ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಲಲ್ಲಿ 2026-27 ನೇ ಸಾಲಿನ 6ನೇ ತರಗತಿ ಪ್ರವೇಶಾತಿಗಾಗಿ, ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಏಪ್ರಿಲ್ 12 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಬೈಂದೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದೆ. ಪ್ರವೇಶ ಪತ್ರಗಳನ್ನು ಆನ್‌ಲೈನ್ https://dom.karnataka.gov.in ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು ಅಥವಾ ಜಿಲ್ಲಾ ಕಚೇರಿ, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಹಾಗೂ ಸಂಬAಧಪಟ್ಟ ವಸತಿ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2573596, 2574596, 08258-231101 ಮತ್ತು 08254-230370 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರಿಗೆ, ಬೆಂಗಳೂರಿನ ನಗರ ವಿಶ್ವವಿದ್ಯಾಲಯ (ಡಾ. ಮನಮೋಹನ್‌ಸಿಂಗ್ ವಿಶ್ವವಿದ್ಯಾಲಯ) ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದೆ. ಏಪ್ರಿಲ್ 04ರಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿರುವ 5ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಈ ಗೌರವ ಪ್ರದಾನ ನೇರವೇರಲಿದೆ. ಡಾ. ಎಂ. ಮೋಹನ್ ಆಳ್ವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷರಾಗಿದ್ದು, ಕರಾವಳಿ ಕರ್ನಾಟಕದಲ್ಲಿ ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ಪ್ರದೇಶಗಳಿಗೆ ತಲುಪಿಸಿದ ಪ್ರಮುಖರಲ್ಲಿ ಅಗ್ರ ಗಣ್ಯರು. ಮೂಡುಬಿದಿರೆ ಕೇಂದ್ರವಾಗಿ ಕಾರ್ಯನಿರ್ವಹಿಸುವ ಆಳ್ವಾಸ್ ಸಂಸ್ಥೆಗಳ ಮೂಲಕ ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ ನೂರಾರು ಕೋರ್ಸ್ಗಳನ್ನು ಪ್ರಾರಂಭಿಸಿ ಸಾವಿರಾರು ವಿದ್ಯಾರ್ಥಿಗಳ ಬದುಕನ್ನು ರೂಪಿಸಿದ್ದಾರೆ. ಅವರ ನೇತೃತ್ವದಲ್ಲಿ ಶಿಕ್ಷಣ ಮಾತ್ರವಲ್ಲದೆ ಕಲೆ, ಸಂಸ್ಕೃತಿ, ಕ್ರೀಡೆ ಮತ್ತು ವ್ಯಕ್ತಿತ್ವ ವಿಕಸನಕ್ಕೂ ಸಮಾನ ಮಹತ್ವ ನೀಡಲಾಗಿದೆ. “ಆಳ್ವಾಸ್ ನುಡಿಸಿರಿ ವಿರಾಸತ್” ಮೊದಲಾದ ಮಹತ್ವದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಡಿ ಕನ್ಯಾಣದಲ್ಲಿ ಕೊಂಕಣಿ ಖಾರ್ವಿ ಲೋಕವೇದ್ ಕಲಾ ಮಾಂಡ್ ಬ್ರಹ್ಮಾವರ ಇದರ ಪ್ರಸ್ತುತಿಯಲ್ಲಿ ಸಮಾಜಸೇವಕ ನರಸಿಂಹ ಆರ್ಕಾಟಿ ಜೀವನ ಚರಿತ್ರೆ, ಪುಸ್ತಕ ಬಿಡುಗಡೆ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರಂಗಮಂಟಪದಲ್ಲಿ ನೆರವೇರಿತು. ಸಭಾಧ್ಯಕ್ಷತೆಯನ್ನು ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಹಾಗೂ ಗುರುವಂದನಾ ಸಮಿತಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಇದರ ಅಧ್ಯಕ್ಷ ಬಿ. ಮಾಧವ ಖಾರ್ವಿ ವಹಿಸಿದರು. ಕ.ಸಾ.ಪ. ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆಯನ್ನು ನೀಡಿದರು. ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಂಘ ಇದರ ಅಧ್ಯಕ್ಷ ರವಿ ಟಿ. ನಾಯಕ್ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ನೆರವೇರಿಸಿದರು. ಪುಸ್ತಕದ ಸಂಕಲನಕಾರ ಆಲ್ಫೋನ್ಸಸ್ ಡಿಸೋಜಾ ಇವರನ್ನು ಗೌರವಿಸಲಾಯಿತು. ಖಜಾಂಚಿ ಸದಾನಂದ ಖಾರ್ವಿ ಮಾತನಾಡಿ, ಸ್ವಾತಂತ್ರ್ಯ ಪೂರ್ವ ಕಾಂಗ್ರೆಸ್‌ನ ಕರಾವಳಿಯ ಮುತ್ಸದ್ದಿ ಹಾಗೂ ಕರಾವಳಿಯ ಗಾಂಧಿ ಎಂದು ಸಂಭೋದಿಸಲ್ಪಡುವ ಕೀರ್ತಿಶೇಷ್ಠ ನರಸಿಂಹ ಆರ್ಕಾಟಿ ಅವರ ಬಗ್ಗೆ ಸಂಸ್ಥೆ ಉದಯವಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಿತ್ರ ಮಂಡಳಿ, ಕೋಟ ಇವರ ವತಿಯಿಂದ ಏಪ್ರಿಲ್ 04ರಂದು ಕೋಟದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿ ರಿಷಿಕಾ ದೇವಾಡಿಗ ಅವರಿಗೆ “ಅಣ್ಣಾಜಿ ಬಲ್ಲಾಳ ಬಾಲ ಪುರಸ್ಕಾರ” ಪ್ರದಾನ ಮಾಡಲಾಗುತ್ತಿದೆ. ಕುಂದಾಪುರ ತಾಲೂಕಿನ ಹಟ್ಟಿಅಂಗಡಿಯ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ರಿಷಿಕಾ ಅವರು ಬೈಂದೂರಿನ ರಾಮ ದೇವಾಡಿಗ ಮತ್ತು ರೂಪಾ ದಂಪತಿಯ ಸುಪುತ್ರಿ. ಅತಿ ಚಿಕ್ಕ ವಯಸ್ಸಿನಲ್ಲಿ ಸಾಹಿತ್ಯ, ಸಂಸ್ಕೃತಿ ಮತ್ತು ಕಲಾ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗಳನ್ನು ಮಾಡಿರುವ ಅವರು ರಾಜ್ಯಮಟ್ಟದಿಂದ ಶಾಲಾಮಟ್ಟದವರೆಗೆ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 2025ರ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿರುವುದು ಅವರ ಸಾಹಿತ್ಯಾಸಕ್ತಿ ಮತ್ತು ನಾಯಕತ್ವವನ್ನು ತೋರಿಸುತ್ತದೆ. ‘ಮೊದಲ ಹೆಜ್ಜೆ’ ಕಥಾಸಂಕಲನ ಪುಸ್ತಕವನ್ನು ಪ್ರಕಟಿಸಿರುವ ಅವರು ಕಾರ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಬಾಲ ವಿದ್ಯಾರ್ಥಿ ಸಾಹಿತಿ’ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಭಾಷಣ, ದೇಶಭಕ್ತಿ ಗೀತಾ ವಾಚನ, ಏಕಪಾತ್ರಾಭಿನಯ ಮತ್ತು ಪುಸ್ತಕ ವಿಮರ್ಶೆ ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ರಾಷ್ಟ್ರೀಯ ಹೆದ್ದಾರಿಯ ಸನಿಹದಲ್ಲಿರುವ ಮಣೂರು ಶ್ರೀ ಮಹಾಲಿಂಗೇಶ್ವರ ಪಂಚಮುಖಿ ಹೇರಂಭ ಮಹಾಗಣಪತಿ ದೇಗುಲದ ವಾರ್ಷಿಕ ರಥೋತ್ಸವ ಕಾರ್ಯಕ್ರಮ ಗುರುವಾರ ಸಂಪನ್ನಗೊಂಡಿತು. ರಥೋತ್ಸವವು ಕೋಟ ರಾಷ್ಟ್ರೀಯ ಹೆದ್ದಾರಿಯ ಮೂಲಕ ಅಮೃತೇಶ್ವರಿ ದೇಗುಲದ ಸಮೀಪ ತೆರಳಿ ಮುಂದುವರಿಯಿತು. ಭಕ್ತ ಸಮುದಾಯ ಮಹಾಲಿಂಗೇಶ್ವರನ ತೇರನೆಳೆದು ಸಂಭ್ರಮಿಸಿಕೊoಡರು. ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ವೈಭವದ ರಥೋತ್ಸವ ಸುಮಾರು ಒಂದು ವರೆ ಕಿ.ಮೀ ಸಂಚರಿಸಿದ ರಥೋತ್ಸವದಲ್ಲಿ ಕೀಲು ಕುದುರೆ, ವಿವಿಧ ರೀತಿಯ ಗೊಂಬೆಗಳು, ಸ್ತಬ್ಧ ಚಿತ್ರಗಳು, ಕೇರಳ ಚೆಂಡೆ, ವಾದ್ಯಘೋಷಗಳು, ತಟ್ಟಿರಾಯ ಹೀಗೆ ನಾನಾ ರೀತಿಯ ವಿಶೇಷತೆಗಳು ರಥೋತ್ಸವದಲ್ಲಿ ಕಂಡುಬoತು. ದೇಗುಲದ ಅಧ್ಯಕ್ಷ ಸತೀಶ್ ಹೆಚ್ ಕುಂದರ್,ಟ್ರಸ್ಟಿಗಳಾದ ರವಿ ಐತಾಳ್,ಅಶೋಕ್ ಶೆಟ್ಟಿ, ದಿವ್ಯ ಪ್ರಭು,ಅಚ್ಯುತ್ ಹಂದೆ,ಸುಫಲ ಶೆಟ್ಟಿ,ದಿನೇಶ್ ಆಚಾರ್, ಚಂದ್ರ ಹರ್ತಟ್ಟು,ಜೀರ್ಣೋದ್ಧಾರ ಸಮಿತಿಯ ಪ್ರಮುಖರಾದ ಅರುಣಾಚಲ ಮಯ್ಯ,ವಿಷ್ಣುಮೂರ್ತಿ ಮಯ್ಯ, ಮಹೇಶ್ ಹೊಳ್ಳ, ಗೋಪಾಲ ಪೈ, ರಾಜೇಂದ್ರ ಉರಾಳ, ಸೇರಿದಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಭಾರತೀಯ ಜೀವ ವಿಮಾ ನಿಗಮ ಮೈಕ್ರೋ ಇನ್ಸೂರೆನ್ಸ್ ವಿಭಾಗುಡುಪಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬ್ರಹ್ಮಾವರ ತಾಲೂಕು ಇವರ ಆಶ್ರಯದಲ್ಲಿ ವಿಮಾ ಗ್ರಾಮ 2024-25 ಅಂಗವಾಗಿ ಕೋಟದ ಕಾಸನಗುಂದು ಅಂಗನವಾಡಿಗೆ ಸೋಲಾರ್ ದಾರಿದೀಪ ಹಾಗೂ ವಾಟರ್ ಫಿಲ್ಟರ್‌ನ್ನು ಕೊಡುಗೆಯಾಗಿ ನೀಡಿದ್ದು ಅದನ್ನು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ಗಣೇಶ ಬಿ. ಲೋಕಾರ್ಪಣೆಗೊಳಿಸಿದರು. ಭಾರತೀಯ ಜೀವವಿಮಾ ಸಂಸ್ಥೆಯ ದಿನೇಶ್ ಪ್ರಭು ಸೋಲಾರ್ ದೀಪವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್, ಕೋಟ ಗ್ರಾಮಪಂಚಾಯತ್ ಮಾಜಿ ಸದಸ್ಯ ಚಂದ್ರ ಪೂಜಾರಿ, ಲೆಕ್ಕಪರಿಶೋಧಕ ಶೇಖರ್, ಸ್ಥಳೀಯ ಕೃಷಿಕ ರಾಘವೇಂದ್ರ ಮಡಿವಾಳ, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿ ಸರೋಜ ಪೂಜಾರಿ, ಒಕ್ಕೂಟದ ಉಪಾಧ್ಯಕ್ಷೆ ಸ್ಮಿತಾ ರಾಘವೇಂದ್ರ, ಅಂಗನವಾಡಿ ಕಾರ್ಯಕರ್ತೆ ನೇತ್ರಾ, ಸಹಾಯಕಿ ಜಲಜ ಮತ್ತಿತರರು ಉಪಸ್ಥಿತರಿದ್ದರು. ಗ್ರಾ.