ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರದ ಹಿರಿಯ ಸಿವಿಲ್ ನ್ಯಾಯಾಧೀಶ ಕುಮಾರ್ ಅವರು ಕುಟುಂಬ ಸಮೇತರಾಗಿ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿದರು.
ದೇವರ ದರ್ಶನ ಹಾಗೂ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಸ್ವಾಮೀಜಿದ್ವಯರ ಪುತ್ಥಳಿಯ ದರ್ಶನ ಪಡೆದ ಅವರು, ಪುರುಷೋತ್ತಮ ಮಾಸದ ಅಂಗವಾಗಿ ದೇವಸ್ಥಾನದಲ್ಲಿ ನಡೆಯುತ್ತಿರುವ ಮಾಸಾವಧಿ ಅಖಂಡ ಭಜನಾ ಮಹೋತ್ಸವ ಕಾರ್ಯಕ್ರಮವನ್ನು ವೀಕ್ಷಿಸಿ ಪ್ರಸಾದ ಸ್ವೀಕರಿಸಿದರು.
ದೇವಳದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ಮತ್ತು ಜಿ. ಶಂಕರ ಕೆ. ಆಚಾರ್ಯ ಅವರು ನ್ಯಾಯಾಧೀಶರನ್ನು ಪ್ರಸಾದ ನೀಡಿ ಗೌರವಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

