ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು .ಎಸ್ . ಶೆಣೈ ಅಧ್ಯಕ್ಷೀಯ ನುಡಿಗಳನಾಡಿದರು.
ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರ ಆಚಾರಿ ವಿದ್ಯಾರ್ಥಿಗಳಿಗೆ ಕಾಲೇಜಿನ ಸವಿವರ ಮಾಹಿತಿಯನ್ನು ನೀಡಿದರು.
ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಅತ್ಯುತ್ತಮ ಅಂಕ ಪಡೆದು ರ್ಯಾಂಕ್ ವಿದ್ಯಾರ್ಥಿಗಳಾದ ಸಂಕಲ್ಪ್ ಕುಮಾರ್, ಮನೋಜ್, ಭೂಮಿಕಾ, ಗೌರಿ ಹಾಗೂ ಗಂಗಾ ಅವರನ್ನು ಗುರುತಿಸಿ ಗೌರವಿಸಲಾಯಿತು.
ವಾಣಿಜ್ಯ ವಿಭಾಗ ಉಪನ್ಯಾಸಕಿ ಗೀತಾ ಪ್ರಭು, ವಿಜ್ಞಾನ ವಿಭಾಗ ಉಪನ್ಯಾಸಕಿ ಸ್ಮಿತಾ, ಎನ್ ಸಿ.ಸಿ ಘಟಕದ ಮುಖ್ಯಸ್ಥರು ಹಾಗೂ ಗ್ರಂಥಪಾಲಕರಾದ ಮನೋಹರ್, ದೈಹಿಕ ಶಿಕ್ಷಣ ನಿರ್ದೇಶಕ ಶಂಕರ್ ನಾರಾಯಣ ಹಾಗೂ 89.6 ಎಫ್.ಎಮ್ ರೇಡಿಯೋ ಕುಂದಾಪ್ರ ಸಮುದಾಯ ಬಾನುಲಿ ಕೇಂದ್ರದ ಕಾರ್ಯಕ್ರಮ ನಿರ್ವಾಹಕಿ ಜ್ಯೋತಿ ಸಾಲಿಗ್ರಾಮ ಕಾಲೇಜಿನ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿಗಳನ್ನು ನೀಡಿದರು.
ಪ್ರಾಂಶುಪಾಲೆ ಡಾ. ಸರೋಜಾ ಎಂ. ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕ ಪ್ರಸನ್ನ ವಂದಿಸಿದರು. ಕನ್ನಡ ಉಪನ್ಯಾಸಕಿ ರೇಣುಕಾ ಕಾರ್ಯಕ್ರಮ ನಿರ್ವಹಿಸಿದರು.

