Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಿ.ಎಮ್. ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರಪಾಡಿಯಲ್ಲಿ ಆರ್ಥಿಕ ಸಾಕ್ಷರತಾ ಶಿಕ್ಷಣ ಕಾರ್ಯಕ್ರಮದಲ್ಲಿ ಬ್ಯಾಂಕಿಂಗ್ ಮತ್ತು ಹಣಕಾಸಿನ ಮಹತ್ವ ಮತ್ತು ಸಮಾತೋಲನ ಆಹಾರ ಮತ್ತು ಆರೋಗ್ಯ  ಎನ್ನುವ ವಿಷಯದ ಮಾಹಿತಿ ಕಾರ್ಯಾಗಾರ ಇತ್ತೀಚಿಗೆ ನಡೆಯಿತು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೋಟ ಸಹಕಾರಿ ವ್ಯವಸಾಯಕ ಬ್ಯಾಂಕ್ ಮಾಜಿ ಅಧ್ಯಕ್ಷ ತಿಮ್ಮ ಪೂಜಾರಿ ಸಣ್ಣವರಿರುವಾಗಲೇ ಹಣಕಾಸಿನ ಮಹತ್ವ ಅರಿತು ಉಳಿತಾಯದ ಜ್ಞಾನ ಬೆಳೆಸಿ ಕೊಳ್ಳಿ ಎಂದರು. ನಾವು ದಿನ ನಿತ್ಯ ಜೀವನದಲ್ಲಿ ಸಮತೋಲನ ಆಹಾರ ಸೇವಿಸಿ ಆರೋಗ್ಯ ಕಾಪಾಡಿ ಕೊಳ್ಳಬೇಕು ಎಂದು ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪಲ್ಲವಿ ಮಾಹಿತಿ ನೀಡಿದರು. ಚಿತ್ರಪಾಡಿ ಎಳೆ ಮಹಾಲಿಂಗೇಶ್ವರ ದೇವಸ್ಥಾನ ಮುಖ್ಯಸ್ಥ ವಿಶ್ವೇಶ್ವರ ತುಂಗ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಶಂಕರ ದೇವಾಡಿಗ ವಹಿಸಿದ್ದರು. ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಎಮ್.ಜಿ.ಎಮ್. ಕಾಲೇಜ್‌ನ ನಿವೃತ್ತ ಪ್ರಾಂಶುಪಾಲ ಲಕ್ಷ್ಮೀ ನಾರಾಯಣ ಕಾರಂತ್, ನಿವೃತ್ತ ಮುಖ್ಯೋಪಾಧ್ಯಾಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಪ್ರಸ್ತುತ ಸಾಲಿನ ಹತ್ತನೇ ತರಗತಿಯ ಮಕ್ಕಳಿಗೆ ಶುಭಾಶಂಸನಾ ಕಾರ್ಯಕ್ರಮವು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಮಾರಂಭದಲ್ಲಿ ನಮ್ಮ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ ಅವರು ಮಕ್ಕಳಿಗೆ ಮುಂಬರುವ ಪರೀಕ್ಷೆಗೆ ಶುಭ ಹಾರೈಸಿದರು. ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿ – ವಿದ್ಯಾರ್ಥಿನಿಯರು ತಮ್ಮ ಶಾಲಾ ಜೀವನದ ಅನುಭವಗಳನ್ನು ಹಂಚಿಕೊಂಡರು. ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರು ಸರ್ವರನ್ನು ಸ್ವಾಗತಿಸಿದರು.ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ನರ್ಸರಿ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಅವರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಂಗೀತ ಶಿಕ್ಷಕಿ ರಮಣಿಯವರು ಪ್ರಾರ್ಥನೆಗೈದರು. ಪ್ರೌಢಶಾಲಾ ಸಹಶಿಕ್ಷಕ ಪದ್ಮನಾಭ ಅಡಿಗ ಅವರು ಕಾರ್ಯಕ್ರಮವನ್ನು ನಿರೂಪಿಸಿ, ಪ್ರೌಢಶಾಲಾ ಸಹಶಿಕ್ಷಕ ಮಾಧವ ಅವರು ಧನ್ಯವಾದ ಸಮರ್ಪಣೆಗೈದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವ್ಯಕ್ತಿತ್ವ ವಿಕಸಿನ ರೂಪಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಸಿದ್ದಾಪುರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ  ಮಾತನಾಡಿದರು.  ರಾಷ್ಟೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸೇವಾ ಮನೋಭಾವವನ್ನು ತುಂಬುತ್ತದೆ. ವಿದ್ಯಾರ್ಥಿಗಳು ಈ ಶಿಬಿರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದು ತಿಳಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ, ಸಿದ್ದಾಪುರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಂದ್ರ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಕುಲಾಲ್, ಸಿದ್ದಾಪುರ ರಾಮದಾಸ ಪ್ರಭು, ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಭೋಜ ಶೆಟ್ಟಿ, ಸಿದ್ದಾಪುರ ಸರಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಚಂದ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಅಮಾಸೆಬೈಲು: ಕಾರಿನೊಂದಿಗೆ ಗೂಡ್ಸ್‌ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಅಮಾಸೆಬೈಲು ಪೊಲೀಸರು ಭಾನುವಾರ ಬೆಳಗಿನ ಜಾವ ಹೊಸಂಗಡಿ ಚೆಕ್‌ ಪೋಸ್ಟ್‌ನಲ್ಲಿ ಬಂಧಿಸಿದ್ದಾರೆ. ಬೆಳಗಾಂ ಜಿಲ್ಲೆಯ ರಾಮದುರ್ಗಾದ ಮುಸ್ತಾಕ್ ಹುಸೇನ್ (29), ಸಲೀಂ ಹುಸೇನ್ ಸಾಬ್ ನದಾಫ್ (33), ಕಂಡ್ಲೂರಿನ ನದೀಂ ಅಬ್ದುಲ್ ಖಾದರ್ (34) ಬಂಧಿತ ಆರೋಪಿಗಳು. ಹುಲಿಕಲ್ ಘಾಟಿ ಕಡೆಯಿಂದ ಹೊಸಂಗಡಿ ಚೆಕ್ ಪೋಸ್ಟ್ ಕಡೆಗೆ ಬರುತ್ತಿದ್ದ ವಾಹನವನ್ನು ತಡೆದು ತಾಪಸಣೆ ಮಾಡಿದಾಗ ಮೂರು ಎತ್ತುಗಳನ್ನುಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಇದರಲ್ಲಿದ್ದ ಒಂದು ಲಕ್ಷ ರೂ. ಮೌಲ್ಯದ ಮೂರು ಎತ್ತುಗಳನ್ನು, 4 ಲಕ್ಷ ರೂ. ಮೌಲ್ಯದ ವಾಹನ ಮತ್ತು ಬೆಂಗಾವಲಾಗಿದ್ದ 5ಲಕ್ಷ ರೂ. ಮೌಲ್ಯದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿ ಇಳಿದು ಓಡಿ ಹೋಗಿದ್ದು, ಓರ್ವನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಆರೋಗ್ಯ ಉತ್ತಮವಾಗಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು. ಆದ್ದರಿಂದ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಮತ್ತು ಜಾಗೃತೆ ವಹಿಸಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಂಡು ನೆಮ್ಮದಿಯಿಂದ ಜೀವನ ನಡೆಸಬೇಕು. ಆರೋಗ್ಯ ತಪಾಸಣೆ ಶಿಬಿರಗಳ ಸದುಪಯೋಗ ಪಡೆದುಕೊಂಡು ನಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಮ್ಯಾನೇಜಿಂಗ್ ಟ್ರಸ್ಟಿ ಅಧ್ಯಕ್ಷ ಟಿ. ನಾರಾಯಣ ಪೈ ಹೇಳಿದರು. ಅವರು ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನ ಟ್ರಸ್ಟ್ ಹಾಗೂ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಬಸ್ರೂರು ಇವರ ಸಂಯುಕ್ತ ಆಶ್ರಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ಸಹಯೋಗದೊಂದಿಗೆ ಬಸ್ರೂರು ಮಂಡಿಕೇರಿ ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಬಸ್ರೂರು ಇದರ ಅಧ್ಯಕ್ಷ ಬಿ.ಎನ್. ಪ್ರಭು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯರಾದ ಡಾ. ಸತೀಶ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರಿಗೆ ಬೆಂಗಳೂರಿನ ಡಾ. ಮನಮೋಹನ್‌ಸಿಂಗ್ ನಗರ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.   ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ 5ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಈ ಗೌರವ ಪ್ರದಾನ ನೇರವೇರಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಕೋಟತಟ್ಟು ಗ್ರಾಮಪಂಚಾಯತ್, ಎಸ್ ಎಲ್ ಆರ್ ಎಂ ಘಟಕ ಇವರ ಸಹಯೋಗದೊಂದಿಗೆ ಸತತ 297ನೇ ಭಾನುವಾರ ಪರಿಸರಸ್ನೇಹಿ ಅಭಿಯಾನ ಕೋಟತಟ್ಟು ಪಡುಕರೆ ಬೀಚ್ ಕ್ಲಿನಿಂಗ್ ಕಾರ್ಯಕ್ರಮ ಆಯೋಜಿಸಿತು. ಬೀಚ್ ತಟದಲ್ಲಿದ್ದ ಸಾಕಷ್ಟು ಪ್ರಮಾಣದ ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು. ಕೋಟತಟ್ಟು ಗ್ರಾಮಪಂಚಾಯತ್ ಎಸ್ ಎಲ್ ಆರ್ ಎಂ ಘಟಕದ ರಂಜನಿ ಮೊಗವೀರ, ಪಂಚವರ್ಣ ಯುವಕ ಮಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಉಪಾಧ್ಯಕ್ಷೆ ಪುಷ್ಭ ಹಂದಟ್ಟು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಕೃತಿದತ್ತ ಸಹಜ ಸೌಂದರ್ಯ ಹೊದಿರುವ ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರ ಭವಿಷ್ಯದಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಬೇಕು. ಈ ನಿಟ್ಟಿನಲ್ಲಿ ಎಲ್ಲಾ ಸಕ್ರೀಯ  ಪಾಲುದಾರರು ಪರಿಸರ ಸ್ನೇಹಿ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ಪೂರಕವಾದ ನೀಲನಕಾಶೆಯನ್ನು ಸಿದ್ಧಪಡಿಸಿ, ಶೀಘ್ರವಾಗಿ ಪ್ರಸ್ತುತಪಡಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ಕುರಿತಾಗಿ ಜಿಲ್ಲೆಯ ಪ್ರವಾಸೋದ್ಯಮ ಪಾಲುದಾರರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಡಲ ಕಿನಾರೆಗಳು, ರಮಣೀಯ ಪಶ್ಚಿಮ ಘಟ್ಟಗಳ ಶ್ರೇಣಿಗಳು, ಕಾನನಗಳು, ಝರಿಗಳು ಹಾಗೂ ಧಾರ್ಮಿಕ ಕ್ಷೇತ್ರಗಳು