ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಬೆಳ್ವೆ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಸೋಮವಾರ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಹೆಬ್ರಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ರಾವ್, ತಹಶೀಲ್ದಾರ್ ಪ್ರದೀಪ್ ಕುರುಡೇಕರ, ಬೆಳ್ವೆ ಗ್ರಾಮ ಪಂಚಾಯಿತಿ ಪಿಡಿಒ ಶ್ರೀಮತಿ ಸತೀಶ್ ನಾಯಕ, ಆಡಳಿತ ಅಧಿಕಾರಿ ಜಿ.ಚಿದಾನಂದಪ್ಪ ಸೇರಿದಂತೆ ತಾಲೂಕು ಪಂಚಾಯಿತಿ ಅಧಿಕಾರಿಗಳು, ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿದ್ದರು. ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಮಹಿಳಾ ಸಂಘದ ಸದಸ್ಯರು, ಶಾಸಕರ ಆಪ್ತ ಕಾರ್ಯದರ್ಶಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸಭೆಯಲ್ಲಿ ಸಾರ್ವಜನಿಕರು ರಸ್ತೆ, ಕುಡಿಯುವ ನೀರು, ವಸತಿ ಯೋಜನೆ, ಕಂದಾಯ, ಮೆಸ್ಕಾಂ ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಶಾಸಕರ ಗಮನ ಸೆಳೆದರು. ಅಹವಾಲುಗಳನ್ನು ಸ್ವೀಕರಿಸಿದ ಶಾಸಕ ಕಿರಣ್ ಕೊಡ್ಗಿ ಸ್ಥಳದಲ್ಲಿಯೇ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಸರ್ಕಾರದ ಯೋಜನೆಗಳು ಜನರಿಗೆ ವೇಗವಾಗಿ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಗ್ರಾಮದ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಶಾಸಕರು ಹಾಗೂ ಸಂಸದರು ಈ ಸಂದರ್ಭದಲ್ಲಿ ತಿಳಿಸಿದರು.