Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮೇ.26 ರಿಂದ ಮುಂಗಾರು ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಮತ್ತಿತರ ಅವಘಡಗಳ ಪರಿಸ್ಥಿತಿಗಳನ್ನು ಎದುರಿಸಲು ಎಲ್ಲಾ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಮಾಗ್ರಿಗಳೊಂದಿಗೆ ಸನ್ನದ್ಧರಾಗಿ, ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಪ್ರಕೃತಿ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ (ಮಾನ್ಸೂನ್) ಪ್ರಾರಂಭವಾಗಲಿರುವ ಹಿನ್ನೆಲೆ, ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಗಾರು ಮಳೆ ಪ್ರಾರಂಭಕ್ಕೂ ಮುನ್ನ ಚರಂಡಿ, ತೋಡುಗಳನ್ನು ಸ್ವಚ್ಛಗೊಳಿಸಿ, ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮಗಳನ್ನು ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಕೈಗೊಳ್ಳುವಂತೆ ನೋಡಿಕೊಳ್ಳಬೇಕು ಇದರಿಂದ ರೋಗ ರುಜಿನಗಳು ಹರಡದಂತೆ ತಡೆಯಲು ಸಾಧ್ಯ ಎಂದ ಅವರು, ಅತಿವೃಷ್ಠಿ ಸಂಭವಿಸಿದಾಗ ತುರ್ತು ವಿಪತ್ತು ನಿರ್ವಹಣೆಗಾಗಿ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದು ಸೂಚನೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಕ್‌ಗೆ ಮಿನಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡಿರುವ ಘಟನೆ ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಖಮಂಟಪದ ರಾ.ಹೆ. 66ರಲ್ಲಿ ಸಂಭವಿಸಿದೆ. ಕುಂದಾಪುರದಿಂದ ಬೈಂದೂರು ಕಡೆಗೆ ಮಿನಿ ಬಸ್ ಡ್ರೈವರ್ ದಿನೇಶ ಮರಾಠಿ ತನ್ನ ಬಸ್ ಅನ್ನು, ಉಪ್ಪುಂದ ದುರ್ಗಾ ಪರಮೇಶ್ವರಿ ದೇವಸ್ಥಾನದ ಸರ್ವಿಸ್ ರಸ್ತೆಯಿಂದ ರಾ. ಹೆ. 66ರ ರಸ್ತೆಗೆ ಬರಲು ನಿಂತಿದ್ದ ಸ್ಕೂಟರ್ಗೆ ಡಿಕ್ಕಿ ಹೊಡೆಸಿದ ಪರಿಣಾಮ ಸವಾರ ಬಚ್ಚ ಬಿಲ್ಲವ ರಸ್ತೆಗೆ ಬಿದ್ದು ಗಾಯಗೊಂಡಿದ್ದರು. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾರ್ಮಿಕರ ದಿನಾಚರಣೆಯ ಅಂಗವಾಗಿ ಜೆಸಿಐ ಬೈಂದೂರು ಸಿಟಿ ವತಿಯಿಂದ ಯಡ್ತರೆಯ ಸಜ್ಜನ ಕೆಲಸಗಾರ  ರಾಘವೇಂದ್ರ ದೇವಾಡಿಗ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಯಡ್ತರೆಯ ರಾಹುತನಕಟ್ಟೆಯಲ್ಲಿ ವೆಲ್ಡಿಂಗ್ ವರ್ಕ್ ನಡೆಸುತ್ತಿರುವ ರಾಘವೇಂದ್ರ ಅವರು, ಕೇವಲ ಒಬ್ಬ ಕೆಲಸಗಾರನಾಗಿ ಉಳಿಯದೆ ತಮ್ಮಲ್ಲಿ ಕೆಲಸ ಕಲಿಯುವ ಅನೇಕ ಯುವಕರಿಗೆ ಸ್ವಂತ ಉದ್ಯಮ ಆರಂಭಿಸಲು ಪ್ರೋತ್ಸಾಹ ನೀಡುವ ಮೂಲಕ ಮಾರ್ಗದರ್ಶಕರಾಗಿದ್ದಾರೆ. ಸಮಾಜದ ಬಡವರ್ಗದ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಅವರು, ಬೈಂದೂರು ಭಾಗದಲ್ಲಿ ಅಪ್ಪಟ ಸಜ್ಜನಿಕೆ ಮತ್ತು ಪ್ರಾಮಾಣಿಕ ಕೆಲಸದ ಮೂಲಕ ಸಾರ್ವಜನಿಕರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಅವರ ಈ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಜೆಸಿಐ ಸಂಸ್ಥೆಯು ಈ ಗೌರವ ಅರ್ಪಿಸಿದೆ. ಯಡ್ತರೆಯ ಯಶಸ್ವಿ ವೆಲ್ಡಿಂಗ್ ವೃತ್ತಿಪರರಾದ ರಾಘವೇಂದ್ರ ದೇವಾಡಿಗ ಅವರನ್ನು ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಜೆಸಿಐ ಬೈಂದೂರು ಸಿಟಿ ವತಿಯಿಂದ ಸನ್ಮಾನಿಸಲಾಯಿತು. ಸ್ವಂತ ಶ್ರಮದಿಂದ ಉದ್ಯಮ ಬೆಳೆಸುವುದರ ಜೊತೆಗೆ, ಇತರರಿಗೂ ಉದ್ಯೋಗದ ಹಾದಿ ತೋರಿಸುತ್ತಿರುವ ಅವರು, ಬಡವರ ಸಹಾಯಕ್ಕೆ ಸದಾ ಸಿದ್ಧರಿರುವ ಹೃದಯವಂತರು. ಬೈಂದೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಬೈಂದೂರು ಸಿಟಿ ವತಿಯಿಂದ ಪ್ರತಿ ತಿಂಗಳು ಹಮ್ಮಿಕೊಳ್ಳಲಾಗುವ “ಸೆಲ್ಯೂಟ್ದ ಸೈಲೆಂಟ್ ಸ್ಟಾರ್” ಕಾರ್ಯಕ್ರಮದ ಅಡಿಯಲ್ಲಿ ಎಪ್ರಿಲ್ ತಿಂಗಳು ಪ್ರಸಿದ್ಧ ಕಲಾವಿದರಾದ ತ್ರಿವಿಕ್ರಮ್ ರಾವ್ ಉಪ್ಪಂದ ಅವರನ್ನು ಗುರುತಿಸಿ ಗೌರವಿಸಲಾಯಿತು. ಕಲಾವಿದರ ಪರಿಚಯ ಮತ್ತು ಸಾಧನೆ:ತ್ರಿವಿಕ್ರಮ್ ರಾವ್ ಅವರು ಕಲಾ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದವರಾಗಿದ್ದು, ಅವರ ಪ್ರಮುಖ ಸಾಧನೆಗಳು.  ರಂಗಭೂಮಿ ಸೇವೆ:ನೂರಾರು ನಾಟಕಗಳಿಗೆ ಅದ್ಭುತವಾಗಿ ಮೇಕಪ್ (ಬಣ್ಣಗಾರಿಕೆ) ಮತ್ತು ವಸ್ತ್ರ ವಿನ್ಯಾಸಕಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಮಣ್ಣಿನ ಕಲೆ:ಮಣ್ಣಿನ ಕಲಾಕೃತಿಗಳನ್ನು ಅತ್ಯಂತ ಸುಂದರವಾಗಿ ನಿರ್ಮಿಸುವ ಕಲೆ ಅವರಿಗೆ ಸಿದ್ಧಿಸಿದೆ. ಮೂರ್ತಿ ಶಿಲ್ಪ:ಗಣೇಶ ಮತ್ತು ಶಾರದಾ ಮೂರ್ತಿಗಳನ್ನು ನಿರ್ಮಿಸುವಲ್ಲಿ ಅಪ್ರತಿಮ ಕಲಾ ನೈಪುಣ್ಯತೆಯನ್ನು ಹೊಂದಿದ್ದಾರೆ. ಈ ಸಂದರ್ಭದಲ್ಲಿ ಬೈಂದೂರು ಜೆಸಿಐ ಸಿಟಿಅಧ್ಯಕ್ಷ ಚೈತ್ರ ಸತೀಶ್, ನಿಕಟಪೂರ್ವ ಅಧ್ಯಕ್ಷ ರಾಜು ಮೊಗವೀರ, ಕಾರ್ಯದರ್ಶಿ ಪ್ರೇಮ ವಿ. ಶೆಟ್ಟಿ, ಲೇಡಿ ಜೆಸಿ ಕೋ-ಆರ್ಡಿನೇಟರ್ ಸೂರ್ಯಕಾಂತಿ, ಜೆಸಿ ರಾಘವೇಂದ್ರ ಹೊಳ್ಳ, ಜೆಸಿ ಸುರೇಂದ್ರ ಶೇಟ್, ಜೆಸಿ ಅವಿನಾಶ್ ಉಪಸ್ಥಿತರಿದ್ದರು. ತೆರೆಯ ಮರೆಯಲ್ಲಿದ್ದುಕೊಂಡು ಕಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಎಸ್ಓಎಫ್ ವತಿಯಿಂದ ನಡೆಸಲಾದ ಗಣಿತ, ವಿಜ್ಞಾನ, ಇಂಗ್ಲಿಷ್, ಸಾಮಾನ್ಯ ಜ್ಞಾನ, ಹಿಂದಿ ಮತ್ತು ಕಂಪ್ಯೂಟರ್ ವಿಷಯಗಳ ಅಂತರರಾಷ್ಟ್ರೀಯ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ನ 252 ವಿದ್ಯಾರ್ಥಿಗಳು ಭಾಗವಹಿಸಿ, ಅದರಲ್ಲಿ 98 ಗೋಲ್ಡ್ ಮೆಡಲ್ಗಳನ್ನು ಗೆದ್ದು ಅಪೂರ್ವ ಸಾಧನೆ ಮೆರೆದಿದ್ದಾರೆ. ಈ ಸಾಧನೆ ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಸಮರ್ಪಣೆ ಮತ್ತು ಸಂಸ್ಥೆಯ ಶ್ರೇಷ್ಠ ಶಿಕ್ಷಣ ಪದ್ಧತಿಯ ಪ್ರತಿಬಿಂಬವಾಗಿದೆ. ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ನಲ್ಲಿ ಒಂದರಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ನಿರಂತರವಾಗಿ ಒಲಿಂಪಿಯಾಡ್ ಪರೀಕ್ಷೆಗಳಿಗಾಗಿ ವ್ಯವಸ್ಥಿತ ತರಬೇತಿ ನೀಡಲಾಗುತ್ತಿದ್ದು, ಅದರಿಂದಲೇ ಇಂತಹ ಅದ್ಭುತ ಫಲಿತಾಂಶಗಳು ಸಾಧ್ಯವಾಗಿವೆ. ವಿದ್ಯಾರ್ಥಿಗಳಲ್ಲಿನ ಸ್ಪರ್ಧಾತ್ಮಕ ಮನೋಭಾವವನ್ನು ಉತ್ತೇಜಿಸುವಲ್ಲಿ ಹಾಗೂ ಜಾಗತಿಕ ಮಟ್ಟದಲ್ಲಿ ತಮಗೆ ತಾವು ಸಾಬೀತುಪಡಿಸಿಕೊಳ್ಳುವ ದಿಶೆಯಲ್ಲಿ ಈ ಫಲಿತಾಂಶ ಮಹತ್ವದ ಮೈಲಿಗಲ್ಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳಿಂದ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡಿದಾಗ ರೋಗಿಗಳಿಗೆ ಅಗತ್ಯ ಚಿಕಿತ್ಸಾ ನೆರವುಗಳು ಸಿಗುವಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.  ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವು ಅವಶ್ಯವಿರುವವರಿಗೆ ಲಭ್ಯವಾಗುವಂತೆ ನೋಡಿಕೊಳ್ಳುವುದು ನಮ್ಮಗಳ ಜವಾಬ್ದಾರಿ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಸರಕಾರಿ ಆಸ್ಪತ್ರೆಗಳಿಗೆ ಶಿಫಾರಸ್ಸು ಆದಂತಹ ರೋಗಿಗಳಿಗೆ ಚಿಕಿತ್ಸಾ ನೆರವು ದೊರಕುತ್ತಿಲ್ಲ ಎಂಬ ದೂರುಗಳು ಪದೇ ಪದೇ ಕೇಳಿ ಬರುತ್ತಿವೆ. ಇವರುಗಳಿಗೆ ಅಗತ್ಯ ಸೌಲಭ್ಯಗಳು ಸಿಗುವಂತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಏಳಜಿತ್ ರಾಮಕೃಷ್ಣ ಕುಟೀರದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಕೂಡ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆಯನ್ನು ಪ್ರಾರಂಭಿಸಿದರು. ಈ ಕಾರ್ಯಕ್ರಮದಲ್ಲಿ ನಾಯ್ಕನಕಟ್ಟೆ ರಾಮಕೃಷ್ಣ ಮಂದಿರದ ಗಣೇಶ ಪೈ ಹಾಗೂ ಶ್ರೀ ಮೂಕಾಂಬಿಕಾ ಪ್ರೌಢಶಾಲೆಯ ಅಧ್ಯಾಪಕರಾದ ಪ್ರಶಾಂತ ಶಾನುಭೋಗ ಭಾಗವಹಿಸಿ ವಿದ್ಯಾರ್ಥಿಗಳಿಗೆ ಹಿತವಚನವನ್ನು ಹೇಳಿ ಪುಸ್ತಕಗಳನ್ನು ವಿತರಿಸಿದರು. ಆಶ್ರಮದ ವತಿಯಿಂದ ಪ್ರತೀ ವರ್ಷವೂ 400 ರಿಂದ 500 ಬಡ ವಿದ್ಯಾರ್ಥಿಗಳಿಗೆ ನೋಟ್ ಬುಕ್ಗಳನ್ನು ನೀಡಲಾಗುತ್ತಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗದ ಸಹಯೋಗದೊಂದಿಗೆ ಪ್ರತಿ ಭಾನುವಾರದ ಆಯೋಜಿಸಿಕೊಂಡು ಬರುತ್ತಿರುವ ಪರಿಸರಸ್ನೇಹಿ ಸ್ವಚ್ಛತಾ ಅಭಿಯಾನಕ್ಕೆ ಇದೀಗ 300ನೇ ವಾರದ ಸಂಭ್ರಮ, ಸದಾ ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಂಡ ಈ ಸಂಘಟನೆ ಪ್ರತಿ ಭಾನುವಾರ ಬಂತ್ತೆಂದರೆ ಜಿಲ್ಲೆಯ ವಿವಿಧ ಗ್ರಾಮಪಂಚಾಯತ್ ವ್ಯಾಪ್ತಿಯ ಬೀಚ್ ಹಾಗೂ ಒಳರಸ್ತೆಗಳಲ್ಲಿನ ತ್ಯಾಜ್ಯ ಮುಕ್ತಗೊಳಿಸುವ ಜತೆಗೆ ಸಾವಿರಾರು ಗಿಡಗಳನ್ನು ನೆಟ್ಟು ಪೋಷಿಸುವ ಇವರ ಈ ಕೈಂಕರ್ಯಕ್ಕೆ ಇದೀಗ ಇದೇ ಮೇ.3ರಂದು ಪೂರ್ವಾಹ್ನ 7.ಗ ಬೃಹತ್ ಬೀಚ್ ಸ್ವಚ್ಛತಾ ಅಭಿಯಾನಕ್ಕೆ ಮುನ್ನುಡಿ ಬರೆಯಲಿದೆ. ಕೋಡಿ ಗ್ರಾಮಪಂಚಾಯತ್ ಮೂಲಕ ಪ್ರಾರಂಭಿಸಿಕೊಳ್ಳುವ ಈ ಅಭಿಯಾನ ಸಾಲಿಗ್ರಾಮ ಪಟ್ಟಣಪಂಚಾಯತ್, ಕೋಟತಟ್ಟು ಗ್ರಾಮಪಂಚಾಯತ್, ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಎಲ್ಲಾ ಭಾಗಗಳ ಬೀಚ್ ಕ್ಲಿನಿಂಗ್ ಆಯ್ಕೆಗೊಳಿಸಿದ್ದು ಇದರ ತಯಾರಿಗಳು ಈಗಾಗಲೇ ಪೂರ್ಣಗೊಳಿಸಿದೆ. ಸಮಾಜ ಸೇವಕ ಆನಂದ್ ಸಿ. ಕುಂದರ್ 78ನೇ ಹುಟ್ಟುಹಬ್ಬಕ್ಕೆ ಸಮರ್ಪಿತ ಕಾರ್ಯಕ್ರಮ:ಪಂಚವರ್ಣ ಸಂಘಟನೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣದ ಗ್ರಾಮೀಣ ಪ್ರದೇಶದಲ್ಲಿ ಕಳೆದ 28 ವರ್ಷಗಳಿಂದ ಶಿಕ್ಷಣ ಸೇವೆಯಲ್ಲಿ ತೊಡಗಿಸಿಕೊಂಡಿರುವ ಮದರ್ ತೆರೆಸಾ ಶಿಕ್ಷಣ ಸಂಸ್ಥೆಗೆ 2026ರ ಇಂಡಿಯನ್ ಎಜುಕೇಷನ್ ಅವಾರ್ಡ್ಸ್ – ಗ್ರಾಮೀಣ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಅಭಿವೃದ್ಧಿಯಲ್ಲಿ ಶ್ರೇಷ್ಠ ಶಾಲೆ ಮತ್ತು ಪಿಯು ಕಾಲೇಜು” ಎಂಬ ಗೌರವ ಪ್ರಶಸ್ತಿ ಲಭಿಸಿದೆ. ಉಡುಪಿ ಜಿಲ್ಲೆಯಲ್ಲಿ ಈ ಗೌರವವನ್ನು ಪಡೆದ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಈ ಸಂಸ್ಥೆ ಪಾತ್ರವಾಗಿದೆ. ಬೆಂಗಳೂರು ನಗರದಲ್ಲಿ Anyelp Groups ವತಿಯಿಂದ ಇತ್ತೀಚಿಗೆ ಇಂಡಿಯನ್ ಎಜುಕೇಷನ್ ಅವಾರ್ಡ್ಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಖ್ಯಾತರಾದ ಮಾಸ್ಟರ್ ಶೆಫ್ ಸಂಜೀವ್ ಕಪೂರ್ ಹಾಗೂ ಅನೇಕ ಗಣ್ಯರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿದ್ದರು. ಮಾಜಿ ಸಾಲಿಸಿಟರ್ ಜನರಲ್ ಸಂತೋಷ್ ಹೆಗ್ಡೆ ಯವರೂ ಪ್ರಮುಖ ಆಹ್ವಾನಿತರಾಗಿದ್ದರು. ಅಂದು ನೆರೆದಿದ್ದ ಗಣ್ಯರ ಸಮ್ಮುಖದಲ್ಲಿ ಡಾ. ಶಿವಶಂಕರ್ ಸ್ವಾಮೀಜಿಯವರಿಂದ ಸಂಸ್ಥೆಯ ಸಂಸ್ಥಾಪಕರಾದ ಶಮಿತಾ ರಾವ್ ಹಾಗೂ ರೆನಿಟಾ ಲೋಬೋ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಮದರ್ ತೆರೆಸಾ ಶಿಕ್ಷಣ ಸಂಸ್ಥೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣದ ಗುಣಮಟ್ಟ, ಶಿಸ್ತಿನ ವಾತಾವರಣ ಹಾಗೂ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಹೆಸರು ವಾಸಿಯಾದ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ತನ್ನ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿ 2025–26ನೇ ಶೈಕ್ಷಣಿಕ ವರ್ಷದಲ್ಲಿ ಐಸಿಎಸ್ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ.  ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಈ ಶಾಲೆ, 23 ವರ್ಷದಿಂದ ನೂರಕ್ಕೆ ನೂರು ಫಲಿತಾಂಶ ದಾಖಲಿಸಿರುವ ಸಾಧನೆ ಮಾಡಿರುವುದು ಕುಂದಾಪುರ ತಾಲ್ಲೂಕಿನ ಏಕೈಕ ಐಸಿಎಸ್ಇ ಪಠ್ಯಕ್ರಮದ ಶಾಲೆ ಇದಾಗಿದೆ. ಈ ವಿದ್ಯಾ ಸಂಸ್ಥೆಯಲ್ಲಿ ರಾಜ್ಯ ಮತ್ತು ಹೊರರಾಜ್ಯಗಳ ಸುಮಾರು 1839 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳಲ್ಲಿ 683 ಮಕ್ಕಳಿಗೆ ಸುಸಜ್ಜಿತ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ವಸತಿ, ಪಾಠಶಾಲೆ, ಶೈಕ್ಷಣಿಕ ನೆರವು, ಶಿಸ್ತು – ಎಲ್ಲವನ್ನೂ ಒಟ್ಟಿಗೆ ನೀಡುತ್ತಿರುವ ಈ ಸಂಸ್ಥೆ ಈ ಭಾಗದ ಮಾದರಿ ವಸತಿ ಶಾಲೆಯಾಗಿ ಹೊರಹೊಮ್ಮಿದೆ. ಈ ವರ್ಷ 270 ವಿದ್ಯಾರ್ಥಿಗಳು ಐಸಿಎಸ್ಇ 10ನೇ ವರ್ಗದ…

Read More