ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟೇಶ್ವರ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ, ಕೋಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆ, ಮತ್ತು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ ಉಡುಪಿ ಇವರ ಜಂಟಿ ನೇತೃತ್ವದಲ್ಲಿ, ಕೋಟೇಶ್ವರ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಹಳೆ ಅಳಿವೆ ಸಮುದ್ರ ತೀರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊಗವೀರ ಯುವ ಸಂಘಟನೆಯ ಅಧ್ಯಕ್ಷರಾದ ರಾಘವೇಂದ್ರ ಹರಪ್ಪನಕರೆ ಅವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಂಘಟನೆಯ ಸ್ಥಾಪಕ ಅಧ್ಯಕ್ಷರಾದ ಸತೀಶ್ ಎಂ. ನಾಯಕ್, ಉಡುಪಿ ಜಿಲ್ಲಾ ಸಂಘಟನೆಯ ಅಶೋಕ ತೆಕ್ಕಟ್ಟೆ, ಗೌರವ ಅಧ್ಯಕ್ಷರಾದ ಆನಂದ್ ಕುಂದರ್, ನಿಕಟಪೂರ್ವ ಅಧ್ಯಕ್ಷರಾದ ನಾಗರಾಜ್ ಬಿಜಾಡಿ ಹಾಗೂ ಮಾಜಿ ಅಧ್ಯಕ್ಷರಾದ ಸುರೇಶ್ ಛಾತ್ರಬೆಟ್ಟು ಉಪಸ್ಥಿತರಿದ್ದರು.
ಅಲ್ಲದೆ, ಸಂಘಟನೆಯ ಕಾರ್ಯದರ್ಶಿ ನಾಗರಾಜ್ ತೆಕ್ಕಟ್ಟೆ, ಕೋಟೇಶ್ವರ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹರೀಶ್ ಶೆಟ್ಟಿ, ಗುರಿಕಾರರಾದ ರಾಮ ನಾಯಕ್ ಬೀಜಾಡಿ, ಗೋಪಾಲ್ ಮೆಂಡನ್ ಪಡೈನಮನೆ ಹಾಗೂ ಸ್ಥಳೀಯ ಪ್ರಮುಖರಾದ ಪುಂಡಲಿಕ ಬಂಗೇರ ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಬೆಂಬಲ ನೀಡಿದರು.
ಮಹಿಳಾ ಮತ್ತು ಸ್ಥಳೀಯ ಸಂಘಟನೆಗಳ ಸಾಥ್:
ಮಹಿಳಾ ಸಂಘಟನೆಯ ಮಾಜಿ ಅಧ್ಯಕ್ಷರಾದ ಉಷಾ ಬಂಗೇರ ಮಾರ್ಕೊಡು, ಗೀತಾ ಹಳೆ ಅಳಿವೆ, ಶಾರದಾ ಮೂಡು ಗೋಪಾಡಿ ಹಾಗೂ ಬಿ. ಕೆ. ಫ್ರೆಂಡ್ಸ್ ಅಧ್ಯಕ್ಷರಾದ ಮಂಜುನಾಥ್ ಅವರು ಪರಿಸರ ಜಾಗೃತಿಯ ಈ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಸಂಘಟನೆಯ ವಿವಿಧ ಪದಾಧಿಕಾರಿಗಳು, ಸದಸ್ಯರು ಹಾಗೂ ಅಪಾರ ಸಂಖ್ಯೆಯ ಸ್ಥಳೀಯ ಸಾರ್ವಜನಿಕರು ಶ್ರಮದಾನ ಮಾಡುವ ಮೂಲಕ ಸಮುದ್ರ ತೀರವನ್ನು ಸ್ವಚ್ಛಗೊಳಿಸಿದರು.