ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ಪರಿಚಯ ಹೋಟೆಲ್‌ನ ದಕ್ಷಿಣ ಬದಿಯ ಗ್ಯಾರೇಜ್ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ವಾಟ್ಸಪ್ ಗ್ರೂಪ್ ಮೂಲಕ ಕೋಳಿ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬೈಂದೂರು ಪೊಲೀಸ್ ಉಪನಿರೀಕ್ಷಕರಾದ ಸುನಿಲ್ ಕುಮಾರ ಬಿ.ಎನ್. ಅವರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯಾದ ಉಪ್ಪುಂದ ಗ್ರಾಮದ ಸಚಿನ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯ ಬಳಿಯಿದ್ದ VIVO V20 ಮೊಬೈಲ್ ಫೋನ್ ಸ್ವಾದೀನಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

