ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಹತೋಭಾರ ಶ್ರೀ ಹಿರೇಮಹಾಲಿಂಗೇಶ್ವರ ದೇವಸ್ಥಾನ ಕೋಟ ಇದರ ವಾರ್ಷಿಕ ರಥೋತ್ಸವದ ಅಂಗವಾಗಿ ಶ್ರೀ ಹಿರೇಮಹಾಲಿಂಗೇಶ್ವರ ಮಿತ್ರವೃಂದ ಕೋಟ ಇವರ ಸುವರ್ಣ ಮಹೋತ್ಸವದ ಹಿನ್ನಲ್ಲೆಯಲ್ಲಿ ಹಮ್ಮಿಕೊಂಡ ಏಳು ದಿನಗಳ ಸಾಂಸ್ಕೃತಿಕ ಪರ್ವ ಕಾರ್ಯಕ್ರಮದ 5ನೇ ದಿನದ ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮವು ಗೀತಾನಂದ ವೇದಿಕೆಯಲ್ಲಿ ಜರಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ವಹಿಸಿ ಮಾತನಾಡಿ, ಅರ್ಧ ಶತಮಾನಕ್ಕೂ ಹೆಚ್ಚು ಕಾಲ ನಿರಂತರವಾಗಿ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಸೇವೆ ಸಲ್ಲಿಸಿರುವ ಹಿರೇಮಹಾಲಿಂಗೇಶ್ವರ ಮಿತ್ರವೃಂದದ ಸಾಧನೆ ನಿಜಕ್ಕೂ ಸಾರ್ಥಕವಾದದ್ದು ಎಂದು ಶ್ಲಾಘಿಸಿ ಇಂತಹ ಸುವರ್ಣ ಕ್ಷಣಗಳನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದರಲ್ಲದೆ ಹಿಂದೆ ರಥೋತ್ಸವವು ಕೆಲವೇ ದಿನಗಳಿಗೆ ಸೀಮಿತವಾಗಿದ್ದರೆ, ಮಿತ್ರವೃಂದ ಸ್ಥಾಪನೆಯ ನಂತರ ವಿಭಿನ್ನ ಹಾಗೂ ಅರ್ಥಪೂರ್ಣ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಊರಿಗೆ ಹೆಮ್ಮೆಪಡುವಂತಹ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುತ್ತಿರುವುದು ಶ್ಲಾಘನೀಸಿದ ಅವರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭ ಇತಿಹಾಸ ಪ್ರಸಿದ್ಧ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2024-25 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ನಡೆಸಿದ ಸ್ನಾತಕೋತ್ತರ ಪದವಿ ಪರೀಕ್ಷೆಯ ಸಾರ್ವಜನಿಕ ಆಡಳಿತ ವಿಭಾಗದಲ್ಲಿ ಪ್ರವೀಣ್ ಡಿ. ಕೋಟ್ಯಾನ್ ಪಡುಕೆರೆ ಅವರು ರಾಜ್ಯದಲ್ಲಿ 11ನೇ ರ‍್ಯಾಂಕ್‌ನೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಅವರು ಉದ್ಯಾವರ ಕನಕೊಡ ಮೊಗವೀರ ಸಭೆಯ ಗುರಿಕಾರರಾಗಿದ್ದ ದಿ. ದಯಾಕರ ಕುಂದರ್ ಹಾಗೂ ಸುಂದರಿ ಕೋಟ್ಯಾನ್ ದಂಪತಿಗಳ ಪುತ್ರ. ಕಳೆದ 15 ವರ್ಷಗಳಿಂದ ಕರ್ನಾಟಕ ಸರಕಾರದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತ ಪ್ರಸ್ತುತ ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಆಪ್ತ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿದ್ದನ್ನು ತಾಲೂಕಿನ ಬಿಜೂರು ಗ್ರಾಮದ ಹರಕೇರಿ ಎಂಬಲ್ಲಿ ಆಹಾರ ಇಲಾಖಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೈಂದೂರಿನ ಆಹಾರ ನಿರೀಕ್ಷಕರಾದ ವಿನಯ್ ಕುಮಾರ್ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ಬಿಜೂರು ಗ್ರಾಮದ ಹರಕೇರಿ ನಿವಾಸಿ ಅಬ್ದುಲ್ ಬಿನ್ ಅಬ್ಬಾಸ್ ಎಂಬುವವರ ಮನೆಯಲ್ಲಿ ಸರ್ಕಾರದಿಂದ ಉಚಿತವಾಗಿ ವಿತರಿಸಲಾಗುವ ಅನ್ನಭಾಗ್ಯ ಯೋಜನೆಯ ಕುಚ್ಚಲಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಲಾಗಿತ್ತು. ಜನವರಿ 30 ರಂದು ಬೆಳಿಗ್ಗೆ 09:40 ಗಂಟೆಗೆ ಪಂಚರ ಸಮಕ್ಷಮದಲ್ಲಿ ಅಧಿಕಾರಿಗಳು ದಾಳಿ ನಡೆಸಿದಾಗ, ಒಟ್ಟು 16 ಪಾಲಿಥಿನ್ ಚೀಲಗಳಲ್ಲಿ ತುಂಬಿಸಿಟ್ಟಿದ್ದ 7.14 ಕ್ವಿಂಟಾಲ್ ತೂಕದ ಕುಚ್ಚಲಕ್ಕಿ ಪತ್ತೆಯಾಗಿದೆ. ಇದರ ಒಟ್ಟು ಮೌಲ್ಯ ರೂ. 16,422/- ಎಂದು ಅಂದಾಜಿಸಲಾಗಿದೆ. ಆರೋಪಿ ಅಬ್ದುಲ್ ಬಿನ್ ಅಬ್ಬಾಸ್ ಉಚಿತವಾಗಿ ವಿತರಿಸುವ ಅಕ್ಕಿಯನ್ನು ಯಾರಿಂದಲೋ ಕಾನೂನು ಬಾಹಿರವಾಗಿ ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ತನ್ನ ಮನೆಯಲ್ಲಿ ಬಚ್ಚಿಟ್ಟಿದ್ದ ಎನ್ನಲಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನೋಡು ನೋಡುತ್ತಿದ್ದಂತೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾದ ಘಟನೆ ಹೆಮ್ಮಾಡಿ-ಕೊಲ್ಲೂರು ರಾಜ್ಯ ಹೆದ್ದಾರಿಯ ವಂಡ್ಸೆ ಗ್ರಾಮದ ಶಾರ್ಕೆ ಕ್ರಾಸ್ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಬೀಜಾಡಿ ನಿವಾಸಿ ಭಾಸ್ಕರ್ ಆಚಾರ್ ಅವರಿಗೆ ಸೇರಿದ ಕಾರು ಇದಾಗಿದ್ದು, ಕಾರ್ಯನಿಮಿತ್ತ ಬೆಳಿಗ್ಗೆ ಆಲೂರಿಗೆ ತೆರಳಿದ್ದ ಅವರು ಸುಮಾರು 10 ಗಂಟೆಯ ವೇಳೆಗೆ ಅಲ್ಲಿಂದ ಕುಂದಾಪುರದತ್ತ ಮರಳುತ್ತಿದ್ದರು. ಈ ವೇಳೆ ಕಾರಿನ ಮುಂಭಾಗದಿಂದ ಶಬ್ದ ಸಹಿತ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಭಾಸ್ಕರ್ ಆಚಾರ್ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಆದರೆ, ಆಗಲೇ ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಪ್ರಯೋಜನವಾಗದೆ ಸ್ವಲ್ಪ ಹೊತ್ತಿನಲ್ಲೇ ಇಡೀ ಕಾರು ಸುಟ್ಟು ಕರಕಲಾಗಿದೆ. ಭಾಸ್ಕರ್ ಆಚಾರ್ ಸಮಯಕ್ಕೆ ಕಾರಿನಿಂದ ಇಳಿದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪಠ್ಯೇತರ ಪುಸ್ತಕಗಳ ಓದು ನಮ್ಮ ಜ್ಞಾನದ ಪರಿಧಿಯನ್ನು ಹೆಚ್ಚಿಸುವುದರ ಜೊತೆಗೆ ಆತ್ಮವಿಶ್ವಾಸವನ್ನು ಕೂಡ ನೀಡುತ್ತದೆ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ನಾರಾಯಣ ನಾಯ್ಕ್ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪಡೆಯುಪರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ಎಸ್. ವಿ ಕಾಮರ್ಸ್ ಕ್ಲಬ್ ಮತ್ತು ಗಂಗೊಳ್ಳಿಯ ಸಂಜೀವ ಪಾರ್ವತಿ ಪ್ರಕಾಶನದ ಜಂಟಿ ಆಶ್ರಯದಲ್ಲಿ ನಡೆದ ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅವರ ಅಂಕಣ ಬರಹಗಳ ಸಂಕಲನ ‘ಅವಳ ನಿಟ್ಟುಸಿರು’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕೃತಿಯನ್ನು ಅನಾವರಣಗೊಳಿಸಿ ಮಾತನಾಡಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಪ್ರಯೋಗಾಲಯ ಸಹಾಯಕರಾದ ವಿಜಯಕುಮಾರ್ ಎನ್. ಮಾತನಾಡಿ, ಸೃಜನಶೀಲ ಸಾಹಿತ್ಯ ಇಂದಿನ ಅಗತ್ಯ. ಉತ್ತಮ ವಿಚಾರಗಳ ಓದು ನಮ್ಮ ವ್ಯಕ್ತಿತ್ವವನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯುತ್ತದೆ. ಅವಳ ನಿಟ್ಟುಸಿರು ಕೃತಿ ಈ ನಿಟ್ಟಿನಲ್ಲಿ ಉತ್ತಮ ಕೊಡುಗೆ ಎಂದು ಹೇಳಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ಲೇಖಕ ನರೇಂದ್ರ ಎಸ್. ಗಂಗೊಳ್ಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಿಚ್ ಲೈಫ್ ಕೇರ್ ಕಂಪೆನಿ ಹೆಸರಲ್ಲಿ ಹಣ ಹೂಡಿಕೆ ಮಾಡಿದರೆ ತಿಂಗಳಲ್ಲಿ ಹಣ ದ್ವಿಗುಣಗೊಳ್ಳುತ್ತದೆ ಎಂದು ಹೇಳಿ ಬರೋಬ್ಬರಿ 26ಲಕ್ಷ ರೂ. ಗೂ ಮಿಕ್ಕಿ ಹಣ ಪಡೆದು ಖಾಸಗಿ ಕಾಲೇಜು ಉಪನ್ಯಾಸಕರೊಬ್ಬರಿಗೆ ವಂಚಿಸಿದ ಘಟನೆ ನಡೆದಿದೆ. ಮಂಗಳೂರಿನ ಖಾಸಗಿ ಕಾಲೇಜು ಉಪನ್ಯಾಸಕ ಸುಬ್ರಹ್ಮಣ್ಯ ವಿಜಯ್ ಆರ್. (38) ವಂಚನೆಗೊಳಗಾದವರು. ಅವರಿಗೆ ಬಾರ್ಕೂರಿನ ರಾಘವೇಂದ್ರ ಮೂಲಕ ಪರಿಚಯವಾದ ಮುಂಬಯಿಯ ಸಂತೋಷ್ ಮಹೇಂದ್ರ (43) ಎಂಬಾತ ವಂಚಿಸಿದ ಆರೋಪಿ. 