ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಆರುಣ್ಯ 2026ರ ಸಮಾರೋಪ ಸಮಾರಂಭ ಕಾಲೇಜಿನಲ್ಲಿ ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಉದ್ಯಮಿ ಜಯಸೂರ್ಯ ಪೂಜಾರಿ ಮಾತನಾಡಿ, ವಿದ್ಯಾರ್ಥಿ ಜೀವನವು ವ್ಯಕ್ತಿಯ ಭವಿಷ್ಯವನ್ನು ರೂಪಿಸುವ ಅತ್ಯಂತ ಮಹತ್ವದ ಹಂತವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಯಾವುದಾದರೂ ಒಂದು ವಿಶಿಷ್ಟ ಪ್ರತಿಭೆ, ಸಾಮರ್ಥ್ಯ ಮತ್ತು ಸೃಜನಶೀಲತೆ ಅಡಗಿರುತ್ತದೆ. ಆ ಪ್ರತಿಭೆ ಗುರುತಿಸಿ ಬೆಳೆಸಲು ಸೂಕ್ತವಾದ ಅವಕಾಶ ದೊರೆತಾಗ ಮಾತ್ರ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವನ್ನು ಬೆಳೆಸಿಕೊಂಡು, ಭವಿಷ್ಯದಲ್ಲಿ ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಬಹುದು ಎಂದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್. ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಯಶಸ್ಸಾಗಿ ಪರಿವರ್ತಿಸಲು ಅವಕಾಶ, ಮಾರ್ಗದರ್ಶನ ಮತ್ತು ಪರಿಶ್ರಮ ಅಗತ್ಯ. ಆದ್ದರಿಂದ ಇಂದಿನ ಕಾರ್ಯಕ್ರಮ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆಗಳನ್ನು ಒದಗಿಸಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಬರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾತುಗಳು ಸಂಸ್ಕ್ರತ ಭೂಯಿಷ್ಠವಾಗಿದ್ದರೆ ಸಭ್ಯ. ಯಾವುದೇ ಭಾಷೆಯ ಮೇಲೆ ಹಿಡಿತ ಬರಬೇಕಾದರೆ ಮೂಲಬೇರು ಸರಿಯಾಗಿರಬೇಕು. ಅಮೂಲ್ಯವಾದ ಜ್ಞಾನದಿಂದ ಪ್ರಯತ್ನಶಾಲಿಗಳಾಗಿ ಜಗತ್ತಿನ ಹಲವು ಸಂಗತಿಗಳನ್ನು ಪಡೆದುಕೊಳ್ಳಬಹುದು. ಮಾತೃಸ್ಥಾನದಲ್ಲಿ ಕಂಗೊಳಿಸುವ ಸಂಸ್ಕ್ರತದ ಅಭ್ಯಾಸವು ಪರಿಪೂರ್ಣ ಜ್ಞಾನ ಸಂಗ್ರಹಕ್ಕೆ ತುಂಬ ಸಹಕಾರಿಯಾಗುತ್ತದೆ ಎಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಸಂಸ್ಕ್ರತ ಉಪನ್ಯಾಸಕರಾದ ಬಾಲಕೃಷ್ಣ ನಕ್ಷತ್ರಿ ಕರೆ ನೀಡಿದರು. ಅವರು ಇಲ್ಲಿನ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಸಂಸ್ಕ್ರತೋತ್ಸವ ‘ಶ್ರಾವಣಿ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ನವೀನ್ ಕುಮಾರ ಶೆಟ್ಟಿ ಅವರು ಮಾತನಾಡಿ, ‘ಉನ್ನತ ಬುದ್ಧಿಮತ್ತೆಯ ವಿದ್ಯಾರ್ಥಿಗಳು ಆಯ್ದುಕೊಳ್ಳುವ ಭಾಷೆಯೆಂದಿದ್ದ ಸಂಸ್ಕ್ರತವು ಅಭಿವ್ಯಕ್ತಿಯಲ್ಲಿ ಸರಳೀಕರಣಗೊಂಡು ಹೆಚ್ಚೆಚ್ಚು ವಿದ್ಯಾರ್ಥಿಗಳ ಆಯ್ಕೆಯ ವಿಷಯವಾಗುತ್ತಿರುವುದು ಸಂತಸ ‘ ಎಂದು ತಿಳಿಸಿದರು. ಕಳೆದ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಸಂಸ್ಕ್ರತದಲ್ಲಿ ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿನಿ ಅಕ್ಷಯಾ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಇಲ್ಲಿ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಸರಕಾರದಿಂದ ಕೊಡ ಮಾಡಲ್ಪಟ್ಟ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ ಬಿಇಓ ಕಚೇರಿ ಅಧ್ಯಕ್ಷರಾದ ಮನೋರಾಜ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೈಂದೂರಿನ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬೈಂದೂರು ತಾಲೂಕು ಗ್ಯಾರೆಂಟಿ ಯೋಜನೆಯ ಅಧ್ಯಕ್ಷರಾದ ಮೋಹನ್ ಪೂಜಾರಿ, ಪಟ್ಟಣ ಪಂಚಾಯಿತಿ ಬೈಂದೂರಿನ ಆರೋಗ್ಯ ನಿರೀಕ್ಷಕರಾದ ಸಂತೋಷ್, ಕಂಬದ ಕೋಣೆ ಸಂಯೋಜಕ ವೃತ್ತದ ECO ಸತ್ಯನಾ ಕೊಡೇರಿ, ಬೈಂದೂರು ಸಂಯೋಜಕ ಕೇಂದ್ರದ Eco ರಾಜೇಶ್, ಬೈಂದೂರು ಬಿ ಆರ್ ಪಿ ಮಂಜುನಾಥ ದೇವಾಡಿಗ, ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾನ್ಯಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಶ್ರವಣೋಪಕರಣ, ವೀಲ್ ಚೇರ್, ಎಂ ಆರ್ ಕಿಟ್ ಮುಂತಾದ ಸಾಧನ ಸಲಕರಣೆಗಳನ್ನುವಿತರಿಸಿದರು. ಸಿಆರ್‌ಪಿಗಳಾದ ಗಣೇಶ್ ಪೂಜಾರಿ ರಾಮನಾಥ ಮೇಸ್ತ ಬಿಐಈಆರ್ ಟಿ ನಾಗೇಶ ಸಹಕರಿಸಿದರು. ಬಿಐಇಆರ್‌ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಧರ್ಮಶಾಸ್ತ್ರದಲ್ಲಿ ನೀರಿನ ಶುದ್ಧತೆಗೆ ವಿಶೇಷ ಒತ್ತನ್ನು ನೀಡಲಾಗಿದ್ದು, ನೀರಿಗೆ ಉಗುಳ ಬಾರದು ಎಂದು ಶಾಸ್ತ್ರ ಸೂಚಿಸುತ್ತದೆ. ಗಂಗೆಯಲ್ಲಿ ಆಚಮನ ಮಾಡಬಾರದು ಎಂಬ ನಿಯಮವೂ ಇದೆ. ನೀರನ್ನು ಮಲಿನ ಮಾಡುವವರಿಗೆ ನರಕಗಳನ್ನು ಹೇಳಲಾಗಿದೆ. ಧರ್ಮಶಾಸ್ತ್ರದ ಪಾಲನೆಯನ್ನು ದೇಶವು ಬಿಟ್ಟಿರುವುದರಿಂದ ದೇಶದ ಹಾಗೂ ನೀರಿನ ಪರಿಸ್ಥಿತಿ ದುಃಸ್ಥಿತಿಯನ್ನು ತಲುಪಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ 11.09.2026 ರಂದು ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ನೀರಿನ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಭರತನು ‘ನಾನು ರಾಮನಿಗೆ ವಂಚನೆ ಮಾಡಿದ್ದರೆ ನೀರನ್ನು ಮಲಿನ ಮಾಡಿದರೆ ಸಿಗುವ ನರಕವು ಸಿಗಲಿ’ ಎಂದು ರಾಮಾಯಣದಲ್ಲಿ ಶಪಥವನ್ನು ಮಾಡುತ್ತಾನೆ. ಇದು ಜಲ ಮೂಲಗಳ ಕುರಿತಾಗಿ ನಮ್ಮ ಪೂರ್ವಜರಿಗಿದ್ದ ಗೌರವವನ್ನು ಸೂಚಿಸುತ್ತದೆ ಎಂದು ಪ್ರಾಚೀನ ಭಾರತದಲ್ಲಿ ನೀರಿಗೆ ನೀಡಿದ್ದ ಮಹತ್ವವನ್ನು ವಿವರಿಸಿದರು. ಆಯುರ್ವೇದದಲ್ಲಿ ಚಂದ್ರಕಾಂತ ಮಣಿಯ ನೀರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಮತ್ತು ಶ್ರೀ ಸಿದ್ಧಿಶೈಕ್ಷಣಿಕ ಪ್ರತಿಷ್ಠಾನ, ಹಟ್ಟಿಯಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ವರ್ಷಂಪ್ರತಿ ನಡೆಯುವಂತೆ ಈ ವರ್ಷವೂ ಸಹ ತಾಲೂಕು ಮಟ್ಟದ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾಸ್ಪರ್ಧೆಗಳ ಸಮಾರೋಪವು ನಡೆಯಿತು. ಸಮಾರೋಪ ಸಮಾರಂಭದ ಘನಾಧ್ಯಕ್ಷರಾದ, ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಉಪಾಧ್ಯಕ್ಷರಾದ ವೇದಮೂರ್ತಿ ಹೆಚ್. ಬಾಲಚಂದ್ರ ಭಟ್ಟರು ದೇವಾಲಯದ ಸಹಯೋಗದ ಕಾರ್ಯಕ್ರಮವನ್ನು ಮಾತನಾಡಿ, ಸಿದ್ಧಿವಿನಾಯಕನ ತಾಣವಾದ ಇಲ್ಲಿ ಬಂದು ಭಾಗವಹಿಸಿ ಸ್ಪರ್ಧೆಗಳಲ್ಲಿ ನಿಮ್ಮ ಪ್ರಯತ್ನವನ್ನು ನಡೆಸಿರುವ ಸರ್ವರೂ ಸಿದ್ಧಿಯನ್ನು ಪಡೆವಂತವರಾಗಲಿ ಎಂದು ಹಾರೈಸಿದರು. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರಥಮ ದರ್ಜೆ ಕಾಲೇಜು ಶಂಕರನಾರಾಯಣದ ಪ್ರಾಧ್ಯಾಪಕರಾದ ಶ್ರೀ ಪಾಂಡುರಂಗ ರವರು ಗೆದ್ದವರಿಗೆ ಅಭಿನಂದಿಸಿ ಮಾತಾಡುತ್ತಾ ಸೋತವರು ಕುಗ್ಗಲೇ ಬಾರದು. ಇರುವವರಲ್ಲಿ ಮೂವರನ್ನು ಆರಿಸುವಾಗ ನಿಮ್ಮಲ್ಲಿ ಕೆಲವು ಕೊರತೆಗಳನ್ನು ಕಂಡಿರಬಹುದು. ಅವುಗಳನ್ನು ತಿದ್ದಿ ಸಾಧಿಸಿ ಮುಂದಿನ ವರ್ಷಗಳಲ್ಲಿ ತಮ್ಮ ಪ್ರತಿಭೆಯನ್ನು ಹೆಚ್ಚಿಸಿಕೊಳ್ಳಬೇಕು. ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸಪ್ಟೆಂಬರ್ 16ರಿಂದ 18ರವರೆಗೆ ಪಾಂಡಿಚೇರಿಯ ಇಂದಿರಾ ಗಾಂಧಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ನಡೆಯುವ 37ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್‌ನ 22 ಕ್ರೀಡಾಪಟುಗಳು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಭಾಗವಹಿಸುತ್ತಿರುವ ಕ್ರೀಡಾಪಟುಗಳ ಹೆಸರು :ಬಾಲಕರ ವಿಭಾಗದಲ್ಲಿ:ದಯಾನಂದ – (400ಮೀ), ನೋವಲ್ ಆರ್ ಪಿ- (ಉದ್ದ ಜಿಗಿತ), ನಿತಿನ್ ಎಲ್‌ಜಿ – (ಚಕ್ರ ಎಸೆತ), ರೂಪೇಶ್ – (ಪೋಲೋ ವಾಲ್ಟ್), ಅಬ್ದುಲ್ ರಜಕ್ ಶಿಗ್ಗಾನ – (ಹ್ಯಾಮರ್ ತ್ರೋ), ಸಾಹಿಲ್ – (100 ಮೀ), ಸಮರ್ಥ್ ಸಂಜೀವ್ ಕುಮಾರ್ – (1000ಮೀ), ಆಕಾಶ್ ಹುಕ್ಕೇರಿ – (110ಮೀ ಹರ್ಡಲ್ಸ್), ಜಸ್ವೀನ್ ಥೋಮಸ್ – (ಎತ್ತರ ಜಿಗಿತ), ದಿಶಾಂತ್– (ಉದ್ದ ಜಿಗಿತ), ಹೆಚ್ ಮೈಲಾರಿ – (ಚಕ್ರ ಎಸೆತ), ಆರಂಭಮ್ ರಾಜು – (60ಮೀ), (80ಮೀ ಹರ್ಡಲ್ಸ್), ಕೌಶಿಕ್ ಪಿ ಶೆಟ್ಟಿಗಾರ್ – (80 ಮೀ ಹರ್ಡಲ್ಸ್), ಹರ್ಷದ್ ಗೌಡ – (ಉದ್ದ ಜಿಗಿತ), ಮೋಕ್ಷಿತ್ ಆರ್ ಗೌಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭರತ್ ಪ್ರೆಸ್ ಎದುರುಗಡೆಯ ಡಿ ಮಾರ್ಟ್‌ನಲ್ಲಿ ವಿವಿಧ ಹುದ್ದೆಗಳಿಗೆ ಸೆಪ್ಟಂಬರ್ 16ರಂದು ಬೆಳಗ್ಗೆ 10.30ಕ್ಕೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಶಾಲಾ – ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಯುವ ಸಂಸತ್ತು