ಯೋ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯುವ ಜನಾಂಗ ಸಂಘಟನೆಯ ಮೂಲಕ ಸಮಾಜ ಕಟ್ಟುವ ಕಾಯಕದಲ್ಲಿ ನಿರತರಾಗಿದ್ದಾರೆ ಇದಕ್ಕೆ ಮಣೂರು ಫ್ರೆಂಡ್ಸ್ ಸಾಕ್ಷಿ ಎಂದು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಹೇಳಿದರು. ಅವರು ಮಣೂರು ಮಹಾಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ಗೀತಾನಂದ ವೇದಿಕೆಯಲ್ಲಿ ಮಣೂರು ಫ್ರೆಂಡ್ಸ್ ಮಣೂರು ಇದರ ರಜತ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹಬ್ಬ ಹರಿದಿನಗಳನ್ನು ವೇದಿಕೆಯಾಗಿರಿಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡ ಸಾಧಕರನ್ನು ಗುರುತಿಸುವ ಕಾರ್ಯ ಅತ್ಯಂತ ಪ್ರಶಂಸನೀಯ, ಸಮಾಜದ ಬಗ್ಗೆ ಆಗಾಗ ತುಡಿತ ಹೊಂದಿ ತಮ್ಮೂರ ಅಭಿವೃದ್ಧಿಗೆ ಶ್ರಮಿಸುವ ಸಂಘಟನೆಗಳು ಮತ್ತಷ್ಟು ಹುಟ್ಟಿಕೊಳ್ಳಲಿ ರಜತ ಸಂಭ್ರಮದಲ್ಲಿರುವ ಮಣೂರು ಫ್ರೆಂಡ್ಸ್ ಕಾರ್ಯದಲ್ಲಿ ಸದಾ ಕೈಜೋಡಿಸುವುದಾಗಿ ಅಭಯ ನೀಡಿದರು. ಈ ಸಂದರ್ಭದಲ್ಲಿ ಅಕ್ಷರ ಸಂತ ಡಾ. ಹರೇಕಳ ಹಾಜಬ್ಬ ಅವರಿಗೆ ರಜತ ಸಂಭ್ರಮ ಪುರಸ್ಕಾರ ನೀಡಿ ಗೌರವಿಸಲಾಯಿತು. ಸ್ಥಳೀಯರಾದ ರವೀಂದ್ರ ಪೈ ಅವರಿಗೆ ಸಾಧಕ ಪುರಸ್ಕಾರ, ನಿಧಿ ಪೈಗೆ ಪ್ರತಿಭಾ ಪುರಸ್ಕಾರ, ಸ್ಥಳೀಯ ಸಾಧಕರಾದ ಕಂಬಳ ಕ್ಷೇತ್ರದ ರಘುರಾಮ ಶೆಟ್ಟಿ,ಶಿವರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಾರ್ವಕಾಲಿಕ ಸಾಧನೆಯೊಂದಿಗೆ 785 ಕೋಟಿ ರೂ. ವ್ಯವಹಾರ ನಡೆಸಿದ್ದು, 1.50 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಿ. ವೆಂಕಟೇಶ ಶೆಣೈ ತಿಳಿಸಿದ್ದಾರೆ. ಬುಧವಾರ ಸಂಘದ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಸಹಕಾರಿಯು ಒಟ್ಟು ಮೂರು ಶಾಖೆಗಳ ಮೂಲಕ 104 ಕೋಟಿ ರೂ. ಠೇವಣಿ ಸಂಗ್ರಹಿಸಿದೆ. ಸಾಲ ಮತ್ತು ಮುಂಗಡ 89.44 ಕೋಟಿ ರೂ., ಪಾಲು ಬಂಡವಾಳ 2.76 ಕೋಟಿ ರೂ., ವಿವಿಧ ಸಹಕಾರಿ ಬ್ಯಾಂಕ್‌ಗಳಲ್ಲಿ 30.93 ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಮೀಸಲು ನಿಧಿ 6.55 ಕೋಟಿ ಮತ್ತು ಅನುತ್ಪಾದಕ ಸಾಲಗಳಿಗೆ 87.37 ಲಕ್ಷ ರೂ. ಮೀಸಲಿರಿಸಲಾಗಿದೆ ಎಂದು ತಿಳಿಸಿದರು. 