ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಹಿಳಾ ಮಂಡಲ ಪಾಂಡೇಶ್ವರ ಸಾಸ್ತಾನ ಇಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕ ಮಹಿಳೆಯರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ, ಆಟೋಟ ಸ್ಪರ್ಧೆ, ಬಹುಮಾನ ವಿತರಣೆ ಕಾರ್ಯಕ್ರಮ ಭಾನುವಾರ ಜರಗಿತು. ಮಹಿಳಾ ಮಂಡಲದ ಅಧ್ಯಕ್ಷೆ ಸುಮಿತ್ರಾ ಸುಧಾಕರ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಮಹಿಳಾ ಮಂಡಲದ ಮಾಜಿ.ಜಿ.ಪಂ ಸದಸ್ಯೆ ಮಲ್ಲಿಕಾ ಬಾಲಕೃಷ್ಣ ಹಿಂದೆ ಈ ಮಹಿಳಾ ಮಂಡಲದಲ್ಲಿ ತಾವು ಅಧ್ಯಕ್ಷರಾಗಿದ್ದ ಸಮಯದ ನೆನಪಿನ ಬುತ್ತಿಯನ್ನು ತೆರೆದಿಟ್ಟು, ಮಹಿಳಾ ಮಂಡಲದ ಕಾರ್ಯ ಚಟುವಟಿಕೆಗಳ ಕುರಿತು ಶ್ಲಾಘಿಸಿ, ಶುಭ ಹಾರೈಸಿದರು. ಮುಖ್ಯ ಅಭ್ಯಾಗತರಾಗಿ ಸಂತ ಅಂತೋನಿ ಇಗರ್ಜಿ ಚರ್ಚ್‌ನ ಮಹಿಳಾ ಸಂಘಟನೆಯ ಅಧ್ಯಕ್ಷೆ ಪ್ರೀತಿ ಮರಿಯಾ ಲೂವಿಸ್, ಸಾಲಿಗ್ರಾಮ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ಸುಲತಾ ಹೆಗ್ಡೆ ,ಪಾಂಡೇಶ್ವರ ಪಂಚಾಯತ್ ಮಾಜಿ ಅಧ್ಯಕ್ಷೆ ಲೀಲಾವತಿ ಗಂಗಾಧರ್ ಉಪಸ್ಥಿತರಿದ್ದರು. ಉದ್ಯಮ ಕ್ಷೇತ್ರದ ಜ್ಯೂಡಿತ್ ಪಿಕಾರ್ಡೋ ಮತ್ತು ಸೇವಾ ಕಾರ್ಯದಲ್ಲಿ ನಿರತರಾದ ಲಿಲ್ಲಿ ರೋಡ್ರಿಗಸ್ ಅವರುಗಳನ್ನು ಸನ್ಮಾನಿಸಲಾಯಿತು. ಮಹಿಳಾ ಮಂಡಲದ ವಿಮಲ ಮಹಿಳಾ ದಿನಾಚರಣೆಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಜೀವನದಲ್ಲಿ ನಿಜವಾದ ಯಶಸ್ಸು ಪದವಿ ಅಥವಾ ಪ್ರಶಸ್ತಿಗಳಿಗೆ ಮಾತ್ರ ಸೀಮಿತವಾಗಿರುವುದಿಲ್ಲ; ಕಂಡ ಕನಸುಗಳನ್ನು ಸಾಧಿಸುವುದರಲ್ಲಿದೆ ಎಂದು ಕಮೋಡೊರ್ ಬೆನ್ ಹೆಚ್ ಬೆರ್ಸನ್ ನುಡಿದರು. ಅವರು ಮಂಗಳವಾರ ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ನಡೆದ ಆಳ್ವಾಸ್ ಸ್ವಾಯತ್ತ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮಾತನಾಡಿದರು. ಮಾರ್ಟಿನ್ ಲೂಥರ್ ಕಿಂಗ್ ಜ್ಯೂರವರ ಮಾತುಗಳನ್ನು