Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಹಾಗೂ ಎನ್.ಎಸ್.ಎಸ್. ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದೊಂದಿಗೆ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವು ಕಾಲೇಜಿನ ಎ.ವಿ. ಹಾಲ್‌ನಲ್ಲಿ ಜರುಗಿತು.

ಇಂಡಿಯನ್ ರೆಡ್‌ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಇಂದಿನ ಯುವ ಪೀಳಿಗೆ ಸಮಾಜದಲ್ಲಿನ ಆಗು-ಹೋಗುಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರದ ಇಶಾನಿ ಮೆಡಿಕಲ್ ಸೆಂಟರ್ ಇಲ್ಲಿನ ವೈದ್ಯಾಧಿಕಾರಿ ಡಾ| ಸೋನಿ ಡಿಕೋಸ್ಟ ಅವರು ಪ್ರಥಮ ಚಿಕಿತ್ಸೆಯ ತರಬೇತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ನಡೆಸಿ, ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳಲ್ಲಿ ಪ್ರಥಮ ಚಿಕಿತ್ಸೆ ಅರಿವು ಅತ್ಯವಶ್ಯಕ ಎಂದರು.

ಇAಡಿಯನ್ ರೆಡ್‌ಕ್ರಾಸ್ ಘಟಕದ ಕಾರ್ಯದರ್ಶಿಗಳಾದ ಸತ್ಯನಾರಾಯಣ ಪುರಾಣಿಕ್, ಕಾಲೇಜಿನ ರೆಡ್‌ಕ್ರಾಸ್ ಘಟಕದ ಸಂಯೋಜನಾಧಿಕಾರಿ ಪೃಥ್ವಿಶ್ರೀ ಜಿ. ಶೆಟ್ಟಿ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪೂಜಾ ಕುಂದರ್ ಉಪಸ್ಥಿತರಿದ್ದರು.

ಕಾಲೇಜು ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿದರು. ರಾಷ್ಟಿçÃಯ ಸೇವಾ ಯೋಜನ ಘಟಕದ ಕಾರ್ಯಕ್ರಮಾಧಿಕಾರಿ ರಾಜೇಶ್ ಶೆಟ್ಟಿ ವಂದಿಸಿದರು. ವಿದ್ಯಾರ್ಥಿನಿ ಸ್ನೇಹಾ ಪ್ರಾರ್ಥಿಸಿ, ಶರಣ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Exit mobile version