ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಬಗ್ಗೆ ಅಪಾರ ಗೌರವ ಮತ್ತು ಅಭಿಮಾನ ಹೊಂದಿರುವ ಕೊಡುಗೈ ದಾನಿಯೋರ್ವರ ನೆರವಿನಿಂದ ನೀಡಲಾದ 1.50 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಉಚಿತ ನೋಟ್ಸ್ ಪುಸ್ತಕಗಳನ್ನು1ನೇ ತರಗತಿಯಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಜಿ.ಎಸ್.ವಿ.ಎಸ್.ಅಸೋಸಿಯೇಷನ್ ನ ಅಧ್ಯಕ್ಷರಾದ ಡಾ.ಕಾಶಿನಾಥ್.ಪಿ.ಪೈ , ಸಂಚಾಲಕರಾದ ಎನ್. ಸದಾಶಿವ ನಾಯಕ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ದೀಕ್ಷಿತ್ ಮೇಸ್ತ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರಾದ ದೀಕ್ಷಿತ್ ಮೇಸ್ತ ಸ್ವಾಗತಿಸಿ, ಶಿಕ್ಷಕಿ ಮಾಲಾಶ್ರೀ ಖಾರ್ವಿ ನಿರೂಪಿಸಿ, ವಂದಿಸಿದರು.