Site icon Kundapra.com ಕುಂದಾಪ್ರ ಡಾಟ್ ಕಾಂ

ಪೊಲೀಸ್ ಇನ್ಸ್‌ಪೆಕ್ಟರ್ ರಾಘವೇಂದ್ರ ಎಂ. ಅವರಿಗೆ ಪಾಂಡೇಶ್ವರ ಠಾಣೆಗೆ ವರ್ಗಾವಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಘವೇಂದ್ರ ಎಂ. ಅವರು ವರ್ಗಾವಣೆಗೊಂಡು ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮೂಲತಃ ಬೈಂದೂರು ಬಾಡದವರಾದ ರಾಘವೇಂದ್ರ ಎಂ. ಅವರು ಕಾವೂರು ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುವ ಅವಧಿಯಲ್ಲಿ ವಿವಿಧ ಪ್ರಕರಣಗಳ ತನಿಖೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದರು. ಇಲಾಖೆಯ ವರ್ಗಾವಣೆ ಆದೇಶದಂತೆ ಅವರು ಪಾಂಡೇಶ್ವರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ಸೋಮವಾರ ನೂತನ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ.

Exit mobile version