ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಬ್ರಿ ತಾಲೂಕು ಬೆಳ್ವೆ ಗ್ರಾಮದ ದೇವಸ್ಥಾನ ಬೆಟ್ಟು ಕೊರಗ ಕಾಲೋನಿಯಲ್ಲಿ ನಿರ್ಮಿಸಲಾದ ಮಲ್ಟಿ ಪರ್ಪಸ್ ಸೆಂಟರ್‌ಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಹಾಗೂ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು ಭೇಟಿ ನೀಡಿ ವೀಕ್ಷಿಸಿದರು.
ಬಳಿಕ ‘ತಾಯಿಗಾಗಿ ಒಂದು ಗಿಡ’ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಸಿ ನೆಟ್ಟು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