ಉಲ್ಲೇಖಿಸಿ, ಭವಿಷ್ಯ ರೂಪಿಸುವಲ್ಲಿ ದೂರದೃಷ್ಟಿ ಮತ್ತು ವ್ಯಕ್ತಿತ್ವದ ಮಹತ್ವವನ್ನು ವಿವರಿಸಿದರು. ವಾಲ್ಟ್ ಡಿಸ್ನಿ ಹಾಗೂ ಡಾ. ಸಾಸ್‌ರಂತವರು ಅನೇಕ ವಿಫಲತೆಗಳನ್ನು ಮೀರಿ ಸಾಧನೆ ಮಾಡಿದ ಉದಾಹರಣೆಗಳನ್ನು ನೀಡಿದರು. ತಮ್ಮ ಜೀವನ ಅನುಭವಗಳನ್ನು ಹಂಚಿಕೊಂಡ ಅವರು, ಬಾಲ್ಯದ ಮಾತಿನ ದೋಷ, ಕಾಲೇಜು ದಿನಗಳ ಹೋರಾಟ ಹಾಗೂ ಅಸಭ್ಯ ವರ್ತನೆಯ ಕಾರಣದಿಂದ ಕಾಲೇಜಿನಿಂದ ಹೊರಹಾಕುವ ಪರಿಸ್ಥಿತಿಯವರೆಗೆ ತಲುಪಿದ ಸನ್ನಿವೇಶವನ್ನು ವಿವರಿಸಿದರು. ಜೀವನದಲ್ಲಿ ದೊರೆತ ಎರಡನೇ ಅವಕಾಶವೇ ಅವರನ್ನು ಪುನಃ ರೂಪಿಸಿ ಭಾರತೀಯ ನೌಕಾಪಡೆಯಲ್ಲಿ ಗಣನೀಯ ಸೇವೆ ಸಲ್ಲಿಸಲು ನೆರವಾಯಿತು ಎಂದು ಹೇಳಿದರು. ಸಶಸ್ತ್ರ ಪಡೆಗಳನ್ನು ವೃತ್ತಿಯಾಗಿ ಆಯ್ಕೆ ಮಾಡಲು ವಿದ್ಯಾರ್ಥಿಗಳು ಮುಂದೆ ಬರಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರು ವಿಧಾನಸೌಧದಲ್ಲಿ ಉಡುಪಿ ಜಿಲ್ಲೆಯ ಮಾನ್ಯ ಶಾಸಕರಾದ ಸುನೀಲ್ ಕುಮಾರ್ (ಕಾರ್ಕಳ), ಗುರುರಾಜ್ ಗಂಟಿಹೊಳೆ (ಬೈಂದೂರು), ಯಶಪಾಲ್ ಆನಂದ್ ಸುವರ್ಣ (ಉಡುಪಿ), ಕಿರಣ್ ಕುಮಾರ್ ಕೊಡ್ಗಿ (ಕುಂದಾಪುರ) ಹಾಗೂ ಗುರ್ಮೆ ಸುರೇಶ್ ಶೆಟ್ಟಿ (ಕಾಪು) ಅವರನ್ನು ಭೇಟಿ ಮಾಡಿ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಯನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಮನವಿ ಪತ್ರ ಸಲ್ಲಿಸಲಾಯಿತು. ಗುತ್ತಿಗೆದಾರರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟ, ನಡೆಯುತ್ತಿರುವ ಕಾಮಗಾರಿಗಳಿಗೆ ಉಂಟಾಗಿರುವ ಅಡಚಣೆಗಳು ಹಾಗೂ ಬಾಕಿ ಬಿಲ್‌ಗಳ ವಿಳಂಬದಿಂದ ನಿರ್ಮಾಣ ಕ್ಷೇತ್ರದ ಮೇಲೆ ಉಂಟಾಗುತ್ತಿರುವ ಗಂಭೀರ ಪರಿಣಾಮಗಳ ಬಗ್ಗೆ ಶಾಸಕರಿಗೆ ವಿವರವಾಗಿ ಮನವರಿಕೆ ಮಾಡಿಕೊಡಲಾಯಿತು. ಮನವಿ ಪತ್ರವನ್ನು ಸ್ವೀಕರಿಸಿದ ಶಾಸಕರು ಗುತ್ತಿಗೆದಾರರ ನ್ಯಾಯಸಮ್ಮತ ಬೇಡಿಕೆಗಳಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಸಂಬಂಧಿತ ಅಧಿಕಾರಿಗಳು