ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕಳೆದ 39 ವರ್ಷಗಳಿಂದ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಪುಟಾಣಿಗಳಲ್ಲಿ ಭಾರತೀಯ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರಗಳನ್ನು ಬೆಳೆಸುವ ಉದ್ದೇಶದಿಂದ ಮಕ್ಕಳ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ನೀಡುತ್ತಿದೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ರೀತಿಯ ಚ್ಯುತಿ ಬಾರದಂತೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಶು ಮಂದಿರ ಶ್ರಮಿಸಲಿದೆ ಎಂದು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಸಂಚಾಲಕ ಡಾ. ಕಾಶೀನಾಥ ಪೈ ಹೇಳಿದರು.
ಅವರು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾಭವನದಲ್ಲಿ ಸೋಮವಾರ ಜರಗಿದ 2026-27ನೇ ಸಾಲಿನ ಶಿಶು ಮಂದಿರ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಿಶು ಮಂದಿರದ ಅಧ್ಯಕ್ಷ ಬಿ. ರಾಘವೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಶಿಶು ಮಂದಿರದಕ್ಕೆ ಆಗಮಿಸಿದ ಪುಟಾಣಿಗಳ ಕಾಲುಗಳನ್ನು ತೊಳೆದು, ಕುಂಕುಮದ ತಿಲಕವನ್ನಿಟ್ಟು, ಆರತಿ ಬೆಳಗಿ ಸಂಪ್ರದಾಯಬದ್ಧವಾಗಿ ಅದ್ದೂರಿಯಾಗಿ ಸ್ವಾಗತಿಸಿಕೊಳ್ಳಲಾಯಿತು. ಶಿಶು ಮಂದಿರದ ಸದಸ್ಯರಾದ ಶ್ರೀನಿವಾಸ ಎಂ., ಉಷಾ ಪಿ.ಮಡಿವಾಳ, ಭಾಸ್ಕರ ಎಚ್.ಜಿ., ವಸಂತಿ ಎನ್.ಖಾರ್ವಿ, ಗಾಯತ್ರಿ ಕೊಡಂಚ, ಮಾತಾಜಿ ಪ್ರೇಮಾ, ಸಹಾಯಕಿ ರತ್ನ, ಪೋಷಕರು ಮೊದಲಾದವರು ಉಪಸ್ಥಿತರಿದ್ದರು.
ಅಧ್ಯಕ್ಷ ಬಿ. ರಾಘವೇಂದ್ರ ಪೈ ಸ್ವಾಗತಿಸಿದರು. ಮಾಜಿ ಅಧ್ಯಕ್ಷೆ ಸವಿತಾ ಯು. ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.

