Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಜೂ.6 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಉಡುಪಿಯ ಉದ್ಯಾವರದ ಐ.ಒ.ಸಿ.ಎಲ್ ಪೆಟ್ರೋಲ್ ಬಂಕ್ ಬಳಿಯ ಅರವಿಂದ್ ಮೋಟರ್ಸ್‌ ಪ್ರೈಲಿಮಿಟೆಡ್ ಇಲ್ಲಿ ಜೂನ್ 6ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ  ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Exit mobile version