ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ನೂಜಿ ಸಮೀಪ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಹೆಸ್ಕತ್ತೂರು ನಿವಾಸಿ ಮಂಜುನಾಥ (47) ಆತ್ಮಹತ್ಯೆ ಮಾಡಿಕೊಂಡವರು.
ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯ ಹಾಗೂ ಖಿನ್ನತೆಯಿಂದ ಬಳಲುತ್ತಿದ್ದರು. ರಾತ್ರಿ ಊಟದ ಬಳಿಕ ಮನೆಯ ಹೊರಗೆ ಕುಳಿತಿದ್ದ ಮಂಜುನಾಥ ಬಳಿಕ ಕಾಣೆಯಾಗಿದ್ದು, ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಮನೆ ಸಮೀಪದ ಅಂಗನವಾಡಿ ಶಾಲೆಯ ಎದುರಿನ ಮಾಡಿನ ಪಕ್ಕಾಸಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಪತ್ನಿ ಲಕ್ಷ್ಮಿ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