2022ರ ಜೂನ್ ನಲ್ಲಿ ಕಾವಾಡಿಯ ಕಂಪ್ಯೂರಲ್ಲಿ ರಾಘವೇಂದ್ರ ಜತೆ ಸುಬ್ರಹ್ಮಣ್ಯ ವಿಜಯ್ ಅವರು ಆರೋಪಿ ಸಂತೋಪ್ ಮಹೇಂದ್ರನನ್ನು ಭೇಟಿಯಾಗಿ, ಹಣ ಹೂಡಿಕೆ ಬಗ್ಗೆ ಮಾಹಿತಿ ಪಡೆದಿದ್ದು, ಆತನ ಮಾತನ್ನು ನಂಬಿ ಅಲ್ಲಿಯೇ 2.96 ಲಕ್ಷ ರೂ. ನೀಡಿದ್ದರು. 30 ಲಕ್ಷ ರೂ. ಗಿಂತ ಹೆಚ್ಚಿನ ಹೂಡಿಕ ಮಾಡಿದರೆ, ಒಂದು ಕಾರು ನೀಡುವುದಾಗಿಯೂ ಆರೋಪಿ ತಿಳಿಸಿದ್ದಾನೆ. ಅನಂತರ ಸುಬ್ರಹ್ಮಣ್ಯ ವಿಜಯ್ ಅವರ ಖಾತೆಯಿಂದ ಆರೋಪಿಯ ಬ್ಯಾಂಕ್ ಖಾತೆಗೆ 26.50 ಲಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿವೇಕ ವಿದ್ಯಾರ್ಥಿ-2025, ಇವರು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ತಾಲ್ಲೂಕು ಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್‌ನ 9ನೇ ತರಗತಿಯ ವಿದ್ಯಾರ್ಥಿನಿಯಾದ ಸಾನ್ವಿ ಅವರು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಅವರಿಗೆ ಕಾರ್ಯಕ್ರಮ ಸಂಘಟಕರಾದ ನಿವೃತ್ತ ಶಿಕ್ಷಕ ಬಸ್ರೂರು ದಿನಕರ ಶೆಟ್ಟಿ ಅವರು ಬಹುಮಾನವನ್ನು ವಿತರಿಸಿ ಸನ್ಮಾನಿಸಿದರು. ಅವರು ತಾಲ್ಲೂಕು ಮಟ್ಟದ ಸಾಧನೆಗೆ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ್ ಶೆಟ್ಟಿ, ಪ್ರಾಂಶುಪಾಲ ನಿತಿನ್ ಡಿ. ಆಲ್ಮೇಡ ಹಾಗೂ ಶಿಕ್ಷಕ ವೃಂದದವರು ಅಭಿನಂದನೆಯನ್ನು ತಿಳಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ಹೋಟೆಲ್ ಶರೋನ್‌ನಲ್ಲಿ ಫೆಬ್ರವರಿ 06, 07, 08ರಂದು ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 08:00ರ ವರೆಗೆ ಪಿಎಸ್‌ಆರ್ ಸೀರೆಗಳ ಎಕ್ಸಿಬಿಷನ್ ಕಮ್ ಸೇಲ್ ನಡೆಯಲಿದೆ. ಕೇವಲ 400 ರೂಪಾಯಿಯಿಂದ ಶುರುವಾಗುವ ಪಿಎಸ್ಆರ್ ಸೀರೆಗಳ ಎಕ್ಸಿಬಿಷನ್ ಕಮ್ ಸೇಲ್ ಇದೀಗ ನಮ್ಮ ಕುಂದಾಪುರದಲ್ಲಿ ನಡೆಯಲಿದೆ. ಕುಂದಾಪುರದ ಮಹಿಳೆಯರೇ ನಿಮಗೆ ಇಷ್ಟವಾಗುವಂತಹ ಸೀರೆಗಳನ್ನು ಸೇಲ್‌ನಲ್ಲಿ ಖರೀದಿಸಬಹುದು. ಈ ಅವಕಾಶ ಕೇವಲ ಮೂರು ದಿನಗಳು ಮಾತ್ರ. ಕೊಯಮುತ್ತೂರಿನ ಪಿಎಸ್ಆರ್ ಫ್ಯಾಕ್ಟ್ರಿಯಾ ಸೀರೆಗಳು ಇಲ್ಲಿ ಲಭ್ಯವಿದೆ. ತಪ್ಪದೇ ಭೇಟಿ ನೀಡಿ.ಮಾಹಿತಿಗಾಗಿ: 9150016573
