ಕಡೆಯಿಂದ ತನ್ನ ಮನೆ ಶಾನ್ಕಟ್ಟು ಕಡೆಗೆ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬಸವ ನಾಯ್ಕ ಅವರನ್ನು ಸ್ಥಳೀಯರು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು, ಅವರು ಮೃತಪಟ್ಟಿರುವುದಾಗಿ ತಿಳಿಸಿದರು.
ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