1920 ರಲ್ಲಿ ಕಾರ್ಯಾರಂಭವಾದ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಎಲ್ಲ ಶಾಖೆಗಳು ಪ್ರಸ್ತುತ ಗಣಕೀಕೃತಗೊಂಡು ಕೋರ್ ಸಿಸ್ಟಂ ಸಾಫ್ಟ್‌ವೇರ್ ಅಳವಡಿಸಿದೆ. ಕಳೆದ ವರ್ಷ ಸದಸ್ಯರಿಗೆ ಶೇ.17…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರಮಟ್ಟದಲ್ಲಿ ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರಗಳಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೊಸ ಮೈಲುಗಲ್ಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನ ಆಶ್ರಯದಲ್ಲಿ ಎಳೆಯ ಮನಸ್ಸುಗಳನ್ನು ಒಗ್ಗೂಡಿಸುವ ‘ಕ್ರಿಯೇಟಿವ್ ಚಿಲಿಪಿಲಿ-2026’ ಮೂರು ದಿನಗಳ ಬೇಸಿಗೆ ಶಿಬಿರವು ಉದ್ಘಾಟನೆಗೊಂಡಿತು. ಸಂಸ್ಥೆಯ ಸಹ ಸಂಸ್ಥಾಪಕರಾದ ಅಶ್ವತ್ ಎಸ್ .ಎಲ್. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಪಾಠ ಪ್ರವಚನಗಳ ಜೊತೆಗೆ ಬದುಕಿನ ಮೌಲ್ಯಗಳನ್ನು ಕಲಿಯಬೇಕು. ಮಕ್ಕಳು ತಮ್ಮ ಸುಂದರ ಬಾಲ್ಯವನ್ನು ಮೊಬೈಲ್‌ನಿಂದ ದೂರವಿದ್ದು ತಮ್ಮ ಬದುಕನ್ನು ಸವಿಯಬೇಕೆಂಬ ಸದಾಶಯವನ್ನಿಟ್ಟುಕೊಂಡು ಈ ಚಿಲಿಪಿಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತೇವೆ. ಮಾತ್ರವಲ್ಲದೆ ಕ್ರಿಯೇಟಿವ್ ಸಂಸ್ಥೆಯ ಹೊಸ ಪರಿಕಲ್ಪನೆಯಾದ ಎಳೆಯ ಮನಸ್ಸುಗಳಿಗೆ ಮುಂದೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆಯನ್ನು ಎದುರಿಸಲು ಮತ್ತು ನಮ್ಮ ಸಂಸ್ಕೃತಿ, ದೇಶಾಭಿಮಾನವನ್ನು ಹೊಂದಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲನ್ನು ಪ್ರಾರಂಭಿಸುತ್ತಿದ್ದೇವೆ. ಇದರ ಮೊದಲ ಹೆಜ್ಜೆಯಾಗಿ ಇಂದು ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದ್ದೇವೆ ಎಂದು ನುಡಿದರು. ಸಹ ಸಂಸ್ಥಾಪಕರಲ್ಲಿ ಓರ್ವರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ 2026ನೇ ಸಾಲಿನ ‘ಯುವ’ ಅಂತರ್-ಕಾಲೇಜು ಸಾಂಸ್ಕೃತಿಕ ಮತ್ತು ವ್ಯವಹಾರ ನಿರ್ವಹಣೆ ಸ್ಪರ್ಧೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ತಂಡವು ಸಮಗ್ರ ಪುರಸ್ಕಾರವನ್ನು ಗಳಿಸಿದೆ. ನಿಖಿಲ್ ಮತ್ತು ವೇದಾಂತ ಬ್ಯುಸಿನೆಸ್ ಕ್ವಿಜ್‌ನಲ್ಲಿ ಪ್ರಥಮ ಸ್ಥಾನ ಪಡೆದ ತಂಡದ ಸದಸ್ಯರನ್ನು ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿಯವರು, ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರರು ಅಭಿನಂದಿಸಿದ್ದಾರೆ.