ಸಭೆಗೆ ಸೆಪ್ಟಂಬರ್ 15ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯುವ ಸಂಸತ್ತು ಸಭೆಯ ಕುರಿತು ಮಾಹಿತಿ ನೀಡಿ ಮಾತನಾಡಿದರು. ಪ್ರಜಾಪ್ರಭುತ್ವ ತತ್ವದ ಅನುಸರಣೆಯಲ್ಲಿ ರಾಜ್ಯವು ದೇಶಕ್ಕೆ ಮಾದರಿಯಾಗಿದೆ. ಐತಿಹಾಸಿಕ ಪ್ರಜಾಪ್ರಭುತ್ವ ಚಲನಶೀಲತೆಯನ್ನು ಮತ್ತಷ್ಟು ವಿಸ್ತರಿಸುವ ಹಾಗೂ ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ಜಿಲ್ಲೆಯ ಶಾಲಾ ಹಾಗೂ ಕಾಲೇಜು ಮಕ್ಕಳಿಗೆ ಯುವ ಸಂಸತ್ತು ಸಭೆಯನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ ಎಂದರು. ಸೆಪ್ಟಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಯೋಜಿಸಬೇಕು. ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಸೆ. 16 ರಿಂದ ತಾಲೂಕು ಮಟ್ಟದ ಯುವ ಸಂಸತ್ತು ಸಭೆಗಳ ಸ್ಫರ್ಧೆಗಳು ಆರಂಭವಾಗಲಿದ್ದು, ಅಕ್ಟೋಬರ್ 10 ರ ಒಳಗಾಗಿ ತಾಲೂಕು ಮಟ್ಟದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿ. ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ-ಒನ್, ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 01 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kssd.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050770004, 8050770005 ಅಥವಾ ಜಿಲ್ಲಾ ಕಚೇರಿಯ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಣ್ಣಿನಿಂದ ನಿರ್ಮಿತ ಗಣಪತಿ ಮೂರ್ತಿಗಳ ಪ್ರತಿಷ್ಠಾನ ಮಾಡುವುದರೊಂದಿಗೆ ಶ್ರದ್ಧಾಭಕ್ತಿಯಿಂದ ಪರಿಸರ ಸ್ನೇಹಿ ಗೌರಿ – ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕರೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬ ಆಚರಣೆಯ ಸಲುವಾಗಿ ಕಾನೂನು ಸುವಸ್ಯವಸ್ಥೆಗೆ ಸಂಬಂಧಿಸಿದಂತೆ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನ ಗೌರಿ – ಗಣೇಶ ಹಬ್ಬವನ್ನು ಇದೇ ಸೆಪ್ಟೆಂಬರ್ 13 ಮತ್ತು 14 ರಂದು ಆಚರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸುವುದರೊಂದಿಗೆ ನೈಸರ್ಗಿಕ ಜಲಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕು. ಪ್ಲಾಸ್ಟರ್ ಆಫ್ ಪ್ಯಾರಿಸ್ ಅಥವಾ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳು ನೈಸರ್ಗಿಕವಾಗಿ ನೀರಿನಲ್ಲಿ ಕರಗುವುದಿಲ್ಲ. ಇವು ಮಾಲಿನ್ಯ ಉಂಟು ಮಾಡುವುದರೊಂದಿಗೆ ಜಲಚರಗಳಿಗೆ ಹಾನಿ ಉಂಟು ಮಾಡುತ್ತದೆ. ಇದಕ್ಕೆ ಆಸ್ಪದ ನೀಡಬಾರದು ಎಂದರು. ನೈಸರ್ಗಿಕ ಜಲ ಮೂಲಗಳ ಮೇಲಿನ ಒತ್ತಡ ಕಡಿಮೆ ಮಾಡಲು…
