ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಶಿಕ್ಷಕ, ಪೋಷಕರ ಮಹಾಸಭೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಬೈಂದೂರು ಶಾಸಕ ಗುರುರಾಜ ಗಂಟೆಹೊಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಳೆದ ಬಾರಿ ಬೈಂದೂರು ಕ್ಷೇತ್ರದಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆಯಾಗಿರುವ ಸಂತೃಪ್ತಿಯಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಬಹುಮುಖ್ಯವಾಗಿದೆ.ಬದಲಾಗುತ್ತಿರುವ ವ್ಯವಸ್ಥೆಯಲ್ಲಿ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗಿದೆ.ಶೈಕ್ಷಣಿಕವಾಗಿ ಅವಶ್ಯವಿರುವ ಪ್ರೋತ್ಸಾಹ ನೀಡಬೇಕು.ಎಲ್ಲರ ಸಹಕಾರದಲ್ಲಿ ಪ್ರಸಕ್ತ ಸಾಲಿನಲ್ಲಿ ಉತ್ತಮ ಶೈಕ್ಷಣಿಕ ಸಾಧನೆ ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದರು.
ಎಸ್.ಡಿ.ಎಮ್.ಸಿ ಅಧ್ಯಕ್ಷ ಉಮೇಶ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಕ ಸದಸ್ಯರಾದ ಸದಾಶಿವ ಡಿ. ಪಡುವರಿ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ,ಕಾಲೇಜಿನ ಪ್ರಾಂಶುಪಾಲರು ಹಾಗೂ ಎಸ್.ಡಿ.ಎಮ್.ಸಿ ಸರ್ವ ಸದಸ್ಯರು ಹಾಜರಿದ್ದರು.
ಈ ಸಂದರ್ಭದಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಹಾಗೂ ವರ್ಗಾವಣೆಗೊಂಡ ಶಾಲೆಯ ದೈಹಿಕ ಶಿಕ್ಷಕರಾದ ಪ್ರಭಾಕರ್ ಎಸ್ ರವರು ಸನ್ಮಾನಿಸಲಾಯಿತು.
ಉಪ ಪ್ರಾಂಶುಪಾಲೆ ರೋಷನ್ ಬಿ.ಬಿ ಸ್ವಾಗತಿಸಿದರು. ಉಪನ್ಯಾಸಕ ದತ್ತಾತ್ರೇಯ ಭಟ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