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು ಯೋಜನೆಯಡಿ ಆಟೋಮೊಬೈಲ್ ವಿಭಾಗದಲ್ಲಿ ಅಭ್ಯಸಿಸುತ್ತಿರುವ ಒಂಬತ್ತನೇ ತರಗತಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಚಿಹ್ನೆಗಳ ಬಗ್ಗೆ ವಿಶೇಷ ಅತಿಥಿ ಉಪನ್ಯಾಸ ಏರ್ಪಡಿಸಲಾಗಿತ್ತು. ಈ ಸಂದರ್ಭ ಕುಂದಾಪುರ ಸಂಚಾರ ಠಾಣೆಯ ಉಪನಿರೀಕ್ಷಕರಾದ ಅನೂಪ್ ನಾಯಕ್ ಹಾಗೂ ಸುಧಾ ಪ್ರಭು ಮತ್ತು ಎಎಸ್‌ಐ ನರೇಶ್ ಕೋಟ್ಯಾನ್ ಸಂಚಾರಿ ನಿಯಮಗಳ ಬಗ್ಗೆ ಉಪಯುಕ್ತ ಮಾಹಿತಿ ಹಂಚಿಕೊಂಡರು. ಸಂಸ್ಥೆಯ ಉಪ ಪ್ರಾಂಶುಪಾಲರಾದ ಕೆ. ಕಿರಣ್ ಹೆಗ್ಡೆ, ಆಟೋಮೊಬೈಲ್ ತರಬೇತುದಾರ ಅರುಣ್ ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ರಾಹಕರಿಗೆ ಸಿ.ಎನ್.ಜಿ ಗ್ಯಾಸ್ ವಿತರಣಾ ಕೇಂದ್ರಗಳಲ್ಲಿ ವಾಹನಗಳು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಉಂಟಾಗಿದೆ. ಈ ಸಮಸ್ಯೆಯನ್ನು ಕೂಡಲೇ ಪರಿಹರಿಸಿ ಸುಗಮವಾಗಿ ಗ್ಯಾಸ್ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿ.ಎನ್.ಜಿ ಗ್ಯಾಸ್ ಸರಬರಾಜಿನಲ್ಲಿ ಉಂಟಾಗುವ ಸಮಸ್ಯೆಯನ್ನು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಿ.ಎನ್. ಜಿ ಗ್ಯಾಸ್ ಬಳಸಿ ವಾಹನ ಚಾಲನೆ ಮಾಡುತ್ತಿರುವ ಆಟೋ ಚಾಲಕರು ಸೇರಿದಂತೆ ಮತ್ತಿತರರ ವಾಹನಗಳಿಗೆ ಗ್ಯಾಸ್ ತುಂಬಿಸಲು ಬಂಕ್ ಗಳ ಮುಂದೆ ಎರಡು-ಮೂರು ಗಂಟೆಗಿಂತ ಹೆಚ್ಚು ಕಾಲ ಕಾಯುವ ಪರಿಸ್ಥಿತಿ ಉಂಟಾಗಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದೆ. ಇದನ್ನು ಕೂಡಲೇ ಗೈಲ್ ಗ್ಯಾಸ್ ಕಂಪನಿ ಹಾಗೂ ಅದಾನಿ ಕಂಪನಿಯವರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ ಗ್ಯಾಸ್ ವಿತರಣೆಯಲ್ಲಿ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ…
