Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಪೇಟೆ ಶ್ರೀ ವಿಠ್ಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಪುರುಷೋತ್ತಮ ಮಾಸದ ಧಾರ್ಮಿಕ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಗಂಗೊಳ್ಳಿಯ ಪೇಟೆ ಶ್ರೀ ವಿಠ್ಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಪುರುಷೋತ್ತಮ ಮಾಸದ ಅಂಗವಾಗಿ ಶ್ರೀದೇವರ ಪ್ರೀತ್ಯರ್ಥವಾಗಿ ಹಾಗೂ ಸಾನಿಧ್ಯ ಅಭಿವೃದ್ಧಿಗಾಗಿ ಶ್ರೀ ವಿಷ ಸಹಸ್ರನಾಮ ಹವನ, ತತ್ವ ಮಂತ್ರ ಹವನ, ಮಾತೃಕಾ ಮಂತ್ರ ಹವನ, ಶ್ರೀ ವಿಠ್ಠಲ ಮೂಲ ಮಂತ್ರ ಹವನ, ಶ್ರೀ ವೆಂಕಟೇಶ ಮೂಲ ಮಂತ್ರ ಹವನ, ಹನುಮಂತ ಮೂಲ ಮಂತ್ರ ಹವನ, ಗರುಡ ಮೂಲ ಮಂತ್ರ ಹವನ ಬುಧವಾರ ನಡೆಯಿತು.

ಬೆಳಿಗ್ಗೆ ದೇವತಾ ಪ್ರಾರ್ಥನೆಯೊಂದಿಗೆ ಹವನದ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿತು. ದೇವಳದ ಪ್ರಧಾನ ಅರ್ಚಕ ಜಿ.ಮೋಹನದಾಸ ಭಟ್, ಜಿ. ಪ್ರದೀಪ್ ಭಟ್ ಮತ್ತು ತಾಂತ್ರಿಕ ಜಿ. ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಪುರೋಹಿತರಿಂದ ಹವನದ ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತಕವಾಗಿ ಸಂಪನ್ನಗೊಂಡಿತು. ಮಧ್ಯಾಹ್ನ ಪೂರ್ಣಾಹುತಿ, ಶ್ರೀದೇವರಿಗೆ ಮಹಾಪೂಜೆ, ಬ್ರಾಹ್ಮಣ ಪೂಜೆ ಹಾಗೂ ಮಹಾಸಮಾರಾಧನೆ ನಡೆಯಿತು.

ದೇವಳದ ಆಡಳಿತ ಮೊಕ್ತೇಸರ ಜಿ.ನರಸಿಂಹ ನಾಯಕ್, ಆಡಳಿತ ಮಂಡಳಿ ಸದಸ್ಯರು, ಅರ್ಚಕರು, ಸೇವಾದಾರರು, ಊರಿನ ಹತ್ತು ಸಮಸ್ತರು, ಸಮಾಜ ಬಾಂಧವರು ಮೊದಲಾದವರು ಉಪಸ್ಥಿತರಿದ್ದರು.

Exit mobile version