ಮತ್ತು ಸರ್ಕಾರದ ಮಟ್ಟದಲ್ಲಿ ವಿಷಯವನ್ನು ಗಂಭೀರವಾಗಿ ಮುಂದಿಟ್ಟು ಬಾಕಿ ಬಿಲ್ ಬಿಡುಗಡೆಗೆ ತ್ವರಿತ ಕ್ರಮ ಕೈಗೊಳ್ಳಲು ಸದನದಲ್ಲಿಯೂ ಧ್ವನಿ ಎತ್ತಿ ಸಂಪೂರ್ಣವಾಗಿ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಅಕ್ರಮವಾಗಿ ಅಂದರ್-ಬಾಹರ್ ಇಸ್ಟೀಟ್ ಜುಗಾರಿ ಆಟ ಆಡುತ್ತಿದ್ದ ನಾಲ್ವರನ್ನು ಶಂಕರನಾರಾಯಣ ಪೊಲೀಸರು ದಾಳಿ ನಡೆಸಿ ಬಂಧಿಸಿದ ಘಟನೆ ಸಿದ್ದಾಪುರ ಗ್ರಾಮದ ಮೇಜ್ಜೆಡ್ಡು ಎಂಬಲ್ಲಿ ನಡೆದಿದೆ. ಸಿದ್ದಾಪುರ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಜುಗಾರಿ ಆಟ ಆಡುತ್ತಿದ್ದ ಮಾಹಿತಿಯ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ. 6 ಜನರ ಪೈಕಿ ಆರೋಪಿಗಳಾದ ಸುಧಾಕರ, ರಮೇಶ್, ಮನೋಹರ್, ಮಹೇಶ್ ಎಂಬುವರನ್ನು ಬಂಧಿಸಲಾಗಿದೆ. ಮನೆಯ ಕಂಪೌಂಡ್ ಆವರಣವನ್ನು ಹಾರಿಕೊಂಡು ಓಡಿ ಹೋದ ಇಬ್ಬರು ವ್ಯಕ್ತಿಗಳ ಬಗ್ಗೆ ವಿಚಾರಿಸಿದಾಗ ಒಬ್ಬಾತನು ಹರ್ಷ, ಮತ್ತೊಬ್ಬನು ಕೃಷ್ಣ ಪೂಜಾರಿ ಎಂಬುದಾಗಿ ತಿಳಿದು ಬಂದಿದೆ. ಆರೋಪಿಗಳಿಂದ ಅಂದರ್ – ಬಾಹರ್ ಜುಗಾರಿ ಆಟಕ್ಕೆ ಬಳಸಿದ ನಗದು ಹಣ 6,700/, ಕೆಂಪು ಮತ್ತು ಕಪ್ಪು ಬಣ್ಣದ ಬೆಡ್‌ಶೀಟ್, 52 ಇಸ್ಪೀಟ್ ಎಲೆಗಳನ್ನು ಸ್ವಾದೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಸಾರಥ್ಯದಲ್ಲಿ ನಡೆಯುತ್ತಿರುವ ರೋಟರಿ ನರ್ಸರಿ ಶಾಲೆ ಇದರ ವಾರ್ಷಿಕೋತ್ಸವದ ಸಂಭ್ರಮವು ಹಾಗೂ ಚಿನ್ನರ ಚಿಲಿಪಿಲಿ ಬಹಳ ಅದ್ದೂರಿಯಾಗಿ ಸಂಪನ್ನಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಗೀತಾಂಜಲಿ ಆರ್. ನಾಯಕ್ ಗಿಡಕ್ಕೆ ನೀರು ಹಾಕುವ ಮುಖೇನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ರೋಟರಿ ನರ್ಸರಿ ಶಾಲೆ ಮುಂದಿನ ವಿದ್ಯಾಭ್ಯಾಸಕ್ಕೆ ಉತ್ತಮ ಅಡಿಪಾಯ ಹಾಕಿಕೊಡುತ್ತಿದೆ. ಮಕ್ಕಳಿಗೆ ಮತ್ತು ಪೋಷಕರಿಗೆ ಮಕ್ಕಳ ಲಾಲನೆ ಪಾಲನೆ ಬಗ್ಗೆ ಬಹಳ ಸುಂದರವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ್ ಶೆಟ್ಟಿ ವಹಿಸಿದ್ದರು. ರೋಟರಿ ನರ್ಸರಿ ಸ್ಕೂಲ್ ಚೇರ್ಮನ್ ವೆಂಕಟೇಶ್ ನಾವುಂದ ರೋಟರಿ ನರ್ಸರಿ ಶಾಲೆ ನಡೆದು ಬಂದ ದಾರಿ ಮತ್ತು ಅಭಿವೃದ್ಧಿ ಬಗ್ಗೆ ಮಾತನಾಡಿದರು. ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ ಶೆಟ್ಟಿ ರೋಟರಿ ನರ್ಸರಿ ಶಾಲೆಯಲ್ಲಿ ಶಿಕ್ಷಕರ ಪಾತ್ರ ಮತ್ತು ಮಕ್ಕಳನ್ನು ನೋಡಿಕೊಳ್ಳುವ ಬಗ್ಗೆ ಮಾತನಾಡಿದರು. ರೋಟರಿ ಕ್ಲಬ್ ಕಾರ್ಯದರ್ಶಿ ಸರ್ವೋದಯ ಪೂಜಾರಿ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ರೋಶನಿ ಕಾಲೇಜಿನ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಕಾಲೇಜು ಸತತ 22ನೇ ಬಾರಿ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿರುತ್ತದೆ. ಮಹಿಳಾ ವಿಭಾಗದಲ್ಲಿ 02 ಚಿನ್ನ, 03 ಬೆಳ್ಳಿ ಹಾಗೂ 03 ಕಂಚಿನ ಪದಕದೊಂದಿಗೆ ಒಟ್ಟು 36 ಅಂಕ ಸಂಪಾದಿಸಿ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಪುರುಷರ ವಿಭಾಗದಲ್ಲಿ 01 ಚಿನ್ನ, 02 ಬೆಳ್ಳಿ ಹಾಗೂ 03 ಕಂಚಿನ ಪದಕದೊಂದಿಗೆ ಒಟ್ಟು 27 ಅಂಕ ಸಂಪಾದಿಸಿ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಆಳ್ವಾಸ್ ಕಾಲೇಜು ಪುರುಷರ ಮತ್ತು ಮಹಿಳೆಯರ ಎರಡೂ ವಿಭಾಗದಲ್ಲೂ ತಂಡ ಪ್ರಶಸ್ತಿಯನ್ನು ಪಡೆದು ಸತತ 22ನೇ ಬಾರಿ ಸಮಗ್ರ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭೋಪಾಲ್‌ನ ಎಸ್‌ಎಜಿಇ ವಿವಿಯಲ್ಲಿ ನಡೆದ ದಕ್ಷಿಣ-ಪಶ್ಚಿಮ ವಲಯ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಧಿಸಿದ ನಮ್ಮ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿ ಭರತ್ ಬಸಪ್ಪ ಹೂಗಾರ್ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಆ ಮೂಲಕ ಅಸ್ಸಾಂನ ದಿಬ್ರುಗಢ ವಿವಿಯಲ್ಲಿ ನಡೆಯಲಿರುವ ಅಖಿಲ ಭಾರತ ಮಟ್ಟದ ಅಂತರ್ ವಿವಿ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ, ಎಲ್ಲ ಬೋಧಕ-ಬೋಧಕೇತರ ವರ್ಗ, ಸಮಸ್ತ ವಿದ್ಯಾರ್ಥಿಗಳು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಪೋಷಕ ಸಂಘದವರು, ಹಳೆ ವಿದ್ಯಾರ್ಥಿಗಳು ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯಕ್ಷ ಕಾಂತಾರ ಹಾಗೂ ಯಕ್ಷ ಬ್ರಹ್ಮಶ್ರೀ ಇವರ ಸಂಯೋಜನೆಯಲ್ಲಿ ಅಶಕ್ತರ ಹಾಗೂ ಅನಾರೋಗ್ಯ ಪೀಡಿತರ ಸಹಾಯಾರ್ಥವಾಗಿ ಯಕ್ಷಗಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ದಿಸೆಯಲ್ಲಿ ಸೋಮವಾರ ಕಾರ್ಕಡದ ಭಟ್ರಕಟ್ಟೆಯ ಬಡ ಕುಟುಂಬದ ಜ್ಯೋತಿ ವಿಕ್ಟೋರಿಯಾ ಡಿಸಿಲ್ವಾ ಹಾಗೂ ಕಾರ್ಕಡದ ಅನಾರೋಗ್ಯಕ್ಕೆ ತುತ್ತಾದ ದಿನೇಶ್ ಕಾರ್ಕಡ ಇರ್ವರಿಗೆ ಒಟ್ಟು 50,000 ರೂ.ಗಳ ನೆರವಿನ ಸಹಾಯಹಸ್ತ ನೀಡಲಾಯಿತು. ಈ ಸಂದರ್ಭದಲ್ಲಿ ಯಕ್ಷ ಕಾಂತಾರ ಹಾಗೂ ಯಕ್ಷ ಬ್ರಹ್ಮಶ್ರೀ ಸಮಿತಿಯ ಮುಖ್ಯಸ್ಥ ಕೃಷ್ಣಮೂರ್ತಿ ಮರಕಾಲ, ಶ್ರೀನಿವಾಸ ಕಾರ್ಕಡ, ಸಂತೋಷ್ ಕೆ., ಶಶಿಧರ ಕೆ., ಶಶಿರ ಕೆ., ರಮೇಶ್ ಕೆ., ಧರ್ಮಸ್ಥಳ ಗ್ರಾ. ಯೋಜನಾಧಿಕಾರಿ ರಮೇಶ್ ಪಿ.ಕೆ., ಯಕ್ಷಕಾಂತಾರ ತಂಡದ ಸತೀಶ್ ಕೆ., ಸುಧೀರ್ ನೈಲಾಡಿ ಉಪಸ್ಥಿತರಿದ್ದರು. ಈ ಹಿನ್ನಲ್ಲೆಯಲ್ಲಿ ಶನಿವಾರ ಹಮ್ಮಿಕೊಂಡ ಶ್ರೀ ಮಹಿಷಮರ್ದಿನಿ ದಶಾವತಾರ ಯಕ್ಷಗಾನ ಮಂಡಳಿ ಅವರಿಂದ ಶ್ರೀ ಕ್ಷೇತ್ರ ನೀಲಾವರ ಇವರಿಂದ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಕ್ಷೇತ್ರ ಮಹಾತ್ಮಯ ಸರದಾರ ಜ್ಯೋತಿಷ್ಯ ಹಾಗೂ ವಾಸ್ತುತಜ್ಞ ಡಾ. ಬಸವರಾಜ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿರ್ಮಾಣ ಹಂತದ ಮನೆಯೊಂದರ ಗಾರೆ ಕೆಲಸದ ಮಾಡುತ್ತಿದ್ದ ವೇಳೆ ಕಬ್ಬಿಣದ ಏಣಿಯನ್ನು ಮತ್ತೊಂದೆಡೆ ಸ್ಥಳಾಂತರಿಸುವಾಗ ಮನೆ ಹಿಂಭಾಗದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಗೆ ಏಣಿ ಸ್ಪರ್ಶವಾದ ಪರಿಣಾಮ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಕುಂದಾಪುರದ ಕಡ್ಡಿಮನೆ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಕುಂದಾಪುರ ತಾಲೂಕಿನ ಮೂಡ್ಲಕಟ್ಟೆ ಸಮೀಪದ ಕಂದಾವರ ಸಾಂತಾವರ ನಿವಾಸಿ ಶಿವರಾಜ್ (35) ಮೃತರು ಎಂದು ಗುರುತಿಸಲಾಗಿದೆ. ಅವರು ಕಳೆದ 15 ವರ್ಷಗಳಿಂದ ಗಾರೆ ವೃತ್ತಿಮಾಡಿಕೊಂಡಿದ್ದರು. ಕುಂದಾಪುರ ಹೊರವಲಯದ ಕಡ್ಡಿಮನೆ ರಸ್ತೆಯ ಕೊನೆಯಲ್ಲಿ ಪ್ರವೀಣ್ ಖಾರ್ವಿ ಎನ್ನುವರ ನಿರ್ಮಾಣ ಹಂತದಲ್ಲಿರುವ ಮನೆಯ ಗಾರೆ ಕೆಲಸಕ್ಕೆ ಸೋಮವಾರ ಶಿವರಾಜ್ ಹಾಗೂ ಇತರರು ಬಂದಿದ್ದು ತನ್ನ ಜೊತೆ ಕೆಲಸ ಮಾಡುವ ಇನ್ನಿಬ್ಬರು ಕೆಲಸಗಾರರೊಂದಿಗೆ ಕಬ್ಬಿಣದ ಏಣಿಯನ್ನು ಎತ್ತಿ ಬೇರೆ ಕಡೆಗೆ ಹೊತ್ತೊಯ್ಯು ವಾಗ ಆಕಸ್ಮಿಕವಾಗಿ ಏಣಿಯು ಆಯತಪ್ಪಿ ಅಲ್ಲಿಯೇ ಹಾದು ಹೋಗಿರುವ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್ ತಗುಲಿದ್ದರಿಂದ ಶಿವರಾಜ್ ತೀವ್ರ ಅಸ್ವಸ್ಥಗೊಂಡಿದ್ದರು. ತಕ್ಷಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹನ್ನೊಂದನೇ ಶತಮಾನದ ಆದ್ಯ ವಚನಕಾರ, ನೇಕಾರ ಸಮುದಾಯದ ಆರಾಧ್ಯ ದೈವ ದೇವರ ದಾಸಿಮಯ್ಯ ಅವರು ಸರಳ ಭಾಷೆಯಲ್ಲಿ ಸರ್ವರೂ ಅರಿಯುವಂತೆ ವಚನಗಳನ್ನು ರಚಿಸುವ ಮೂಲಕ ಅಂದಿನ ಕಾಲಘಟ್ಟದಲ್ಲಿ ಸಮಾಜದಲ್ಲಿದ್ದ ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಿ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಅವಿರತ ಶ್ರಮವಹಿಸಿದ್ದರು ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಹಾಗೂ ದ.ಕ ಜಿಲ್ಲಾ ಪದ್ಮಶಾಲಿ ಮಹಾಸಭಾ ರಿ. ಉಡುಪಿ ಇವರ ಸಹಯೋಗದಲ್ಲಿ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. 12ನೇ ಶತಮಾನದಲ್ಲಿ ಆರಂಭವಾದ ವಚನ ಚಳವಳಿಗಿಂತ ಮೊದಲೇ ಸರಳ ವಚನಗಳನ್ನು ರಚಿಸಿದ ಆದ್ಯ ವಚನಕಾರ ಎಂಬ ಹೆಗ್ಗಳಿಕೆಗೆ ದಾಸಿಮಯ್ಯ ಪಾತ್ರರಾಗಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಮೂಲವಾಗಿರುವ ವಚನ ಸಾಹಿತ್ಯದಿಂದ…
