ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ದಿನಾಚರಣೆ ಕಾರ್ಯಕ್ರಮವು ಗುರುವಾರ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಉಪನ್ಯಾಸಕರು ಉತ್ತಮ ರೀತಿಯಲ್ಲಿ ಸಾಧನೆ ಮಾಡಬೇಕು. ಹೆಚ್ಚು ಸಂಶೋಧನಾ ಕ್ಷೇತ್ರ ಮತ್ತು ಇತರೆ ಜ್ಞಾನಪೂರ್ಣ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಿ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಾಗಿ ಆಗಮಿಸಿದ್ದ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜ ಎಮ್. ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಾಪಕರ ಸಂಘದ ಅಧ್ಯಕ್ಷೆ ನಿಶಾ ಎಮ್. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಅಧ್ಯಾಪಕರ ಸಂಘದ ಉಪಾಧ್ಯಕ್ಷರಾದ ವಿದ್ಯಾಧರ ಪೂಜಾರಿ, ಕಾರ್ಯದರ್ಶಿ ಅರುಣ್ ಎ.ಎಸ್. ಜೊತೆ ಕಾರ್ಯದರ್ಶಿ ದುರ್ಗಾಪ್ರಸಾದ್ ಮಯ್ಯ, ಖಜಾಂಚಿ ಮನೋಹರ ಉಪಾಧ್ಯಾಯ ಉಪಸ್ಥಿತರಿದ್ದರು.
ಡಾಕ್ಟರೇಟ್ ಪದವಿ ಪಡೆದ ಆಂಗ್ಲ ಭಾಷಾ ಉಪನ್ಯಾಸಕ ಡಾ. ಶರಣ್ ಎಸ್ .ಜೆ. ಮತ್ತು ಕನ್ನಡ ಭಾಷಾ ಉಪನ್ಯಾಸಕ ಡಾ. ಸುಖಾನಂದ ಶೆಟ್ಟಿ ಮತ್ತು ಕರ್ನಾಟಕ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆ ಪಡೆದ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಪ್ರಜ್ಞಾ ಮತ್ತು ಸುಲತಾ, ಗಣಿತಶಾಸ್ತ್ರ ವಿಭಾಗದ ಕಾವ್ಯ ಪೈ ಅವರನ್ನು ಗುರುತಿಸಿ ಗೌರವಿಸಲಾಯಿತು. ಉಪನ್ಯಾಸಕರಿಗಾಗಿ ನಡೆದ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮನರಂಜನೆ ಕಾರ್ಯಕ್ರಮಗಳು ನಡೆಯಿತು.
ರೇಡಿಯೋ ಕುಂದಾಪ್ರ 89.6 ಎಫ್.ಎಮ್ ಇದರ ಕಾರ್ಯಕ್ರಮ ನಿರ್ವಾಹಕಿ ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು.

