Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ವೈಷ್ಣವಿ ಗೋಪಾಲ್‌ಗೆ ಸನ್ಮಾನ

ಗಂಗೊಳ್ಳಿ: ದೆಹಲಿಯ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗವಹಿಸಿದ್ದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಎನ್‌ಸಿಸಿ ಕೆಡೆಟ್ ವೈಷ್ಣವಿ ಗೋಪಾಲ್ ಅವರನ್ನು ಇತ್ತೀಚಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಜರಗಿದ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಗಂಗೊಳ್ಳಿಯ ಉದ್ಯಮಿ ಎಂ.ಮಾಧವ ವಿ. ಪೈ, ಎಂ.ಮಾಯಾ ಎಂ.ಪೈ, ಜಿಎಸ್‌ವಿಎಸ್ ಅಸೋಶಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ, ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಎಸ್.ವಿ. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಆರ್.ಎನ್.ರೇವಣ್‌ಕರ್, ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಶಾಲೆಯ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶಾಂತಿ ಡಿಕೋಸ್ತಾ, ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಉಪಾಧ್ಯಕ್ಷ ಶಿವಾನಂದ ಪೂಜಾರಿ, ಶಾಲೆಯ ಪ್ರಾಕ್ತನ ವಿದ್ಯಾರ್ಥಿ ರಾಮಚಂದ್ರ ನಾಯಕ್, ಶಾಲಾ ವಿದ್ಯಾರ್ಥಿ ನಾಯಕ ಶ್ರೀನಿಧಿ ಮೊದಲಾದವರು ಉಪಸ್ಥಿತರಿದ್ದರು.

Exit mobile version