ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅಂಪಾರು ಗ್ರಾಮದ ಬರ್ಲಾಡಿ ನಿವಾಸಿ ಜಯಶ್ರೀ (27) ಎಂಬ ಯುವತಿಯು ಏಪ್ರಿಲ್ 7 ರಿಂದ ನಾಪತ್ತೆಯಾಗಿರುತ್ತಾರೆ. ಅವರು 5 ಅಡಿ 2 ಇಂಚು ಎತ್ತರ, ಸಪೂರ ಶರೀರ, ಕೋಲು ಮುಖ, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಪಿ.ಎಸ್ ದೂ.ಸಂಖ್ಯೆ: 08259-280299, ಸಿ.ಪಿ.ಐ ದೂ.ಸಂಖ್ಯೆ: 08254-230338, ಎಸ್.ಡಿ.ಪಿ.ಓ ದೂ.ಸಂಖ್ಯೆ: 08254-232338, ಡಿ.ಪಿ.ಓ ದೂ.ಸಂಖ್ಯೆ: 0820-2534777 ಹಾಗೂ ರೇಂಜ್ ದೂ.ಸಂಖ್ಯೆ: 8242220501 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2026ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ-2ಕ್ಕೆ ನೋಂದಣಿಯನ್ನು ಈಗಾಗಲೇ ಪ್ರಾರಂಭಿಸಲಾಗಿದ್ದು, ಏಪ್ರಿಲ್ 17 ರ ವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. 2026ರಲ್ಲಿ ರೆಗ್ಯೂಲರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊಂಡು ಮತ್ತು ಮೊದಲನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸದೇ ಆನ್‌ಲೈನ್ http://tinyurl.com/mvp9k6es ಲಿಂಕ್ ಮೂಲಕ ಅಥವಾ ಅಭ್ಯರ್ಥಿಗಳು ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ PU EXAM PORTAL ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಬಹುದಾಗಿದೆ. ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರುಗಳಿಗೆ 2026ರಲ್ಲಿ ಮೊದಲನೆ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ಹಾಗೂ ಕಾರಣಾಂತರಗಳಿAದ ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳನ್ನು ತಮ್ಮ ಪಿ.ಯು ಎಕ್ಸಾಮ್ ಪೋರ್ಟಲ್ ಲಾಗಿನ್ ಮುಖಾಂತರ ನೋಂದಣಿ ಮಾಡಿಕೊಳ್ಳಬಹುದಾಗಿದೆ. 2026ರಲ್ಲಿ ರೆಗ್ಯೂಲರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊಂಡು ಮತ್ತು ಮೊದಲನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸದೆ ಪರೀಕ್ಷೆ-2 ಕ್ಕೆ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಪರೀಕ್ಷೆ-2 ಕ್ಕೆ ನೋಂದಾಯಿಸುವಂತೆ ಮಾಡಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಅಂಬೇಡ್ಕರ್ ಅನುಭವಿಸಿಯ ಯಾತನೆ ಸಮಾಜದ ಕಣ್ಣು ತೆರೆಸಿತ್ತಲ್ಲದೆ ಕೆಳ ಮತ್ತು ಮಧ್ಯಮ ವರ್ಗದವರ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆಯಿತು ಎಂದು ಶಿಕ್ಷಕ ಹೆರಿಯ ಮಾಸ್ಟರ್ ಹೇಳಿದರು. ಮಂಗಳವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಸಹಕಾರದೊಂದಿಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಸ್ಪ್ರಶ್ಯತೆ ಸಮಾನತೆಯ ಬಗ್ಗೆ ಸತತವಾಗಿ ಹೋರಾಟ ಮಾಡಿ ಈ ದೇಶಕ್ಕೆ ಒಂದು ಸುಂದರ ಅರ್ಥಗರ್ಭಿತ ಸಂವಿಧಾನವನ್ನು ನೀಡಿದ ಹೆಮ್ಮೆ ಅಂಬೇಡ್ಕರ್ ರವರಿಗೆ ಸಲ್ಲುತ್ತದೆ ಅವರು ಬದುಕಿನ ಆಯಾಮಗಳನ್ನು ಗಮನಿಸಿದರೆ ಅತ್ಯಂತ ಕ್ಲಿಷ್ಟಕರ ಸಮಸ್ಯೆಗಳನ್ನು ಅನುಭವಿಸಿ ತನ್ನಂತೆ ಎಲ್ಲರೂ ಅನುಭವಿಸಬಾರದು ಎಂಬ ಚಿಂತನೆಗಳೊಂದಿಗೆ ಆ ಕಾಲದಲ್ಲಿ ಸಂವಿಧಾನದ ಮೂಲಕ ನ್ಯಾಯ ದೊರಕಿಸಿದ್ದಾರೆ.ಇದರ ಪರಿಣಾಮ ನೀವು ನಾವುಗಳು ಇಂದು ಸಮಾಜದಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯಾಚರಿಸುವಂತೆ ಮಾಡಿದೆ ಎಂದು ಪಂಚವರ್ಣ ಮದ ಈ ಕಾರ್ಯಕ್ರಮ ಇತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರಿಗಾಗಿ ಭಾಷಾ ಕೌಶಲ್ಯದ ಅಭಿವೃದ್ಧಿ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಾಗಾರವು ಅನುಭವಿ ಶಿಕ್ಷಣ ತಜ್ಞೆ ಹಾಗೂ ಯೋಗ ಥೆರಪಿಸ್ಟ್ ಆಗಿರುವ ಜಯಶ್ರೀ ಮೃತ್ಯುಜಯ ಹಾಗೂ ಇನ್ನೋರ್ವ ಶಿಕ್ಷಣ ತಜ್ಞೆ ಅನುಪಮಾ ಆಲದಕಟ್ಟಿ ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಾಗಾರದ ಮುಖ್ಯ ಉದ್ದೇಶವು ಶಿಕ್ಷಕರಲ್ಲಿ ಸಮರ್ಥ ಸಂವಹನ ಕೌಶಲ್ಯವನ್ನು ಬೆಳೆಸುವುದರೊಂದಿಗೆ ಒತ್ತಡ ರಹಿತ ದಿನಚರಿಯನ್ನು ಅನುಸರಿಸುತ್ತಾ, ಉತ್ತಮ ಶಿಕ್ಷಕರಾಗಿ ಹೊಮ್ಮಲು ಸಹಕರಿಸುವುದಾಗಿತ್ತು. ಪ್ರಸ್ತುತ ಶೈಕ್ಷಣಿಕ ವಾತಾವರಣದಲ್ಲಿ ಆಂಗ್ಲ ಭಾಷೆಯ ಪ್ರಾಮುಖ್ಯತೆ ಹಾಗೂ ಶಿಕ್ಷಕರ ಪಾತ್ರ ಎಷ್ಟು ಮಹತ್ವಪೂರ್ಣ ಎಂಬುದನ್ನು ಮನದಟ್ಟಾಗುವಂತೆ ಇಲ್ಲಿ ವಿವರಿಸಲಾಯಿತು. ಜಯಶ್ರೀ ಮೃತ್ಯುಜಯ ಅವರು ವ್ಯಕ್ತಿತ್ವ ವಿಕಸನ ಹಾಗೂ ಸಮರ್ಥ ಸಂವಹನ ಕೌಶಲ್ಯದ ಬಗ್ಗೆ ಪ್ರಾಯೋಗಿಕ ತರಬೇತಿ ನೀಡಿದರು. ಚಟುವಟಿಕೆ ಆಧಾರಿತ ವಿಧಾನಗಳ ಮೂಲಕ ಈ ಕೌಶಲ್ಯದ ಸದ್ಬಳಕೆ ಮಾಡುವ ಬಗ್ಗೆ ಸ್ಪಷ್ಟತೆ ನೀಡಲಾಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಹಾಗೂ ರ‍್ಯಾಗಿಂಗ್ ವಿರೋಧಿ & ಮಾದಕ ದ್ರವ್ಯ ವಿರೋಧಿ ಘಟಕಗಳ ಜಂಟಿ ಆಶ್ರಯದಲ್ಲಿ ನಶಾ ಮುಕ್ತ ಅಭಿಯಾನ ಕಾರ್ಯಕ್ರಮವು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ನಿರಂಜನ ಗೌಡ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ವಿವಿಧ ಬಗೆಯ ಮಾದಕ ವಸ್ತುಗಳು ಹಾಗೂ ಅವುಗಳಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿ ಸಮುದಾಯ ಇವುಗಳಿಂದ ದೂರವಿರಬೇಕು, ಆರೋಗ್ಯಪೂರ್ಣ ಜೀವನ ಶೈಲಿಯನ್ನು ಅನುಸರಿಸಬೇಕು ಎಂದರು. ಇದೇ ಸಂದರ್ಭ ಸೈಬರ್ ಕ್ರೈಂ ಕುರಿತು ಮಾಹಿತಿ ನೀಡಿದ ಅವರು, ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಮೋಸಗಳು ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು ಈ ಕುರಿತು ಜಾಗೃತರಾಗಬೇಕು. ಅಪರಿಚಿತ ಲಿಂಕ್‌ಗಳು, ಫೋನ್ ಕಾಲ್‌ಗಳು ಮತ್ತು ಸಂದೇಶಗಳಿಗೆ ಎಚ್ಚರಿಕೆಯಿಂದ ಸ್ಪಂದಿಸಬೇಕು ಎಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ಫಿಜಿಯೋಥೆರಪಿ, ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ ನ 2025-26ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮವು ಸಂಭ್ರಮದಿಂದ ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗಣ್ಯರು ದೀಪ ಬೆಳಗುವ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಹೆ ಮಣಿಪಾಲದ ಎಂಸಿಎಚ್‌ಪಿ ಕಾಲೇಜ್ ನ ಡೀನ್ ಡಾ. ಜಿ. ಅರುಣ್ ಮೈಯ್ಯ ಅವರು ಭಾಗವಹಿಸಿ ಮೂಡ್ಲಕಟ್ಟೆಯ ಐಎಂಜೆ ವಿದ್ಯಾಸಂಸ್ಥೆಗಳ ಬೆಳವಣಿಗೆಯನ್ನು ಪ್ರಶಂಸಿಸಿ ಚೇರ್ಮನ್ ಸಿದ್ಧಾರ್ಥ ಜೆ. ಶೆಟ್ಟಿ ಅವರ ಹಾಗೂ ಎಲ್ಲಾ ಅಡಳಿತ ವರ್ಗ ಹಾಗೂ ಸಿಬ್ಬಂದಿಗಳ ಪ್ರಯತ್ನ ಶ್ಲಾಘನೀಯ ವೆಂದರು ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳ ಸಾಧನೆಗಳನ್ನು ಪ್ರಶಂಸಿಸಿದರು. ಗೌರವ ಅತಿಥಿಯಾಗಿ ಮಂಗಳೂರು ಹರ್ಷ ಮೋಡರ್ನ್ ಡಯಾಗ್ನೊಸ್ಟಿಕ್ ಸೆಂಟರ್‌ನ ವೈದ್ಯಕೀಯ ನಿರ್ದೇಶಕಿ ಡಾ. ಪ್ರಿಯದರ್ಶಿನಿ ಅವರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಸಮಾಜಕ್ಕೆ ಸಹಾಯ ಮಾಡಲು ಒದಗಿರುವ ಸುವರ್ಣಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು. ಕಾರ್ಯದಲ್ಲಿ ನವೀನತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಕುಂದಾಪುರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಕಲಚೇತನರಿಗೆ ಯುಡಿಐಡಿ ಕಾರ್ಡ್ ಪಡೆಯಲು ಮೌಲ್ಯಮಾಪನ ಶಿಬಿರ ಸೋಮವಾರ ನಡೆಯಿತು. ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಶಿಬಿರ ಉದ್ಘಾಟಿಸಿ ಮಾತನಾಡಿ, ದೇಶಾದ್ಯಂತ ವಿಕಲಚೇತನರಿಗೆ ಯುಡಿಐಡಿ ಏಕೈಕ ಮತ್ತು ಸಾರ್ವತ್ರಿಕ ಗುರುತು ಪತ್ರವಾಗಿ ಕಾರ್ಯನಿರ್ವಹಿಸುತ್ತದೆ. ಇದರಿಂದ ಸರಕಾರಿ ಸೌಲಭ್ಯ ಮತ್ತು ರಿಯಾಯಿತಿ ಸುಲಭವಾಗಿ ಇದು ಪಡೆಯಲು ಸಹಕಾರಿಯಾಗಿದೆ ಎಂದರು. ಶಾಸಕ ಕಿರಣ್ ಕುಮಾರ ಕೊಡ್ಗಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುಡಿಐಡಿ ಕಾರ್ಡ್ ವಿಕಲಚೇತನರ ಸಬಲೀಕರಣಕ್ಕೆ ಅವರಿಗೆ ಸಮಾಜದಲ್ಲಿ ಸಮಾನ ಅವಕಾಶಗಳನ್ನು ಒದಗಿಸಲು ಮತ್ತು ಅವರ ಜೀವನವನ್ನು ಸುಲಭಗೊಳಿಸಲು ಪ್ರಮುಖ ಹೆಜ್ಜೆ ಆಗಿದೆ ಎಂದರು. ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ, ಆಡಳಿತ ವೈದ್ಯಾಧಿ ಕಾರಿ ಡಾ. ಚಂದ್ರ ಮರಕಲ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಘಟಕ ಸಭಾಪತಿ ಎಸ್. ಜಯಕರ ಶೆಟ್ಟಿ, ನಿರ್ದೇಶಕ ಶಿವರಾಮ ಶೆಟ್ಟಿ, ಫಿಸಿಷಿಯನ್ ಡಾ. ನಾಗೇಶ್, ಜಿಲ್ಲಾ ಅಂಗವಿಕಲರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 118ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಡಾ. ಕಾಶೀನಾಥ್ ಪೈ ಗಂಗೊಳ್ಳಿ ಅಧ್ಯಕ್ಷತೆ ವಹಿಸಿದ್ದರು. ರಸರಂಗ ಕೋಟ ಇದರ ಮುಖ್ಯಸ್ಥರಾದ ಸುಧಾ ಮಣೂರು, ಶ್ರೀ ಅಮೃತೇಶ್ವರಿ ಮೇಳದ ಪ್ರದಾನ ಭಾಗವತ ರಾಘವೇಂದ್ರ ಮಯ್ಯ, ಶಿಕ್ಷಕಿ ಮಾಧುರಿ ಶ್ರೀರಾಮ್, ಕರ್ನಾಟಕ ಬ್ಯಾಂಕ್ ನಿವೃತ್ತ ಅಧಿಕಾರಿ ಜನಾರ್ಧನ ಹಂದೆ ಮಂಗಳೂರು ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಧಾ ಮಣೂರು ಹಾಗೂ ಮಾಧುರಿ ಶ್ರೀರಾಮ್ ಅವರನ್ನು ಅಕಾಡೆಮಿಯ ವತಿಯಿಂದ ಸಮ್ಮಾನಿಸಲಾಯಿತು. ತದನಂತರ ರಸರಂಗ ಕೋಟ ಇದರ ಮಹಿಳಾ ಸದಸ್ಯೆಯರಿಂದ ನಡೆದ ಶಮಂತಕ ರತ್ನ ಯಕ್ಷಗಾನ ತಾಳ ಮದ್ದಳೆ ನೆರೆದ ಪ್ರೇಕ್ಷಕರನ್ನು ರಂಜಿಸಿತು. ರಾಜೇಂದ್ರ ಪೈ ಅವರು ಧನ್ಯವಾದ ಸಮರ್ಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪ್ರಸಿದ್ಧ ಅರ್ಚಕ ಮನೆತನದ ಗಂಗೊಳ್ಳಿ ನಿವಾಸಿ ದಿ. ಜಿ. ರಾಮನಾಥ ಭಟ್ ಅವರ ಪುತ್ರ ಬಾಬಣ್ಣ ಭಟ್ (71) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಅವರು ಧಾರ್ಮಿಕ ಚಟುವಟಿಕೆಗಳಲ್ಲಿ ಸದಾ ತೊಡಗಿಸಿಕೊಂಡು ಜನಾನುರಾಗಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬಾರಿಕೆರೆ ಯುವಕ ಮಂಡಲ ಕೋಟ ಇವರ ಆಶ್ರಯದಲ್ಲಿ 24ನೇ ವರ್ಷದ ಅಂಗವಾಗಿ ಹಮ್ಮಿಕೊಂಡ ಬಾರಿಕೆರೆ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ ಕಾರ್ಯಕ್ರಮದಲ್ಲಿ ರಕ್ತದಾನಿ ದಿನೇಶ್ ಕಾಂಚನ್ ಬಾರಿಕೆರೆ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಉದ್ಯಮಿ ಆನಂದ್ ಸಿ. ಕುಂದರ್, ಮಾಜಿ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್, ಪ್ರಗತಿಪರ ಕೃಷಿಕ ರವೀಂದ್ರ ಐತಾಳ್, ಸ್ಥಳೀಯರಾದ ಪ್ರಕಾಶ್ ಹೊಳ್ಳ, ಕೋಟ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ್ ನಾವಡ, ಬಾರಿಕೆರೆ ಯುವಕ ಮಂಡಲದ ಅಧ್ಯಕ್ಷ ರವಿ ಕುಂದರ್, ಕೋಟ ಸಿ ಎ ಬ್ಯಾಂಕ್ ನಿರ್ದೇಶಕ ರಂಜಿತ್ ಕುಮಾರ್, ಕೋಟತಟ್ಟು ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷ ಸತೀಶ್ ಕುಂದರ್, ಬಾರಿಕೆರೆ ಯುವಕ ಮಂಡಲದ ರತ್ನಾಕರ್ ಬಾರಿಕೆರೆ, ರವಿ ಲೇಫ್ಟಿ, ಸಿರಾಜ್ ಸಾಹೇಬ್ ಮತ್ತಿತರರು ಇದ್ದರು.