ಪ್ರಮುಖವಾಗಿದ್ದು, ಸಾವಿರಾರು ಪ್ರವಾಸಿಗರು ಆಗಮಿಸಿ ಜಿಲ್ಲೆಯ ಸೌಂದರ್ಯ ಕಣ್ತುಂಬಿಕೊಳ್ಳುತ್ತಿದ್ದಾರೆ. ಯಾವುದೇ ಪ್ರವಾಸೋದ್ಯಮ ಅಭಿವೃದ್ಧಿ ಚಟುವಟಿಕೆ ಕೈಗೊಳ್ಳುವ ಮುನ್ನ ಪ್ರವಾಸಿ ತಾಣಗಳಲ್ಲಿ ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ವಸತಿ ಸೇರಿದಂತೆ ಮತ್ತಿತರ ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತು ನೀಡುವ ರೀತಿಯಲ್ಲಿ ಯೋಜನೆ ರೂಪಿಸಿ ಪ್ರಸ್ತುತ ಪಡಿಸಲು ಮೊದಲ ಆದ್ಯತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ಗ್ರಾಮದ ಬಾಳೆಬೆಟ್ಟು ಬಸ್ಸು ನಿಲ್ದಾಣದ ಬಳಿ ಸಮೀಪದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ ಬಂಧಿತನನ್ನು ಬೇಳೂರು ಗ್ರಾಮದ ಆದಿತ್ಯ ಶೆಟ್ಟಿ (28) ಎಂದು ಗುರುತಿಸಲಾಗಿದೆ. ಇನ್ನೋರ್ವ ಸಂದೀಪ ಗಾಣಿಗ ನೂಜಿ ಎಂಬಾತ ಪರಾರಿಯಾಗಿ ತಲೆಮರೆಸಿಕೊಂಡಿದ್ದಾನೆ. ಐಪಿಎಲ್ ಕ್ರಿಕೆಟ್ ಪಂದ್ಯಾಟ ಸಂಬಂಧಪಟ್ಟು ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ ಬೆಟ್ಟಿಂಗ್ ಅಕ್ರಮ ದಂಧೆ ಯಲ್ಲಿ ತೊಡಗಿರುವ ಕುರಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಓರ್ವನನ್ನು ವಶಕ್ಕೆ ಪಡೆದುಕೊಂಡರು. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್‌ಇ ಸ್ಕೂಲ್‌ನಲ್ಲಿ ಯು.ಕೆ.ಜಿ. ಮಕ್ಕಳ ಗ್ರಾಜುಯೇಷನ್ ಡೇ ಕಾರ್ಯಕ್ರಮವನ್ನು ಇತ್ತೀಚಿಗೆ ಆಯೋಜಿಸಲಾಗಿತ್ತು. ಅತಿಥಿಗಳಾಗಿ ಆಗಮಿಸಿದ ವರ್ಷಿಣಿ ಪೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳ ಬಾಲ್ಯದಲ್ಲಿ ಹೆತ್ತವರು ಬಹಳಷ್ಟು ಮುತುವರ್ಜಿ ವಹಿಸಿ. ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಪೂರಕವಾಗಬೇಕು. ಮಕ್ಕಳ ಪ್ರಾರಂಭಿಕ ಬೆಳವಣಿಗೆ ಹಾಗೂ ಕಲಿಕೆಯಲ್ಲಿ ಹೆತ್ತವರ ಪಾತ್ರ ಮಹತ್ತರವಾಗಿರುತ್ತದೆ. ಮಕ್ಕಳ ಸೂಕ್ಷ್ಮ ಮನಸ್ಸಿನ ಬೆಳವಣಿಗೆಗೆ ಉತ್ತಮ ವಾತಾವರಣ ಕಲ್ಪಿಸಿ ಕೊಡುವುದು ಪೋಷಕರ ಕರ್ತವ್ಯವಾಗಿದೆ ಎಂದು ತಿಳಿಸಿದರು. ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾ ಪ್ರಾಸ್ತಾವಿಕ ಮಾತುಗಳನ್ನಾಡಿ, ಶಾಲಾ ಶೈಕ್ಷಣಿಕ ಚಟುವಟಿಕೆಗಳ ಕುರಿತು ವಿವರಿಸಿದರು. ಪೋಷಕರು ಮಕ್ಕಳೊಂದಿಗೆ ಸಮಯವನ್ನು ವ್ಯಯಿಸಿ ಅವರ ಸಂತೋಷದಲ್ಲಿ ಭಾಗವಹಿಸಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪದವಿ ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ಶುಭ ಕೋರಿ ಪೋಷಕರ ಸಹಕಾರವನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ…

Read More